AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೈಭವ್ ಶತಕ ಸಿಡಿಸಿದ ಕೂಡಲೇ ಮಕ್ಕಳಂತೆ ಕುಣಿದು ಕುಪ್ಪಳಿಸಿದ ದ್ರಾವಿಡ್; ವಿಡಿಯೋ ನೋಡಿ

ವೈಭವ್ ಶತಕ ಸಿಡಿಸಿದ ಕೂಡಲೇ ಮಕ್ಕಳಂತೆ ಕುಣಿದು ಕುಪ್ಪಳಿಸಿದ ದ್ರಾವಿಡ್; ವಿಡಿಯೋ ನೋಡಿ

ಪೃಥ್ವಿಶಂಕರ
|

Updated on:Apr 28, 2025 | 11:38 PM

Rahul Dravid's Cold Celebration: 14 ವರ್ಷದ ವೈಭವ್ ಸೂರ್ಯವಂಶಿ ತಮ್ಮ ಚೊಚ್ಚಲ ಐಪಿಎಲ್ ಆವೃತ್ತಿಯಲ್ಲಿ ಅದ್ಭುತ ಪ್ರದರ್ಶನ ನೀಡಿದ್ದಾರೆ. ಕೇವಲ 38 ಎಸೆತಗಳಲ್ಲಿ 101 ರನ್ ಗಳಿಸಿ ಅತಿ ವೇಗದ ಶತಕ ಬಾರಿಸಿದ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಅವರ ಈ ಅದ್ಭುತ ಇನ್ನಿಂಗ್ಸ್‌ನಲ್ಲಿ ಏಳು ಬೌಂಡರಿ ಮತ್ತು 11 ಸಿಕ್ಸರ್‌ಗಳು ಸೇರಿದ್ದವು. ವೈಭವ್ ಶತಕ ಸಿಡಿಸುತ್ತಿದ್ದಂತೆ ತಂಡದ ಕೋಚ್ ರಾಹುಲ್ ದ್ರಾವಿಡ್ ಅವರ ಸಂಭ್ರಮದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಚೊಚ್ಚಲ ಐಪಿಎಲ್‌ನಲ್ಲಿ ತಾನು ಎದುರಿಸಿದ್ದ ಮೊದಲ ಎಸೆತವನ್ನೇ ಸಿಕ್ಸರ್​ ಬಾರಿಸಿ ಎಲ್ಲರಲ್ಲೂ ಅಚ್ಚರಿ ಮೂಡಿಸಿದ್ದ 14 ವರ್ಷದ ವೈಭವ್ ಸೂರ್ಯವಂಶಿ, ಇಂದು ನಡೆದ ರಾಜಸ್ಥಾನ್ ಹಾಗೂ ಗುಜರಾತ್ ನಡುವಿನ ಪಂದ್ಯದಲ್ಲಿ ವಿಶ್ವದಾಖಲೆ ಶತಕ ಸಿಡಿಸಿ ಇಡೀ ವಿಶ್ವ ಕ್ರಿಕೆಟ್​ನಲ್ಲಿ ಸದ್ದು ಮಾಡಿದ್ದಾರೆ. ಇಂದಿನ ಪಂದ್ಯದಲ್ಲಿ ತನ್ನ ವಯಸ್ಸಿಗೂ ಮೀರಿದ ಸಾಧನೆ ಮಾಡಿದ ವೈಭವ್ ತಮ್ಮ ಐಪಿಎಲ್ ವೃತ್ತಿಜೀವನದ ಮೊದಲ ಶತಕವನ್ನು ಕೇವಲ 35 ಎಸೆತಗಳಲ್ಲಿ ಪೂರೈಸಿದ ವೈಭವ್, ಅತಿ ವೇಗದ ಶತಕ ಬಾರಿಸಿದ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾದರು.

ಮಕ್ಕಳಂತೆ ಕುಣಿದು ಕುಪ್ಪಳಿಸಿದ ದ್ರಾವಿಡ್

ಅಂತಿಮವಾಗಿ ವೈಭವ್ ಸೂರ್ಯವಂಶಿ ಶತಕದ ಇನ್ನಿಂಗ್ಸ್ ಆಡಿದ ನಂತರ ಪ್ರಸಿದ್ಧ್ ಕೃಷ್ಣ ಓವರ್​ನಲ್ಲಿ ಔಟಾದರು. ಕೇವಲ 38 ಎಸೆತಗಳಲ್ಲಿ 265.78 ಸ್ಟ್ರೈಕ್ ರೇಟ್‌ನಲ್ಲಿ 101 ರನ್ ಬಾರಿಸಿದ ವೈಭವ್ ಬ್ಯಾಟ್‌ನಿಂದ ಏಳು ಬೌಂಡರಿ ಮತ್ತು 11 ಸಿಕ್ಸರ್‌ಗಳು ಸಿಡಿದವು. ವೈಭವ್ ಐತಿಹಾಸಿಕ ಶತಕ ಸಿಡಿಸುತ್ತಿದ್ದಂತೆ ಇಡೀ ಕ್ರೀಡಾಂಗಣವೇ ಎದ್ದು ನಿಂತು ಚಪ್ಪಾಳೆ ಥಟ್ಟುತ್ತಾ ಶುಭ ಹಾರೈಸಿತು. ಇತ್ತ ರಾಜಸ್ಥಾನ್ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಕೂಡ ಕಾಲು ಮುರಿದುಕೊಂಡಿದ್ದರೂ ಎದ್ದು ನಿಂತು, ಮಕ್ಕಳಂತೆ ಕುಣಿಯುತ್ತಾ ಸಂಭ್ರಮಿಸಿದರು. ಇದೀಗ ಅದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

Published on: Apr 28, 2025 11:36 PM