VIDEO: ದುಃಖ ದುಮ್ಮಾನ… ಮೈದಾನದಲ್ಲೇ ಕಣ್ಣೀರಿಟ್ಟ ವೈಭವ್ ಸೂರ್ಯವಂಶಿ
IPL 2025 RR vs LSG: ಐಪಿಎಲ್ನ 36ನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ಲಕ್ನೋ ಸೂಪರ್ ಜೈಂಟ್ಸ್ ತಂಡ 2 ರನ್ಗಳ ರೋಚಕ ಗೆಲುವು ದಾಖಲಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಎಲ್ಎಸ್ಜಿ 180 ರನ್ ಕಲೆಹಾಕಿದರೆ, ಆರ್ಆರ್ ತಂಡ 20 ಓವರ್ಗಳಲ್ಲಿ 178 ರನ್ ಮಾತ್ರ ಕಲೆಹಾಕಿತು.
IPL 2025: ಇಂಡಿಯನ್ ಪ್ರೀಮಿಯರ್ ಲೀಗ್ನ 36ನೇ ಪಂದ್ಯದಲ್ಲಿ 14 ವರ್ಷದ ವೈಭವ್ ಸೂರ್ಯವಂಶಿ (Vaibhav Suryavanshi) ಪಾದಾರ್ಪಣೆ ಮಾಡಿದ್ದಾರೆ. ಜೈಪುರದ ಸವಾಯಿ ಮಾನ್ಸಿಂಗ್ ಸ್ಟೇಡಿಯಂನಲ್ಲಿ ನಡೆದ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ವೈಭವ್ ಐಪಿಎಲ್ ಆಡಿದ ಅತ್ಯಂತ ಕಿರಿಯ ಆಟಗಾರ ಎನಿಸಿಕೊಂಡಿದ್ದಾರೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಲಕ್ನೋ ಸೂಪರ್ ಜೈಂಟ್ಸ್ ತಂಡವು 20 ಓವರ್ಗಳಲ್ಲಿ 180 ರನ್ ಕಲೆಹಾಕಿತು.
ಈ ಗುರಿಯನ್ನು ಬೆನ್ನತ್ತಿದ ರಾಜಸ್ಥಾನ್ ರಾಯಲ್ಸ್ ಪರ ವೈಭವ್ ಸೂರ್ಯವಂಶಿ ಹಾಗೂ ಯಶಸ್ವಿ ಜೈಸ್ವಾಲ್ ಆರಂಭಿಕರಾಗಿ ಕಣಕ್ಕಿಳಿದಿದ್ದರು. ವಿಶೇಷ ಎಂದರೆ ಐಪಿಎಲ್ನಲ್ಲಿ ತಾನೆದುರಿಸಿದ ಮೊದಲ ಎಸೆತದಲ್ಲೇ ವೈಭವ್ ಸಿಕ್ಸರ್ ಸಿಡಿಸಿದರು. ಈ ಸಿಕ್ಸ್ನೊಂದಿಗೆ ಶುಭಾರಂಭ ಮಾಡಿದ ವೈಭವ್ ಆ ಬಳಿಕ 20 ಎಸೆತಗಳಲ್ಲಿ 3 ಸಿಕ್ಸ್ ಹಾಗೂ 2 ಫೋರ್ಗಳೊಂದಿಗೆ 34 ರನ್ ಬಾರಿಸಿದರು.
ಆದರೆ 9ನೇ ಓವರ್ನ 4ನೇ ಎಸೆತದಲ್ಲಿ ಸ್ಟಂಪ್ ಔಟ್ ಆಗುವ ಮೂಲಕ ವೈಭವ್ ಸೂರ್ಯವಂಶಿ ಇನಿಂಗ್ಸ್ ಅಂತ್ಯಗೊಳಿಸಿದರು. ತನ್ನದೇ ತಪ್ಪಿನಿಂದಾಗಿ ಔಟಾಗಿದಕ್ಕೆ ಯುವ ದಾಂಡಿಗ ಕಣ್ಣೀರಿಡುತ್ತಾ ಪೆವಿಲಿಯನ್ನತ್ತ ಹೆಜ್ಜೆ ಹಾಕಿದರು. ಇದೀಗ ವೈಭವ್ ಸೂರ್ಯವಂಶಿಯ ಕಣ್ಣೀರಿನ ವಿಡಿಯೋ ವೈರಲ್ ಆಗಿದೆ.
ಇನ್ನು ಈ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ನೀಡಿದ 180 ರನ್ಗಳ ಗುರಿಯನ್ನು ಬೆನ್ನತ್ತಿದ ರಾಜಸ್ಥಾನ್ ರಾಯಲ್ಸ್ ತಂಡ 20 ಓವರ್ಗಳಲ್ಲಿ 178 ರನ್ಗಳಿಸಲಷ್ಟೇ ಶಕ್ತರಾಗಿದ್ದಾರೆ. ಈ ಮೂಲಕ 2 ರನ್ಗಳಿಂದ ಸೋಲೊಪ್ಪಿಕೊಂಡಿದೆ.