VIDEO: ರಶೀದ್ ಖಾನ್ ವಿಚಿತ್ರ ಶಾಟ್, ಯಶಸ್ವಿ ಜೈಸ್ವಾಲ್ ಅದ್ಭುತ ಕ್ಯಾಚ್
IPL 2025 RR vs GT: ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಗುಜರಾತ್ ಟೈಟಾನ್ಸ್ ತಂಡವು 20 ಓವರ್ಗಳಲ್ಲಿ 217 ರನ್ ಕಲೆಹಾಕಿದರೆ, ರಾಜಸ್ಥಾನ್ ರಾಯಲ್ಸ್ ತಂಡವು 159 ರನ್ಗಳಿಗೆ ಆಲೌಟ್ ಆಗಿದೆ. ಈ ಮೂಲಕ ಗುಜರಾತ್ ಟೈಟಾನ್ಸ್ ತಂಡವು 58 ರನ್ಗಳ ಭರ್ಜರಿ ಜಯ ಸಾಧಿಸಿದೆ.
IPL 2025: ಐಪಿಎಲ್ನ 23ನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ (GT) ಹಾಗೂ ರಾಜಸ್ಥಾನ್ ರಾಯಲ್ಸ್ (RR) ತಂಡಗಳು ಮುಖಾಮುಖಿಯಾಗಿದ್ದವು. ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಗುಜರಾತ್ ಟೈಟಾನ್ಸ್ ತಂಡವು 20 ಓವರ್ಗಳಲ್ಲಿ 6 ವಿಕೆಟ್ ಕಳೆದುಕೊಂಡು 217 ರನ್ ಕಲೆಹಾಕಿತು. ಈ 217 ರನ್ಗಳಲ್ಲಿ ರಶೀದ್ ಖಾನ್ ಅವರ ಕೊಡುಗೆ ಕೂಡ ಇದೆ.
7ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ರಶೀದ್ ಖಾನ್, ತುಷಾರ್ ದೇಶಪಾಂಡೆ ಓವರ್ನಲ್ಲಿ 1 ಸಿಕ್ಸ್ ಹಾಗೂ 1 ಫೋರ್ ಬಾರಿಸಿ ಅಬ್ಬರಿಸಿದ್ದರು. ಆದರೆ ಇದೇ ಓವರ್ನ 6ನೇ ಎಸೆತದಲ್ಲಿ ವಿಚಿತ ಶಾಟ್ ಬಾರಿಸಲು ಯತ್ನಿಸಿದ್ದರು. ನಿರೀಕ್ಷೆಯಂತೆ ರಶೀದ್ ಖಾನ್ ಶಾಟ್ ಕೂಡ ಬಾರಿಸಿದ್ದರು.
ಆದರೆ ನೋ ಲುಕ್ ಶಾಟ್ ಬಾರಿಸಿ ಕಣ್ಣು ಬಿಡುವವಷ್ಟರಲ್ಲಿ ಯಶಸ್ವಿ ಜೈಸ್ವಾಲ್ ಅದ್ಭುತವಾಗಿ ಡೈವಿಂಗ್ ಕ್ಯಾಚ್ ಹಿಡಿದಿದ್ದರು. ಇದೀಗ ರಶೀದ್ ಖಾನ್ ಅವರ ಶಾಟ್ ಹಾಗೂ ಯಶಸ್ವಿ ಜೈಸ್ವಾಲ್ ಅವರ ಫೀಲ್ಡಿಂಗ್ ವಿಡಿಯೋ ವೈರಲ್ ಆಗಿದ್ದು, ಈ ವಿಡಿಯೋಗೆ ಕ್ರಿಕೆಟ್ ಪ್ರೇಮಿಗಳಿಂದ ಮೆಚ್ಚುಗೆಗಳು ವ್ಯಕ್ತವಾಗುತ್ತಿದೆ.
ಇನ್ನು ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಗುಜರಾತ್ ಟೈಟಾನ್ಸ್ ತಂಡವು 20 ಓವರ್ಗಳಲ್ಲಿ 217 ರನ್ ಕಲೆಹಾಕಿದರೆ, ರಾಜಸ್ಥಾನ್ ರಾಯಲ್ಸ್ ತಂಡವು 159 ರನ್ಗಳಿಗೆ ಆಲೌಟ್ ಆಗಿದೆ. ಈ ಮೂಲಕ ಗುಜರಾತ್ ಟೈಟಾನ್ಸ್ ತಂಡವು 58 ರನ್ಗಳ ಭರ್ಜರಿ ಜಯ ಸಾಧಿಸಿದೆ.

ಅನುಮೋದನೆ ಸಿಕ್ಕರೂ176 ಕೋಚ್ ಗಳ ನೇಮಕ ಯಾಕಾಗಿಲ್ಲ ಅಂತ ಪ್ರಶ್ನಿಸಿದ ಸಿಎಂ

ದಿನೇಶ್ ಗುಂಡೂರಾವ್ ಉಸ್ತುವಾರಿ ಸಚಿವನಾಗಿ ಸಿಕ್ಕಿದ್ದು ನಮ್ಮ ದುರ್ದೈವ: ಪೂಂಜ

ಯತ್ನಾಳ್ ಗೆ ಹಿಂದೂ ನಾಯಕ ಅಂತ ಯಾರೂ ಪಟ್ಟ ಕಟ್ಟಿಲ್ಲ: ರೇಣುಕಾಚಾರ್ಯ

ಶತಮಾನದ ಇತಿಹಾಸ ಹೊಂದಿರುವ ಕೋಲಾರದ ಶಾಲೆ SSLC ಫಲಿತಾಂಶದಲ್ಲಿ ಶೂನ್ಯ ಸಾಧನೆ
