IPL 2025: ಅಭ್ಯಾಸ ನಿಲ್ಲಿಸಿ ಅಭಿಮಾನಿಗಳ ಬೇಡಿಕೆ ಈಡೇರಿಸಿದ ಕೊಹ್ಲಿ; ವಿಡಿಯೋ ನೋಡಿ
RCB vs CSK IPL 2025: ಐಪಿಎಲ್ 2025ರ 8ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಲಿವೆ. ಕಳೆದ ವರ್ಷ ಆರ್‌ಸಿಬಿ, ಸಿಎಸ್‌ಕೆ ತಂಡವನ್ನು 27 ರನ್‌ಗಳಿಂದ ಸೋಲಿಸಿತ್ತು. ಈಗ ಚೆಪಾಕ್‌ನಲ್ಲಿ 17 ವರ್ಷಗಳ ಬರ ನೀಗಿಸಲು ಆರ್‌ಸಿಬಿ ತೀವ್ರ ತರಬೇತಿಯಲ್ಲಿ ತೊಡಗಿದೆ. ವಿರಾಟ್ ಕೊಹ್ಲಿ ಸಹ ಬ್ಯಾಟಿಂಗ್ ಅಭ್ಯಾಸದಲ್ಲಿ ತೊಡಗಿದ್ದು ಈ ವೇಳೆ ಅಭಿಮಾನಿಗಳಿಗೆ ಆಟೋಗ್ರಾಫ್ ನೀಡಿದ್ದಾರೆ.
ಐಪಿಎಲ್ 2025 ರ 8ನೇ ಪಂದ್ಯವು ಇಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವೆ ನಡೆಯಲಿದೆ. ಕಳೆದ ಆವೃತ್ತಿಯಲ್ಲಿ ಎರಡೂ ತಂಡಗಳ ನಡುವೆ ಒಂದು ಪಂದ್ಯ ಮಾತ್ರ ನಡೆದಿತ್ತು. ಇದರಲ್ಲಿ ಆರ್‌ಸಿಬಿ, ಸಿಎಸ್‌ಕೆ ತಂಡವನ್ನು 27 ರನ್‌ಗಳಿಂದ ಸೋಲಿಸಿ ಪ್ಲೇಆಫ್‌ಗೆ ಅರ್ಹತೆ ಪಡೆದಿತ್ತು. ಹೀಗಾಗಿ ಈ ಗೆಲುವಿನ ಸರಣಿಯನ್ನು ಮುಂದುವರೆಸುವುದರ ಜೊತೆಗೂ ಚೆಪಾಕ್‌ನಲ್ಲಿ ಕಳೆದ 17 ವರ್ಷಗಳ ಬರವನ್ನು ನೀಗಿಸಿಕೊಳ್ಳಲು ಆರ್‌ಸಿಬಿ ಸಾಕಷ್ಟು ಕಸರತ್ತು ನಡೆಸುತ್ತಿದೆ. ತಂಡದ ಆಟಗಾರರೆಲ್ಲರು ಮೈದಾನದಲ್ಲಿ ಸಾಕಷ್ಟು ಬೆವರು ಹರಿಸುತ್ತಿದ್ದಾರೆ. ತಂಡದ ಮಾಜಿ ನಾಯಕ ವಿರಾಟ್ ಕೊಹ್ಲಿ ಕೂಡ ಬ್ಯಾಟಿಂಗ್ನಲ್ಲಿ ನಿರತರಾಗಿದ್ದಾರೆ. ಇದೇ ವೇಳೆ ಕೊಹ್ಲಿಯ ಅಭ್ಯಾಸ ನೋಡಲು ಕ್ರೀಡಾಂಗಣಕ್ಕೆ ಬಂದಿದ್ದ ಅಭಿಮಾನಿಗಳಿಗೆ ಆಟೋಗ್ರಾಫ್ ನೀಡಿ ಸಂತೋಷಪಡಿಸುವ ಕೆಲಸವನ್ನು ಕೊಹ್ಲಿ ಮಾಡಿದ್ದಾರೆ.
ಬಿಹಾರದಲ್ಲಿ 21 ಜನರಿದ್ದ ದೋಣಿ ಮಗುಚಿ ಇಬ್ಬರು ನಾಪತ್ತೆ; ವಿಡಿಯೋ ಇಲ್ಲಿದೆ
‘ಹೇಗಿದೆ ಟಾಕ್ಸಿಕ್?’ ಕಲೆಕ್ಷನ್, ವಿಮರ್ಶೆ ಇತ್ಯಾದಿ: ವಿಡಿಯೋ ನೋಡಿ
ನೇಪಾಳ-ಟಿಬೆಟ್ ಗಡಿಯಲ್ಲಿ ಪ್ರವಾಹಕ್ಕೆ ಕೊಚ್ಚಿಹೋಯ್ತು ತ್ರಿಶೂಲಿ ನದಿ ಸೇತುವೆ
ಏಕಾಏಕಿ ಹೊತ್ತಿ ಉರಿದ ಕಾರು: ಕನ್ಯೆ ನೋಡಲು ಹೋಗಿದ್ದವ ಪ್ರಾಣಾಪಾಯದಿಂದ ಪಾರು

