IPL 2025: ಮೂವರ ಜಗಳ… ಮೈದಾನದಲ್ಲೇ ಕಿತ್ತಾಡಿಕೊಂಡ ಆಸ್ಟ್ರೇಲಿಯಾ ಆಟಗಾರರು
IPL 2025 SRH vs PBKS: ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಂಜಾಬ್ ಕಿಂಗ್ಸ್ ತಂಡವು 20 ಓವರ್ಗಳಲ್ಲಿ 6 ವಿಕೆಟ್ ಕಳೆದುಕೊಂಡು 245 ರನ್ ಕಲೆಹಾಕಿತು. ಈ ಕಠಿಣ ಗುರಿಯನ್ನು ಬೆನ್ನತ್ತಿದ ಸನ್ರೈಸರ್ಸ್ ಹೈದರಾಬಾದ್ ತಂಡವು 18.3 ಓವರ್ಗಳಲ್ಲಿ 247 ರನ್ ಬಾರಿಸಿ 8 ವಿಕೆಟ್ಗಳ ಜಯ ಸಾಧಿಸಿದೆ.
IPL 2025: ಇಂಡಿಯನ್ ಪ್ರೀಮಿಯರ್ ಲೀಗ್ನ 27ನೇ ಪಂದ್ಯದಲ್ಲಿ ಆಸ್ಟ್ರೇಲಿಯಾ ಆಟಗಾರರು ಕಿತ್ತಾಡಿಕೊಂಡ ಘಟನೆ ನಡೆದಿದೆ. ಹೈದರಾಬಾದ್ನ ರಾಜೀವ್ ಗಾಂಧಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಸನ್ರೈಸರ್ಸ್ ಹೈದರಾಬಾದ್ (SRH) ಹಾಗೂ ಪಂಜಾಬ್ ಕಿಂಗ್ಸ್ (PBKS) ತಂಡಗಳು ಮುಖಾಮುಖಿಯಾಗಿದ್ದವು. ಈ ಮ್ಯಾಚ್ನಲ್ಲಿ ಮೊದಲು ಬ್ಯಾಟ್ ಮಾಡಿದ ಪಂಜಾಬ್ ಕಿಂಗ್ಸ್ ತಂಡವು 20 ಓವರ್ಗಳಲ್ಲಿ 6 ವಿಕೆಟ್ ಕಳೆದುಕೊಂಡು 245 ರನ್ ಕಲೆಹಾಕಿತು.
ಈ ಗುರಿಯನ್ನು ಬೆನ್ನತ್ತಿದ ಸನ್ರೈಸರ್ಸ್ ಹೈದರಾಬಾದ್ ತಂಡಕ್ಕೆ ಟ್ರಾವಿಸ್ ಹೆಡ್ ಹಾಗೂ ಅಭಿಷೇಕ್ ಶರ್ಮಾ ಸ್ಪೋಟಕ ಆರಂಭ ಒದಗಿಸಿದ್ದರು. ಈ ಸ್ಪೋಟಕ ಬ್ಯಾಟಿಂಗ್ನಿಂದ ಪಂಜಾಬ್ ಕಿಂಗ್ಸ್ ಬೌಲರ್ಗಳು ವಿಚಲಿತರಾಗಿದ್ದರು. ಅದರಲ್ಲೂ 9ನೇ ಓವರ್ ಎಸೆದ ಗ್ಲೆನ್ ಮ್ಯಾಕ್ಸ್ವೆಲ್, ಟ್ರಾವಿಸ್ ಹೆಡ್ ಅವರನ್ನು ಗುರಿಯಾಗಿಸಿ ಚೆಂಡನ್ನು ವಿಕೆಟ್ಗೆ ಥ್ರೋ ಮಾಡಿದ್ದರು.
ಇದರಿಂದ ಕೋಪಗೊಂಡ ಟ್ರಾವಿಸ್ ಹೆಡ್ ಗ್ಲೆನ್ ಮ್ಯಾಕ್ಸ್ವೆಲ್ ಜೊತೆ ವಾಕ್ಸಮರಕ್ಕೆ ಇಳಿದಿದ್ದಾರೆ. ಇಬ್ಬರು ಆಸ್ಟ್ರೇಲಿಯಾ ಆಟಗಾರರ ನಡುವಣ ವಾಗ್ವಾದ ತಾರಕ್ಕೇರುತ್ತಿದ್ದಂತೆ ಪಂಜಾಬ್ ಕಿಂಗ್ಸ್ ತಂಡದಲ್ಲಿರುವ ಮತ್ತೋರ್ವ ಆಸೀಸ್ ಕ್ರಿಕೆಟಿಗ ಮಾರ್ಕಸ್ ಸ್ಟೋಯಿನಿಸ್ ಎಂಟ್ರಿ ಕೊಟ್ಟಿದ್ದಾರೆ.
ಸ್ಟೋಯಿನಿಸ್ ನೇರವಾಗಿ ಬಂದು ಟ್ರಾವಿಸ್ ಹೆಡ್ ಜೊತೆ ಅದೇನೊ ಗೊಣಗಿದ್ದಾರೆ. ಅಷ್ಟರಲ್ಲಾಗಲೇ ಅಂಪೈರ್ ಮಧ್ಯ ಪ್ರವೇಶಿಸಿ ಪರಿಸ್ಥಿತಿಯನ್ನು ತಿಳಿಗೊಳಿಸಿದರು. ಇದೀಗ ಮೂವರು ಆಸ್ಟ್ರೇಲಿಯಾ ಆಟಗಾರರ ನಡುವಣ ಜಗಳದ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಇನ್ನು ಈ ಪಂದ್ಯದಲ್ಲಿ 245 ರನ್ಗಳ ಕಠಿಣ ಗುರಿಯನ್ನು ಬೆನ್ನತ್ತಿದ ಸನ್ರೈಸರ್ಸ್ ಹೈದರಾಬಾದ್ ತಂಡವು 18.3 ಓವರ್ಗಳಲ್ಲಿ 247 ರನ್ ಬಾರಿಸಿ 8 ವಿಕೆಟ್ಗಳ ಅಮೋಘ ಗೆಲುವು ದಾಖಲಿಸಿದೆ.