VIDEO: ಏಟಿಗೆ ಎದಿರೇಟು… ಆಕ್ರೋಶಭರಿತರಾಗಿ ಸಂಭ್ರಮಿಸಿದ ವಿರಾಟ್ ಕೊಹ್ಲಿ
IPL 2025 RCB vs DC: ಇಂಡಿಯನ್ ಪ್ರೀಮಿಯರ್ ಲೀಗ್ನ (ಐಪಿಎಲ್ 2025) 46ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ತಂಡವು 20 ಓವರ್ಗಳಲ್ಲಿ 162 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 18.3 ಓವರ್ಗಳಲ್ಲಿ ಗುರಿ ತಲುಪಿ 6 ವಿಕೆಟ್ಗಳ ಜಯ ಸಾಧಿಸಿದೆ.
IPL 2025: ಏಪ್ರಿಲ್ 10 ರಂದು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡಕ್ಕೆ ಸೋಲುಣಿಸಿ ಡೆಲ್ಲಿ ಕ್ಯಾಪಿಟಲ್ಸ್ (DC) ಭರ್ಜರಿಯಾಗಿ ಸಂಭ್ರಮಿಸಿತ್ತು. ಈ ಸಂಭ್ರಮಕ್ಕೆ ಎದಿರೇಟು ಎಂಬಂತೆ ಇದೀಗ ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಸೋಲುಣಿಸಿ ಆರ್ಸಿಬಿ ಸಂಭ್ರಮಿಸಿದೆ. ಈ ಸಂಭ್ರಮದ ನಡುವೆ ವಿರಾಟ್ ಕೊಹ್ಲಿ (Virat Kohli) ಆಕ್ರೋಶಭರಿತರಾಗಿ ಕಾಣಿಸಿಕೊಂಡರು.
ಆರ್ಸಿಬಿ ತಂಡವು ಗೆಲುವಿನ ಗುರಿ ಮುಟ್ಟುತ್ತಿದ್ದಂತೆ ಡಗೌಟ್ನಲ್ಲಿ ಕೂತಿದ್ದ ವಿರಾಟ್ ಕೊಹ್ಲಿ ಭರ್ಜರಿಯಾಗಿ ಸಂಭ್ರಮಿಸಿದರು. ಇದೀಗ ಕೊಹ್ಲಿಯ ಆಕ್ರೋಶಭರಿತ ಸಂಭ್ರಮದ ವಿಡಿಯೋ ವೈರಲ್ ಆಗಿದೆ.
ಇನ್ನು ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ತಂಡವು 20 ಓವರ್ಗಳಲ್ಲಿ 162 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 18.3 ಓವರ್ಗಳಲ್ಲಿ ಚೇಸ್ ಮಾಡಿ 6 ವಿಕೆಟ್ಗಳ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಆರ್ಸಿಬಿ ತಂಡವು ಅಂಕ ಪಟ್ಟಿಯಲ್ಲಿ ಮೊದಲ ಸ್ಥಾನಕ್ಕೇರಿದೆ.
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್-ಸಿಎಂ ಕಾಮಿಡಿ

