Abhishek Sharma: ಸೆಂಚುರಿ ಸಿಡಿಸಿ ಅಭಿಷೇಕ್ ಶರ್ಮಾ ತೋರಿಸಿದ ಚೀಟಿಯಲ್ಲೇನಿತ್ತು?
IPL 2025 SRH vs PBKS: ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಂಜಾಬ್ ಕಿಂಗ್ಸ್ ತಂಡವು 20 ಓವರ್ಗಳಲ್ಲಿ 6 ವಿಕೆಟ್ ಕಳೆದುಕೊಂಡು 245 ರನ್ ಕಲೆಹಾಕಿತು. ಈ ಗುರಿ ಬೆನ್ನತ್ತಿದ ಸನ್ರೈಸರ್ಸ್ ಹೈದರಾಬಾದ್ ಪರ ಅಭಿಷೇಕ್ ಶರ್ಮಾ 55 ಎಸೆತಗಳಲ್ಲಿ 10 ಸಿಕ್ಸ್ ಹಾಗೂ 14 ಫೋರ್ಗಳೊಂದಿಗೆ 141 ರನ್ ಬಾರಿಸಿದರು.
IPL 2025: ಐಪಿಎಲ್ನ 27ನೇ ಪಂದ್ಯದಲ್ಲಿ ಅಭಿಷೇಕ್ ಶರ್ಮಾ (Abhishek Sharma) ವಿಸ್ಪೋಟಕ ಸೆಂಚುರಿ ಸಿಡಿಸಿ ಮಿಂಚಿದ್ದಾರೆ. ಹೈದರಾಬಾದ್ನ ರಾಜೀವ್ ಗಾಂಧಿ ಸ್ಟೇಡಿಯಂನಲ್ಲಿ ನಡೆದ ಪಂಜಾಬ್ ಕಿಂಗ್ಸ್ (PBKS) ವಿರುದ್ಧ ಪಂದ್ಯದಲ್ಲಿ 246 ರನ್ಗಳನ್ನು ಬೆನ್ನತ್ತಿದ ಸನ್ರೈಸರ್ಸ್ ಹೈದರಾಬಾದ್ (SRH) ತಂಡಕ್ಕೆ ಅಭಿಷೇಕ್ ಶರ್ಮಾ ಭರ್ಜರಿ ಆರಂಭ ಒದಗಿಸಿದ್ದರು. ಮೊದಲ ಓವರ್ನಿಂದಲೇ ಬಿರುಸಿನ ಬ್ಯಾಟಿಂಗ್ಗೆ ಒತ್ತು ನೀಡಿದ ಅಭಿ ಮೈದಾನದ ಮೂಲೆ ಮೂಲೆಗೆ ಸಿಕ್ಸ್-ಫೋರ್ಗಳ ಸುರಿಮಳೆಗೈದರು. ಈ ಮೂಲಕ ಕೇವಲ 40 ಎಸೆತಗಳಲ್ಲಿ ಶತಕ ಪೂರೈಸಿದರು.
ಈ ಭರ್ಜರಿ ಸೆಂಚುರಿ ಸಂಭ್ರಮದ ನಡುವೆ ಅಭಿಷೇಕ್ ಶರ್ಮಾ ತಮ್ಮ ಜೇಬಿನಿಂದ ಪೇಪರ್ ಚೀಟಿಯೊಂದನ್ನು ತೆಗೆದು ಅಭಿಮಾನಿಗಳತ್ತ ತೋರಿಸಿದರು. ಆದರೆ ಅಭಿ ತೋರಿಸಿದ ಚೀಟಿಯಲ್ಲಿನ ಬರಹಗಳು ಸ್ಪಷ್ಟವಾಗಿ ಗೋಚರಿಸಿರಲಿಲ್ಲ. ಹೀಗಾಗಿ ಯುವ ಎಡಗೈ ದಾಂಡಿಗ ತೋರಿಸಿದ ಚೀಟಿಯಲ್ಲೇನಿತ್ತು ಎಂಬ ಪ್ರಶ್ನೆ ಮೂಡುವುದು ಸಹಜ.
ಈ ಪ್ರಶ್ನೆಗೆ ಉತ್ತರ… ಇದು ಆರೆಂಜ್ ಆರ್ಮಿಗಾಗಿ. ಹೌದು, ಅಭಿಷೇಕ್ ಶರ್ಮಾ ಬ್ಯಾಟಿಂಗ್ಗೆ ಬರುವಾಗಲೇ ಸನ್ರೈಸರ್ಸ್ ಹೈದರಾಬಾದ್ ಅಭಿಮಾನಿಗಳಿಗೆ ಶತಕದ ಉಡುಗೊರೆ ನೀಡಲು ನಿರ್ಧರಿಸಿದ್ದರು. ಅಲ್ಲದೆ ಪೇಪರ್ ಒಂದರಲ್ಲಿ ಇದು ಆರೆಂಜ್ ಆರ್ಮಿಗಾಗಿ ಎಂದು ಬರೆದುಕೊಂಡು ಬಂದಿದ್ದರು.
ಅದರಂತೆ ಪಂಜಾಬ್ ಕಿಂಗ್ಸ್ ವಿರುದ್ಧ ಶತಕ ಸಿಡಿಸುತ್ತಿದ್ದಂತೆ ಅಭಿಷೇಕ್ ಶರ್ಮಾ ಈ ಶತಕ ಸನ್ರೈಸರ್ಸ್ ಹೈದರಾಬಾದ್ ತಂಡದ ಅಭಿಮಾನಿಗಳಾದ ಆರೆಂಜ್ ಆರ್ಮಿಗಾಗಿ ಎಂದು ಬರೆದಿರುವ ಪೇಪರ್ ತೋರಿಸಿದ್ದಾರೆ. ಇದೀಗ ಈ ವಿಡಿಯೋ ವೈರಲ್ ಆಗಿದ್ದು, ಆರೆಂಜ್ ಆರ್ಮಿ ಅಭಿಮಾನಿಗಳಿಂದ ಭಾರೀ ಮೆಚ್ಚುಗೆಗಳು ವ್ಯಕ್ತವಾಗುತ್ತಿದೆ.
ಇನ್ನು ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಂಜಾಬ್ ಕಿಂಗ್ಸ್ ತಂಡವು 20 ಓವರ್ಗಳಲ್ಲಿ 6 ವಿಕೆಟ್ ಕಳೆದುಕೊಂಡು 245 ರನ್ ಕಲೆಹಾಕಿತು. ಈ ಗುರಿ ಬೆನ್ನತ್ತಿದ ಸನ್ರೈಸರ್ಸ್ ಹೈದರಾಬಾದ್ ಪರ ಅಭಿಷೇಕ್ ಶರ್ಮಾ 55 ಎಸೆತಗಳಲ್ಲಿ 10 ಸಿಕ್ಸ್ ಹಾಗೂ 14 ಫೋರ್ಗಳೊಂದಿಗೆ 141 ರನ್ ಬಾರಿಸಿದರು. ಈ ಶತಕದ ನೆರವಿನೊಂದಿಗೆ ಸನ್ರೈಸರ್ಸ್ ಹೈದರಾಬಾದ್ 20 ಓವರ್ಗಳಲ್ಲಿ 2 ವಿಕೆಟ್ ಕಳೆದುಕೊಂಡು 247 ರನ್ ಬಾರಿಸಿ 8 ವಿಕೆಟ್ಗಳ ಜಯ ಸಾಧಿಸಿದೆ.
Published On - 8:30 am, Sun, 13 April 25