AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಸ್ಟ್ ಮಿಸ್: ಕೆಎಲ್ ರಾಹುಲ್​ಗೆ ತಿರುಗೇಟು ನೀಡಲು ಪ್ಲ್ಯಾನ್ ರೂಪಿಸಿದ್ದ ವಿರಾಟ್ ಕೊಹ್ಲಿ

ಜಸ್ಟ್ ಮಿಸ್: ಕೆಎಲ್ ರಾಹುಲ್​ಗೆ ತಿರುಗೇಟು ನೀಡಲು ಪ್ಲ್ಯಾನ್ ರೂಪಿಸಿದ್ದ ವಿರಾಟ್ ಕೊಹ್ಲಿ

ಝಾಹಿರ್ ಯೂಸುಫ್
|

Updated on:Apr 29, 2025 | 8:59 AM

IPL 2025 RCB vs DC: ಈ ಮ್ಯಾಚ್​ನಲ್ಲಿ ಮೊದಲು ಬ್ಯಾಟ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ತಂಡವು 20 ಓವರ್​ಗಳಲ್ಲಿ 162 ರನ್ ಕಲೆಹಾಕಿದ್ದರು. ಈ ಗುರಿಯನ್ನು ಬೆನ್ನತ್ತಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 18.3 ಓವರ್​ಗಳಲ್ಲಿ ಗುರಿ ಮುಟ್ಟುವ ಮೂಲಕ 6 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿತು.

IPL 2025: ಏಪ್ರಿಲ್ 11, ಐಪಿಎಲ್​ ಸೀಸನ್​ 18ರ 24ನೇ ಪಂದ್ಯ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಈ ಮ್ಯಾಚ್​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಹಾಗೂ ಡೆಲ್ಲಿ ಕ್ಯಾಪಿಟಲ್ಸ್ (DC) ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆರ್​ಸಿಬಿ 20 ಓವರ್​ಗಳಲ್ಲಿ 163 ರನ್ ಕಲೆಹಾಕಿತು.

ಈ ಗುರಿಯನ್ನು ಬೆನ್ನತ್ತಿದ ಡೆಲ್ಲಿ ಕ್ಯಾಪಿಟಲ್ಸ್ ಪರ ಕನ್ನಡಿಗ ಕೆಎಲ್ ರಾಹುಲ್ 53 ಎಸೆತಗಳಲ್ಲಿ ಅಜೇಯ 93 ರನ್ ಬಾರಿಸಿದ್ದರು. ಅಲ್ಲದೆ 17.5 ಓವರ್​ಗಳಲ್ಲಿ ತಂಡವನ್ನು ಗೆಲುವಿನ ದಡ ಸೇರಿ 6 ವಿಕೆಟ್​ಗಳ ಜಯ ತಂದುಕೊಟ್ಟರು. ಈ ಗೆಲುವಿನ ಬಳಿಕ ಕೆಎಲ್ ರಾಹುಲ್ ಬ್ಯಾಟ್​ನಿಂದ ವೃತ್ತ ಬರೆದು ಇದು ನನ್ನ ಮೈದಾನ ಎಂದು ಕಾಂತಾರಾ ಸಿನಿಮಾ ಶೈಲಿಯಲ್ಲಿ ಸಂಭ್ರಮಿಸಿದ್ದರು.

ಕನ್ನಡಿಗ ಈ ಸಂಭ್ರಮ ಸಿಕ್ಕಾಪಟ್ಟೆ ವೈರಲ್ ಆಗಿತ್ತು. ಹೀಗಾಗಿಯೇ ದೆಹಲಿಯಲ್ಲಿ ನಡೆಯಲಿರುವ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಇದಕ್ಕೆ ತಿರುಗೇಟು ನೀಡಲಿದ್ದಾರೆ ಎಂದು ಅಭಿಮಾನಿಗಳು ಊಹಿಸಿದ್ದರು. ಈ ಊಹೆಯು ನಿಜವಾಗಿತ್ತು. ಆದರೆ ಕೊನೆಯ ಕ್ಷಣದಲ್ಲಿ ವಿರಾಟ್ ಕೊಹ್ಲಿ ಔಟ್ ಆಗಿದ್ದರಿಂದ ಎಲ್ಲಾ ಪ್ಲ್ಯಾನ್​ಗಳು ತಲೆಕೆಳಗಾದವು.

ಈ ಬಗ್ಗೆ ಮಾತನಾಡಿದ ವಿರಾಟ್ ಕೊಹ್ಲಿ, ದೆಹಲಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಸೋಲಿಸಿ, ಕೆಎಲ್ ರಾಹುಲ್ ಮುಂದೆ ಕಾಂತಾರಾ ಶೈಲಿಯಲ್ಲಿ ಸಂಭ್ರಮಿಸಬೇಕೆಂದು ಪ್ಲ್ಯಾನ್ ರೂಪಿಸಿದ್ದೆ ಎಂದಿದ್ದಾರೆ. ಆದರೆ ದುರಾದೃಷ್ಟವಶಾತ್ ಈ ಪ್ಲ್ಯಾನ್ ನಡೆಯಲಿಲ್ಲ. ಈ ಪಂದ್ಯದ 18ನೇ ಓವರ್​ನಲ್ಲಿ ವಿರಾಟ್ ಕೊಹ್ಲಿ ಔಟಾಗಿದ್ದರು.

ಒಂದು ವೇಳೆ ವಿರಾಟ್ ಕೊಹ್ಲಿ ಅಜೇಯರಾಗಿ ಉಳಿದಿದ್ದರೆ, ಕೆಎಲ್ ರಾಹುಲ್ ಮುಂದೆ ಇದು ನನ್ನ ಗ್ರೌಂಡ್ ಎಂದು ವೃತ್ತ ಬರೆದು ಸಂಭ್ರಮಿಸುತ್ತಿದ್ದರು. ಆದರೆ ಕೊನೆಯ ಹಂತದಲ್ಲಿ ಔಟಾಗಿದ್ದರಿಂದ ವಿರಾಟ್ ಕೊಹ್ಲಿಯ ಎಲ್ಲಾ ಪ್ಲ್ಯಾನ್​ಗಳು ತಲೆಕೆಳಗಾದವು.

ಇದಾಗ್ಯೂ ಪಂದ್ಯದ ಬಳಿಕ ಕೆಎಲ್ ರಾಹುಲ್ ಬಳಿ ಹೋಗಿ ವಿರಾಟ್ ಕೊಹ್ಲಿ ಇದು ನನ್ನ ಮೈದಾನ ಎಂದು ಅಣಕಿಸಿದ್ದಾರೆ. ಈ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಇನ್ನು ಈ ಮ್ಯಾಚ್​ನಲ್ಲಿ ಮೊದಲು ಬ್ಯಾಟ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ತಂಡವು 20 ಓವರ್​ಗಳಲ್ಲಿ 162 ರನ್ ಕಲೆಹಾಕಿದ್ದರು. ಈ ಗುರಿಯನ್ನು ಆರ್​ಸಿಬಿ ತಂಡ 18.3 ಓವರ್​ಗಳಲ್ಲಿ ಚೇಸ್ ಮಾಡಿ 6 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿತು. ಈ ಗೆಲುವಿನೊಂದಿಗೆ ಆರ್​ಸಿಬಿ ಅಂಕ ಪಟ್ಟಿಯಲ್ಲಿ ಮೊದಲ ಸ್ಥಾನಕ್ಕೇರಿದೆ.

 

Published on: Apr 29, 2025 08:54 AM