ನಾವು ಗೆದ್ವಿ… ಕುಣಿದು ಕುಪ್ಪಳಿಸಿದ LSG ಓನರ್ ಸಂಜೀವ್ ಗೊಯೆಂಕಾ: ವಿಡಿಯೋ ವೀಕ್ಷಿಸಿ
IPL 2025 RR vs LSG: ಐಪಿಎಲ್ನ 36ನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ಲಕ್ನೋ ಸೂಪರ್ ಜೈಂಟ್ಸ್ ತಂಡ 2 ರನ್ಗಳ ರೋಚಕ ಗೆಲುವು ದಾಖಲಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಎಲ್ಎಸ್ಜಿ 180 ರನ್ ಕಲೆಹಾಕಿದರೆ, ಆರ್ಆರ್ ತಂಡ 20 ಓವರ್ಗಳಲ್ಲಿ 178 ರನ್ ಮಾತ್ರ ಕಲೆಹಾಕಿತು.
IPL 2025: ಐಪಿಎಲ್ನ 36ನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ಲಕ್ನೋ ಸೂಪರ್ ಜೈಂಟ್ಸ್ ತಂಡ ರೋಚಕ ಜಯ ಸಾಧಿಸಿದೆ. ಜೈಪುರದ ಸವಾಯಿ ಮಾನ್ಸಿಂಗ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಲಕ್ನೋ ಸೂಪರ್ ಜೈಂಟ್ಸ್ ತಂಡವು 20 ಓವರ್ಗಳಲ್ಲಿ 180 ರನ್ ಕಲೆಹಾಕಿತು.
ಈ ಗುರಿಯನ್ನು ಬೆನ್ನತ್ತಿದ ರಾಜಸ್ಥಾನ್ ರಾಐಲ್ಸ್ ತಂಡವು 19 ಓವರ್ಗಳಲ್ಲಿ 172 ರನ್ ಕಲೆಹಾಕಿತ್ತು. ಕೊನೆಯ ಓವರ್ನಲ್ಲಿ ಆರ್ಆರ್ ಪಡೆಗೆ ಕೇವಲ 9 ರನ್ಗಳ ಅವಶ್ಯಕತೆಯಿತ್ತು. ಈ ಹಂತದಲ್ಲಿ ಬಿಗಿ ದಾಳಿ ಸಂಘಟಿಸಿದ ಅವೇಶ್ ಖಾನ್ ಕೇವಲ 6 ರನ್ ನೀಡಿ ಲಕ್ನೋ ಸೂಪರ್ ಜೈಂಟ್ಸ್ ತಂಡಕ್ಕೆ 2 ರನ್ಗಳ ರೋಚಕ ಗೆಲುವು ತಂದುಕೊಟ್ಟರು.
ಇತ್ತ ರಣರೋಚಕ ಹೋರಾಟದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡ ಗೆಲ್ಲುತ್ತಿದ್ದಂತೆ ಅತ್ತ LSG ತಂಡದ ಮಾಲೀಕರಾದ ಸಂಜೀವ್ ಗೊಯೆಂಕಾ ಸ್ಟೇಡಿಯಂನಲ್ಲಿ ಕುಣಿದು ಕುಪ್ಪಳಿಸಿದರು. ಈ ವಿಡಿಯೋ ಇದೀಗ ವೈರಲ್ ಆಗಿದ್ದು, ಗೊಯೆಂಕಾ ಅವರ ಕ್ರಿಕೆಟ್ ಪ್ರೀತಿಗೆ ಭಾರೀ ಮೆಚ್ಚುಗೆಗಳು ವ್ಯಕ್ತವಾಗುತ್ತಿದೆ.