VIDEO: ಆಂಬ್ಯುಲೆನ್ಸ್ಗೆ ಕರೆ ಮಾಡಿ, ಆದರೆ ಅದು ನನಗಲ್ಲ..!
IPL 2025 Gujarat Titans vs Punjab Kings: ಇಂಡಿಯನ್ ಪ್ರೀಮಿಯರ್ ಲೀಗ್ನ 5ನೇ ಪಂದ್ಯದಲ್ಲಿ ರೋಚಕ ಜಯ ಸಾಧಿಸಿ ಪಂಜಾಬ್ ಕಿಂಗ್ಸ್ ತಂಡ ಶುಭಾರಂಭ ಮಾಡಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಂಜಾಬ್ ಕಿಂಗ್ಸ್ 243 ರನ್ ಕಲೆಹಾಕಿದರೆ, ಈ ಗುರಿಯನ್ನು ಬೆನ್ನತ್ತಿದ ಗುಜರಾತ್ ಟೈಟಾನ್ಸ್ ತಂಡವು 232 ರನ್ ಕಲೆಹಾಕಿತು.
IPL 2025: ಇಂಡಿಯನ್ ಪ್ರೀಮಿಯರ್ ಲೀಗ್ನ 5ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡದ ನಾಯಕ ಶ್ರೇಯಸ್ ಅಯ್ಯರ್ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ. ಅಹದಾಬಾದ್ನಲ್ಲಿ ನಡೆದ ಗುಜರಾತ್ ಟೈಟಾನ್ಸ್ ವಿರುದ್ಧದ ಈ ಪಂದ್ಯದಲ್ಲಿ ಟಾಸ್ ಸೋತರೂ ಮೊದಲು ಬ್ಯಾಟ್ ಮಾಡುವ ಅವಕಾಶ ಪಡೆದ ಪಂಜಾಬ್ ಪರ ಶ್ರೇಯಸ್ ಅಯ್ಯರ್ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದಿದ್ದರು.
ಆರಂಭದಿಂದಲೇ ಬಿರುಸಿನ ಬ್ಯಾಟಿಂಗ್ಗೆ ಒತ್ತು ನೀಡಿದ ಅಯ್ಯರ್ 27 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಅಲ್ಲದೆ ಅಂತಿಮ ಓವರ್ಗಳ ವೇಳೆ ಸಿಡಿಲಬ್ಬರ ಪ್ರದರ್ಶಿಸಿದರು. ಅದರಲ್ಲೂ ಗುಜರಾತ್ ಟೈಟಾನ್ಸ್ ವೇಗಿ ಪ್ರಸಿದ್ಧ್ ಕೃಷ್ಣ ಎಸೆದ 17ನೇ ಓವರ್ನ ಮೊದಲ ಎಸೆತವು ಶ್ರೇಯಸ್ ಅಯ್ಯರ್ ಅವರ ಪೆಕ್ಕೆಲುಬು ಭಾಗಕ್ಕೆ ತಾಗಿತು. ಈ ನೋವಿನಿಂದ ಅಯ್ಯರ್ ಕೆಲ ಹೊತ್ತು ಒದ್ದಾಡಿದರು.
ಆದರೆ ಬಳಿಕ ಬ್ಯಾಟಿಂಗ್ ಮುಂದುವರೆಸಿದ ಶ್ರೇಯಸ್ ಅಯ್ಯರ್ 6, 4, 6, 6 ಸಿಕ್ಸ್ನೊಂದಿಗೆ ಒಟ್ಟು 24 ರನ್ ಚಚ್ಚಿದರು. ಈ ಮೂಲಕ ಪ್ರಸಿದ್ಧ್ ಕೃಷ್ಣಗೆ ಬ್ಯಾಟ್ ಮೂಲಕವೇ ಉತ್ತರ ನೀಡಿದ್ದಾರೆ.
ಇದೀಗ ನೋವಿನ ನಡುವೆ ಅಜೇಯ 97 ರನ್ ಬಾರಿಸಿದ ಶ್ರೇಯಸ್ ಅಯ್ಯರ್ ಅವರ ಈ ನಿರ್ಭೀತ ಬ್ಯಾಟಿಂಗ್ ಅನ್ನು “Call an ambulance, not for me” (ಆಂಬ್ಯುಲೆನ್ಸ್ಗೆ ಕರೆ ಮಾಡಿ, ಆದರೆ ಅದು ನನಗಲ್ಲ) ಎಂಬ ಮೂವಿ ಡೈಲಾಗ್ ಮೀಮ್ನೊಂದಿಗೆ ಪಂಜಾಬ್ ಕಿಂಗ್ಸ್ ಫ್ರಾಂಚೈಸಿ ತನ್ನ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ವೊಂದನ್ನು ಹಂಚಿಕೊಂಡಿದೆ.