VIDEO: ಏಟಿಗೆ ಎದಿರೇಟು… ಆಕ್ರೋಶಭರಿತರಾಗಿ ಸಂಭ್ರಮಿಸಿದ ವಿರಾಟ್ ಕೊಹ್ಲಿ

Updated on: Apr 28, 2025 | 9:53 AM

IPL 2025 RCB vs DC: ಇಂಡಿಯನ್ ಪ್ರೀಮಿಯರ್ ಲೀಗ್​ನ (ಐಪಿಎಲ್ 2025) 46ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ತಂಡವು 20 ಓವರ್​ಗಳಲ್ಲಿ 162 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 18.3 ಓವರ್​ಗಳಲ್ಲಿ ಗುರಿ ತಲುಪಿ 6 ವಿಕೆಟ್​ಗಳ ಜಯ ಸಾಧಿಸಿದೆ.

IPL 2025: ಏಪ್ರಿಲ್ 10 ರಂದು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡಕ್ಕೆ ಸೋಲುಣಿಸಿ ಡೆಲ್ಲಿ ಕ್ಯಾಪಿಟಲ್ಸ್ (DC) ಭರ್ಜರಿಯಾಗಿ ಸಂಭ್ರಮಿಸಿತ್ತು. ಈ ಸಂಭ್ರಮಕ್ಕೆ ಎದಿರೇಟು ಎಂಬಂತೆ ಇದೀಗ ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಸೋಲುಣಿಸಿ ಆರ್​ಸಿಬಿ ಸಂಭ್ರಮಿಸಿದೆ. ಈ ಸಂಭ್ರಮದ ನಡುವೆ ವಿರಾಟ್ ಕೊಹ್ಲಿ (Virat Kohli) ಆಕ್ರೋಶಭರಿತರಾಗಿ ಕಾಣಿಸಿಕೊಂಡರು.

ಆರ್​ಸಿಬಿ ತಂಡವು ಗೆಲುವಿನ ಗುರಿ ಮುಟ್ಟುತ್ತಿದ್ದಂತೆ ಡಗೌಟ್​ನಲ್ಲಿ ಕೂತಿದ್ದ ವಿರಾಟ್ ಕೊಹ್ಲಿ ಭರ್ಜರಿಯಾಗಿ ಸಂಭ್ರಮಿಸಿದರು. ಇದೀಗ ಕೊಹ್ಲಿಯ ಆಕ್ರೋಶಭರಿತ ಸಂಭ್ರಮದ ವಿಡಿಯೋ ವೈರಲ್ ಆಗಿದೆ.

ಇನ್ನು ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ತಂಡವು 20 ಓವರ್​ಗಳಲ್ಲಿ 162 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 18.3 ಓವರ್​ಗಳಲ್ಲಿ ಚೇಸ್ ಮಾಡಿ 6 ವಿಕೆಟ್​ಗಳ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಆರ್​ಸಿಬಿ ತಂಡವು ಅಂಕ ಪಟ್ಟಿಯಲ್ಲಿ ಮೊದಲ ಸ್ಥಾನಕ್ಕೇರಿದೆ.

 

Follow Us
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More