VIDEO: ಪ್ರಶಸ್ತಿ ಸ್ವೀಕರಿಸಲು ಕೊಡೆ ಹಿಡಿದು ಬಂದ ಸೂರ್ಯಕುಮಾರ್ ಯಾದವ್

Updated on: May 22, 2025 | 10:31 AM

IPL 2025 MI vs DC: ಇಂಡಿಯನ್ ಪ್ರೀಮಿಯರ್ ಲೀಗ್​ನ (ಐಪಿಎಲ್ 2025) 63ನೇ ಪಂದ್ಯದಲ್ಲಿ ಮೊದಲ ಬ್ಯಾಟ್ ಮಾಡಿದ ಮುಂಬೈ ಇಂಡಿಯನ್ಸ್ ತಂಡವು 20 ಓವರ್​ಗಳಲ್ಲಿ 180 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಡೆಲ್ಲಿ ಕ್ಯಾಪಿಟಲ್ಸ್ ತಂಡವು 18.2 ಓವರ್​ಗಳಲ್ಲಿ 121 ರನ್​ಗ:ಳಿಸಿ 59 ರನ್​ಗಳಿಂದ ಸೋಲೊಪ್ಪಿಕೊಂಡಿದೆ.

ಇಂಡಿಯನ್ ಪ್ರೀಮಿಯರ್ ಲೀಗ್​ನ 63ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ ತಂಡ ಗೆಲುವು ದಾಖಲಿಸಿದೆ. ಈ ಗೆಲುವಿನ ರೂವಾರಿ ಸೂರ್ಯಕುಮಾರ್ ಯಾದವ್. ಈ ಪಂದ್ಯದಲ್ಲಿ 4ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಸೂರ್ಯಕುಮಾರ್ ಯಾದವ್ 43 ಎಸೆತಗಳಲ್ಲಿ 4 ಸಿಕ್ಸ್ ಹಾಗೂ 7 ಫೋರ್​ಗಳೊಂದಿಗೆ ಅಜೇಯ 73 ರನ್ ಬಾರಿಸಿದ್ದರು. ಈ ಸ್ಪೋಟಕ ಅರ್ಧಶತಕದ ನೆರವಿನೊಂದಿಗೆ ಮುಂಬೈ ಇಂಡಿಯನ್ಸ್ ತಂಡವು 20 ಓವರ್​ಗಳಲ್ಲಿ 180 ರನ್ ಕಲೆಹಾಕಿತು.

ಈ ಗುರಿಯನ್ನು ಬೆನ್ನತ್ತಿದ ಡೆಲ್ಲಿ ಕ್ಯಾಪಿಟಲ್ಸ್ ತಂಡವು 18.2 ಓವರ್​ಗಳಲ್ಲಿ 121 ರನ್​ಗಳಿಸಿ ಆಲೌಟ್ ಆಗಿದೆ. ಈ ಮೂಲಕ ಮುಂಬೈ ಇಂಡಿಯನ್ಸ್ ತಂಡವು 59 ರನ್​ಗಳ ಜಯ ಸಾಧಿಸಿ ಪ್ಲೇಆಪ್​​ಗೇರಿದೆ. ಈ ಪಂದ್ಯದ ಬಳಿಕ ನಡೆದ ಪ್ರಶಸ್ತಿ ಸಮಾರಂಭದ ವೇಳೆ ಮಳೆ ಬರಲಾರಂಭಿಸಿತು. ಇತ್ತ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆಯಲು ಸೂರ್ಯಕುಮಾರ್ ಯಾದವ್ ಕೊಡೆ ಹಿಡಿದು ಬಂದು ಎಲ್ಲರ ಗಮನ ಸೆಳೆದರು. ಇದೀಗ ಈ ವಿಡಿಯೋ ವೈರಲ್ ಆಗಿದೆ.

ಇನ್ನು ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದು ಮಾತನಾಡಿದ ಸೂರ್ಯಕುಮಾರ್ ಯಾದವ್,  ಈ ಪಂದ್ಯಕ್ಕೂ ಮುನ್ನ ನನ್ನ ಹೆಂಡ್ತಿ ವಿಷಯ ಹೇಳಿದ್ದಳು. ಈಗಾಗಲೇ 13 ಪಂದ್ಯಗಳು ಮುಗಿದಿವೆ. ನಿಮಗೆ ಎಲ್ಲಾ ಪ್ರಶಸ್ತಿಗಳು ಸಿಕ್ಕಿವೆ. ಆದರೆ ಈವರೆಗೆ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದಿದಲ್ಲ ಎಂದು ನೆನಪಿಸಿದ್ದಳು. ಹೀಗಾಗಿ ಇಂದಿನ ಪಂದ್ಯ ಶ್ರೇಷ್ಠ ಪ್ರಶಸ್ತಿ ನನಗೆ ತುಂಬಾ ವಿಶೇಷವಾದದ್ದು. ತಂಡದ ದೃಷ್ಟಿಕೋನದಿಂದ ಈ ಇನ್ನಿಂಗ್ಸ್ ಮುಖ್ಯವಾಗಿತ್ತು, ಈ ಪ್ರಶಸ್ತಿ ಅವಳಿಗಾಗಿ (ಹೆಂಡ್ತಿಗೆ) ಎಂದು ಸೂರ್ಯಕುಮಾರ್ ಯಾದವ್ ಹೇಳಿದರು.