VIDEO: ಧೋನಿಯ ಪಾದಗಳನ್ನು ಮುಟ್ಟಿ ಆಶೀರ್ವಾದ ಪಡೆದ ಯುವ ಆಟಗಾರ

Updated on: May 21, 2025 | 7:28 AM

Chennai Super Kings vs Rajasthan Royals: ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್ ತಂಡವು 20 ಓವರ್​ಗಳಲ್ಲಿ 8 ವಿಕೆಟ್ ಕಳೆದುಕೊಂಡು 187 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ರಾಜಸ್ಥಾನ್ ರಾಯಲ್ಸ್ ತಂಡವು 17.1 ಓವರ್​ಗಳಲ್ಲಿ 4 ವಿಕೆಟ್ ಕಳೆದುಕೊಂಡು 188 ರನ್ ಬಾರಿಸಿ ಜಯ ಸಾಧಿಸಿದೆ.

ಇಂಡಿಯನ್ ಪ್ರೀಮಿಯರ್ ಲೀಗ್​ನ 62ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ತಂಡ ಜಯ ಸಾಧಿಸಿದೆ. ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದ ಬಳಿಕ ಯುವ ದಾಂಡಿಗ ವೈಭವ್ ಸೂರ್ಯವಂಶಿ, ಸಿಎಸ್​ಕೆ ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿಯ ಆಶೀರ್ವಾದವನ್ನು ಪಡೆದರು.

ಈ ಪಂದ್ಯದ ಬಳಿಕ ಎರಡೂ ತಂಡಗಳ ಆಟಗಾರರು ಪರಸ್ಪರ ಹಸ್ತಲಾಘವ ಮಾಡುತ್ತಿದ್ದರು. ಈ ವೇಳೆ ವೈಭವ್ ಸೂರ್ಯವಂಶಿ ಧೋನಿ ಅವರ ಪಾದಗಳನ್ನು ಮುಟ್ಟಿ ನಮಸ್ಕರಿಸಿದರು. ಇದೇ ವೇಳೆ ಧೋನಿ ಯುವ ಆಟಗಾರನ ಬೆನ್ನು ತಟ್ಟಿದರು. ಇದೀಗ ಲೆಜೆಂಡ್ ಆಟಗಾರನಿಗೆ ಯುವ ಆಟಗಾರ ನೀಡಿದ ಗೌರವದ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಇನ್ನು ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್ ತಂಡವು 20 ಓವರ್​ಗಳಲ್ಲಿ 8 ವಿಕೆಟ್ ಕಳೆದುಕೊಂಡು 187 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ರಾಜಸ್ಥಾನ್ ರಾಯಲ್ಸ್ ತಂಡವು 17.1 ಓವರ್​ಗಳಲ್ಲಿ 4 ವಿಕೆಟ್ ಕಳೆದುಕೊಂಡು 188 ರನ್ ಬಾರಿಸಿ 6 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ.

 

 

 

Published on: May 21, 2025 07:25 AM