VIDEO: CSK ವಿರುದ್ಧದ ಗೆಲುವಿನ ಖುಷಿಯಲ್ಲಿ ವಿರಾಟ್ ಕೊಹ್ಲಿ ಭರ್ಜರಿ ಡ್ಯಾನ್ಸ್
IPL 2025 CSK vs RCB: ಚೆನ್ನೈನ ಚೆಪಾಕ್ ಸ್ಟೇಡಿಯಂನಲ್ಲಿ ನಡೆದ ಐಪಿಎಲ್ 2025ರ 8ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಭರ್ಜರಿ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆರ್ಸಿಬಿ 196 ರನ್ ಕಲೆಹಾಕಿದರೆ, ಚೆನ್ನೈ ಸೂಪರ್ ಕಿಂಗ್ಸ್ ತಂಡವು 146 ರನ್ಗಳಿಸಿ 50 ರನ್ಗಳಿಂದ ಸೋಲೊಪ್ಪಿಕೊಂಡಿದೆ.
ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಭರ್ಜರಿ ಜಯ ಸಾಧಿಸಿದೆ. ಚೆನ್ನೈನ ಚೆಪಾಕ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 20 ಓವರ್ಗಳಲ್ಲಿ 196 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಚೆನ್ನೈ ಸೂಪರ್ ಕಿಂಗ್ಸ್ ತಂಡ 20 ಓವರ್ಗಳಲ್ಲಿ 146 ರನ್ ಬಾರಿಸಿ 50 ರನ್ಗಳಿಂದ ಸೋಲೊಪ್ಪಿಕೊಂಡಿದೆ.
ಈ ಗೆಲುವಿನ ಬಳಿಕ ಆರ್ಸಿಬಿ ತಂಡವು ಡ್ರೆಸ್ಸಿಂಗ್ ರೂಮ್ನಲ್ಲಿ ಭರ್ಜರಿಯಾಗಿ ಸಂಭ್ರಮಿಸಿದರು. ಅದರಲ್ಲೂ ವಿರಾಟ್ ಕೊಹ್ಲಿ ಗೆಲುವಿನ ಖುಷಿಯಲ್ಲಿ ಡ್ಯಾನ್ಸ್ ಮಾಡುವ ಮೂಲಕ ಗಮನ ಸೆಳೆದರು. ಇದೀಗ ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ.
Published on: Mar 29, 2025 01:32 PM