VIDEO: ರಾಕೆಟ್ ರಾಕೆಟ್ ರಾಕೆಟ್: ಒಂದೇ ಕೈಯಲ್ಲಿ ಧೋನಿಯ ರಾಕೆಟ್ ಸಿಕ್ಸ್
IPL 2025 CSK vs LSG: ಈ ಪಂದ್ಯದಲ್ಲಿ ಟಾಸ್ ಗೆದ್ದ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಬೌಲಿಂಗ್ ಆಯ್ದುಕೊಂಡಿತು. ಅದರಂತೆ ಮೊದಲು ಬ್ಯಾಟ್ ಮಾಡಿದ ಲಕ್ನೋ ಸೂಪರ್ ಜೈಂಟ್ಸ್ ತಂಡವು 20 ಓವರ್ಗಳಲ್ಲಿ 166 ರನ್ ಕಲೆಹಾಕಿದರೆ, ಸಿಎಸ್ಕೆ ತಂಡ ಈ ಗುರಿಯನ್ನು 19.3 ಓವರ್ಗಳಲ್ಲಿ ಚೇಸ್ ಮಾಡಿ 5 ವಿಕೆಟ್ಗಳ ಜಯ ಸಾಧಿಸಿದೆ.
IPL 2025: ಇಂಡಿಯನ್ ಪ್ರೀಮಿಯರ್ ಲೀಗ್ನ 30ನೇ ಪಂದ್ಯದಲ್ಲಿ ಮಹೇಂದ್ರ ಸಿಂಗ್ ಧೋನಿ (MS Dhoni) ರಾಕೆಟ್ ಸಿಕ್ಸ್ ಸಿಡಿಸಿದ್ದಾರೆ. ಅದು ಕೂಡ ಒಂದೇ ಕೈಯಲ್ಲಿ ಎಂಬುದು ವಿಶೇಷ. ಲಕ್ನೋನ ಏಕಾನ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಲಕ್ನೋ ಸೂಪರ್ ಜೈಂಟ್ಸ್ (LSG) ತಂಡವು 20 ಓವರ್ಗಳಲ್ಲಿ 166 ರನ್ ಕಲೆಹಾಕಿತು.
ಈ ಗುರಿ ಬೆನ್ನತ್ತಿದ ಚೆನ್ನೈ ಸೂಪರ್ ಕಿಂಗ್ಸ್ ಪರ 7ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಮಹೇಂದ್ರ ಸಿಂಗ್ ಧೋನಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದರು. ಅದರಲ್ಲೂ ಶಾರ್ದೂಲ್ ಠಾಕೂರ್ ಎಸೆದ 17ನೇ ಓವರ್ನ ಕೊನೆಯ ಎಸೆತದಲ್ಲಿ ಒಂದೇ ಕೈಯಲ್ಲಿ ಲೆಗ್ ಸೈಡ್ನತ್ತ ಭರ್ಜರಿ ಸಿಕ್ಸ್ ಬಾರಿಸಿದರು. ಈ ಸಿಕ್ಸ್ ವಿಡಿಯೋ ಇದೀಗ ಭಾರೀ ವೈರಲ್ ಆಗಿದ್ದು, 43ನೇ ವಯಸ್ಸಿನಲ್ಲೂ ಧೋನಿ ಅಬ್ಬರಕ್ಕೆ ಅಭಿಮಾನಿಗಳು ಬಹುಪರಾಕ್ ಅನ್ನುತ್ತಿದ್ದಾರೆ.
ಇನ್ನು ಈ ಪಂದ್ಯದಲ್ಲಿ ಟಾಸ್ ಗೆದ್ದ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಬೌಲಿಂಗ್ ಆಯ್ದುಕೊಂಡಿತು. ಅದರಂತೆ ಮೊದಲು ಬ್ಯಾಟ್ ಮಾಡಿದ ಲಕ್ನೋ ಸೂಪರ್ ಜೈಂಟ್ಸ್ ತಂಡವು 20 ಓವರ್ಗಳಲ್ಲಿ 166 ರನ್ ಕಲೆಹಾಕಿದರೆ, ಸಿಎಸ್ಕೆ ತಂಡ ಈ ಗುರಿಯನ್ನು 19.3 ಓವರ್ಗಳಲ್ಲಿ ಚೇಸ್ ಮಾಡಿ 5 ವಿಕೆಟ್ಗಳ ಜಯ ಸಾಧಿಸಿದೆ. ಈ ಗೆಲುವಿನ ರೂವಾರಿ ಮಹೇಂದ್ರ ಸಿಂಗ್ ಧೋನಿ.
ಕೊನೆಯ ಹಂತದಲ್ಲಿ ಕಣಕ್ಕಿಳಿದ ಧೋನಿ ಕೇವಲ 11 ಎಸೆತಗಳಲ್ಲಿ 1 ಸಿಕ್ಸ್ ಹಾಗೂ 4 ಫೋರ್ಗಳೊಂದಿಗೆ 26 ರನ್ ಭಾರಿಸಿದರು. ಈ ಮೂಲಕ ಸಿಎಸ್ಕೆ ತಂಡಕ್ಕೆ ಗೆಲುವು ತಂದುಕೊಡುವಲ್ಲಿ ಪ್ರಮುಖ ಪಾತ್ರವಹಿಸಿದರು.
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!

