ಫಿಲ್ ಸಾಲ್ಟ್ನ ಔಟ್ ಮಾಡಿದ ಬೌಲರ್ನ ಅಭಿನಂದಿಸಿದ ವಿರಾಟ್ ಕೊಹ್ಲಿ
IPL 2025 RCB vs RR: ಐಪಿಎಲ್ 2025ರ 28ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ರಾಜಸ್ಥಾನ್ ರಾಯಲ್ಸ್ ತಂಡವು 20 ಓವರ್ಗಳಲ್ಲಿ 173 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 17.3 ಓವರ್ಗಳಲ್ಲಿ 175 ರನ್ ಬಾರಿಸಿ 9 ವಿಕೆಟ್ಗಳ ಭರ್ಜರಿ ಜಯ ಸಾಧಿಸಿದೆ.
IPL 2025: ಇಂಡಿಯನ್ ಪ್ರೀಮಿಯರ್ ಲೀಗ್ನ 28ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಭರ್ಜರಿ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ರಾಜಸ್ಥಾನ್ ರಾಯಲ್ಸ್(RR) ತಂಡವು ನಿಗದಿತ 20 ಓವರ್ಗಳಲ್ಲಿ 4 ವಿಕೆಟ್ ಕಳೆದುಕೊಂಡು 173 ರನ್ಗಳಿಸಲಷ್ಟೇ ಶಕ್ತರಾಗಿದ್ದರು.
ಅದರಂತೆ 174 ರನ್ಗಳ ಗುರಿ ಪಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಫಿಲ್ ಸಾಲ್ಟ್ ಹಾಗೂ ವಿರಾಟ್ ಕೊಹ್ಲಿ ಸ್ಪೋಟಕ ಆರಂಭ ಒದಗಿಸಿದ್ದರು. ಮೊದಲ ವಿಕೆಟ್ಗೆ 91 ರನ್ಗಳ ಜೊತೆಯಾಟವಾಡಿದ ಬಳಿಕ ಭರ್ಜರಿ ಹೊಡೆತಕ್ಕೆ ಮುಂದಾಗಿ ಫಿಲ್ ಸಾಲ್ಟ್ ಕ್ಯಾಚ್ ನೀಡಿದರು.
ಕುಮಾರ್ ಕಾರ್ತಿಕೇಯ ಎಸೆತದಲ್ಲಿ ಡೀಪ್ ಮಿಡ್ ವಿಕೆಟ್ನಲ್ಲಿ ಕ್ಯಾಚ್ ನೀಡಿ ಫಿಲ್ ಸಾಲ್ಟ್ (65) ಔಟಾದರು. ಇತ್ತ ಸಾಲ್ಟ್ ಔಟಾಗುತ್ತಿದ್ದಂತೆ ನಾನ್ ಸ್ಟ್ರೈಕ್ನಲ್ಲಿದ್ದ ವಿರಾಟ್ ಕೊಹ್ಲಿ ವಿಕೆಟ್ ಪಡೆದ ಕುಮಾರ್ ಕಾರ್ತಿಕೇಯ ಅವರಿಗೆ ಹಸ್ತಲಾಘವ ಮಾಡಿ ಅಭಿನಂದಿಸಿದರು.
ಆ ಬಳಿಕ ಇನಿಂಗ್ಸ್ ಕಟ್ಟಿದ ವಿರಾಟ್ ಕೊಹ್ಲಿ 45 ಎಸೆತಗಳಲ್ಲಿ ಅಜೇಯ 62 ರನ್ ಬಾರಿಸಿದರೆ, ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ದೇವದತ್ತ್ ಪಡಿಕ್ಕಲ್ 40 ರನ್ಗಳ ಕೊಡುಗೆ ನೀಡಿದರು. ಈ ಮೂಲಕ ಆರ್ಸಿಬಿ ತಂಡವು 17.3 ಓವರ್ಗಳಲ್ಲಿ 175 ರನ್ ಬಾರಿಸಿ 9 ವಿಕೆಟ್ಗಳ ಭರ್ಜರಿ ಜಯ ಸಾಧಿಸಿತು.