VIDEO: ಚೆಂಡು ಎಲ್ಲಿ? ಕಣ್ಮುಂದೆ ಬಾಲ್ ಇದ್ದರೂ, ಹುಡುಕಾಡಿದ ಇಶಾನ್ ಕಿಶನ್
IPL 2025 SRH vs PBKS: ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಂಜಾಬ್ ಕಿಂಗ್ಸ್ 245 ರನ್ ಕಲೆಹಾಕಿದರೆ, ಈ ಕಠಿಣ ಗುರಿಯನ್ನು ಸನ್ರೈಸರ್ಸ್ ಹೈದರಾಬಾದ್ ತಂಡವು 18.3 ಓವರ್ಗಳಲ್ಲಿ ಚೇಸ್ ಮಾಡಿದೆ. ಈ ಮೂಲಕ ಸನ್ರೈಸರ್ಸ್ ಹೈದರಾಬಾದ್ ತಂಡವು 8 ವಿಕೆಟ್ಗಳ ಭರ್ಜರಿ ಜಯ ಸಾಧಿಸಿದೆ.
IPL 2025: ಇಂಡಿಯನ್ ಪ್ರೀಮಿಯರ್ ಲೀಗ್ನ 27ನೇ ಪಂದ್ಯದ ವೇಳೆ ಸ್ವಾರಸ್ಯಕರ ಘಟನೆಯೊಂದು ನಡೆದಿದೆ. ಹೈದರಾಬಾದ್ನ ರಾಜೀವ್ ಗಾಂಧಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಸನ್ರೈಸರ್ಸ್ ಹೈದರಾಬಾದ್ (SRH) ಮತ್ತು ಪಂಜಾಬ್ ಕಿಂಗ್ಸ್ (PBKS) ಮುಖಾಮುಖಿಯಾಗಿತ್ತು. ಇನ್ನು ಈ ಮ್ಯಾಚ್ನಲ್ಲಿ ಟಾಸ್ ಗೆದ್ದ ಪಂಜಾಬ್ ಕಿಂಗ್ಸ್ ತಂಡ ಬ್ಯಾಟಿಂಗ್ ಆಯ್ದುಕೊಂಡಿದ್ದರು.
ಪಂಜಾಬ್ ಕಿಂಗ್ಸ್ ಇನಿಂಗ್ಸ್ ವೇಳೆ ಆರಂಭಿಕ ಆಟಗಾರ ಪ್ರಭ್ಸಿಮ್ರಾನ್ ಬಾರಿಸಿದ ಸ್ಟ್ರೈಟ್ ಹಿಟ್ ಅನ್ನು ಇಶಾನ್ ಕಿಶನ್ ಓಡಿ ಹೋಗಿ ತಡೆದಿದ್ದರು. ಆದರೆ ಚೆಂಡು ತಡೆದ ಬಳಿಕ ಅವರು ಬಾಲ್ಗಾಗಿ ಹುಡುಕಾಡಿದ್ದು ವಿಶೇಷವಾಗಿತ್ತು. ಚೆಂಡು ಜಾಹೀರಾತು ಬರಹಗಳ ಮೇಲೆ ನಿಂತಿದ್ದರಿಂದ ಇಶಾನ್ ಕಿಶನ್ಗೆ ವೈಟ್ ಬಾಲ್ ಗೋಚರಿಸಲಿಲ್ಲ.
ಅಲ್ಲದೆ ಚೆಂಡು ಎಲ್ಲಿ ಎಂದು ಹುಡುಕಾಡುತ್ತಿರುವುದನ್ನು ಗಮನಿಸಿದ ನಾಯಕ ಪ್ಯಾಟ್ ಕಮಿನ್ಸ್ ಓಡಿ ಬಂದು ಬಾಲ್ ಅನ್ನು ಎತ್ತಿಕೊಂಡಿದ್ದಾರೆ. ಇದೀಗ ಈ ಫನ್ನಿ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ.
ಇನ್ನು ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಂಜಾಬ್ ಕಿಂಗ್ಸ್ ತಂಡವು 20 ಓವರ್ಗಳಲ್ಲಿ 6 ವಿಕೆಟ್ ಕಳೆದುಕೊಂಡು 245 ರನ್ ಕಲೆಹಾಕಿತು. ಈ ಕಠಿಣ ಗುರಿಯನ್ನು ಬೆನ್ನತ್ತಿದ ಸನ್ರೈಸರ್ಸ್ ಹೈದರಾಬಾದ್ ತಂಡವು 18.3 ಓವರ್ಗಳಲ್ಲಿ 247 ರನ್ ಬಾರಿಸಿ 8 ವಿಕೆಟ್ಗಳ ಭರ್ಜರಿ ಜಯ ಸಾಧಿಸಿದೆ.

ಯುಎಸ್ ಉಪಾಧ್ಯಕ್ಷ ಜೆಡಿ. ವ್ಯಾನ್ಸ್ ಕುಟುಂಬಕ್ಕೆ ಶಾಸ್ತ್ರೀಯ ನೃತ್ಯದ ಸ್ವಾಗತ

VIDEO: ಮೊದಲು ಕಿತ್ತಾಟ... ಆಮೇಲೆ ಸ್ನೇಹಹಸ್ತ: ಇದು ವಿರಾಟ್ ಕೊಹ್ಲಿ

ಹುಲಿಯನ್ನೇ ಅಟ್ಟಾಡಿಸಿದ ಒಂಟಿ ಸಲಗ: ಅಪರೂಪದ ವಿಡಿಯೋ ವೈರಲ್

‘ನಾನು ಶಿವನ ಭಕ್ತ, ಅದಕ್ಕಾಗಿ ಇಲ್ಲಿಗೆ ಬಂದೆ’; ಮಹಾಕಾಳೇಶ್ವರ ದೇವಾಲಯ ಭೇಟಿ
