IPL 2025: ತವರಿನಲ್ಲಿ ಮೈಕೊಡವಿ ನಿಂತ ಮುಂಬೈ ಬೌಲರ್ಸ್; ವಿಡಿಯೋ
KKR vs MI IPL 2025: ಐಪಿಎಲ್ 2025ರ 12ನೇ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಮುಂಬೈ ಇಂಡಿಯನ್ಸ್ ವಿರುದ್ಧ ಆರಂಭಿಕ ಆಘಾತ ಅನುಭವಿಸಿದೆ. ಮೊದಲು ಬ್ಯಾಟ್ ಮಾಡಿದ ಕೆಕೆಆರ್ ತಂಡ ಮೊದಲ ಆರು ಓವರ್‌ಗಳಲ್ಲಿ ನಾಲ್ಕು ಪ್ರಮುಖ ವಿಕೆಟ್‌ಗಳನ್ನು ಕಳೆದುಕೊಂಡಿದೆ. ಸುನಿಲ್ ನರೈನ್, ಕ್ವಿಂಟನ್ ಡಿ ಕಾಕ್, ಅಜಿಂಕ್ಯ ರಹಾನೆ ಮತ್ತು ವೆಂಕಟೇಶ್ ಅಯ್ಯರ್ ಅವರು ಕಡಿಮೆ ರನ್‌ಗಳಿಗೆ ಔಟ್ ಆದರು.
ಐಪಿಎಲ್ 18ನೇ ಸೀಸನ್‌ನ 12ನೇ ಪಂದ್ಯವು ಹಾಲಿ ಚಾಂಪಿಯನ್ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಮುಂಬೈ ಇಂಡಿಯನ್ಸ್ ನಡುವೆ ವಾಂಖೆಡೆಯಲ್ಲಿ ನಡೆಯುತ್ತಿದೆ. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡುತ್ತಿರುವ ಕೆಕೆಆರ್ ತಂಡ ಮೊದಲ 6 ಓವರ್ಗಳಲ್ಲೇ ಪ್ರಮುಖ 4 ವಿಕೆಟ್‌ಗಳನ್ನು ಕಳೆದುಕೊಂಡಿದೆ. ತಂಡದ ಪರ ಆರಂಭಿಕರಾಗಿ ಕಣಕ್ಕಿಳಿದಿದ್ದ ಸುನೀಲ್ ನರೈನ್ ಮತ್ತು ಕ್ವಿಂಟನ್ ಡಿ ಕಾಕ್ ಮತ್ತೊಮ್ಮೆ ಉತ್ತಮ ಆರಂಭ ಒದಗಿಸಿಕೊಡುವಲ್ಲಿ ವಿಫಲರಾದರು. ಸುನಿಲ್ ನರೈನ್, ಟ್ರೆಂಟ್ ಬೌಲ್ಟ್ ಎಸೆದ ಮೊದಲ ಓವರ್ನ 3ನೇ ಎಸೆತದಲ್ಲೇ ಶೂನ್ಯಕ್ಕೆ ಕ್ಲೀನ್ ಬೌಲ್ಡ್ ಆದರು. ಆ ಬಳಿಕ 2ನೇ ಓವರ್ನ ಮೊದಲ ಎಸೆತದಲ್ಲೇ ದೀಪಕ್ ಚಹಾರ್, ಡಿ ಕಾಕ್ರನ್ನು ಪೆವಿಲಿಯನ್ಗಟ್ಟಿದರು. ನಾಯಕ ರಹಾನೆ ಕೂಡ 4ನೇ ಓವರ್ನ ಮೊದಲ ಎಸೆತದಲ್ಲಿ 11 ರನ್‌ಗಳಿಗೆ ವಿಕೆಟ್ ಒಪ್ಪಿಸಿದರೆ, ವೆಂಕಟೇಶ್ ಅಯ್ಯರ್ ಅವರ ಆಟ ಕೂಡ 6ನೇ ಓವರ್ನಲ್ಲಿ 3 ರನ್‌ಗಳಿಗೆ ಅಂತ್ಯವಾಯಿತು. ಈ ಸುದ್ದಿ ಬರೆಯುವ ಹೊತ್ತಿಗೆ ಕೆಕೆಆರ್ ತಂಡ 45 ರನ್‌ಗಳಿಗೆ ಪ್ರಮುಖ 5 ವಿಕೆಟ್‌ಗಳನ್ನು ಕಳೆದುಕೊಂಡಿದೆ.