VIDEO: ರಾಕೆಟ್ ರಾಕೆಟ್ ರಾಕೆಟ್: ಒಂದೇ ಕೈಯಲ್ಲಿ ಧೋನಿಯ ರಾಕೆಟ್ ಸಿಕ್ಸ್

Updated on: Apr 15, 2025 | 12:55 PM

IPL 2025 CSK vs LSG: ಈ ಪಂದ್ಯದಲ್ಲಿ ಟಾಸ್ ಗೆದ್ದ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಬೌಲಿಂಗ್ ಆಯ್ದುಕೊಂಡಿತು. ಅದರಂತೆ ಮೊದಲು ಬ್ಯಾಟ್ ಮಾಡಿದ ಲಕ್ನೋ ಸೂಪರ್ ಜೈಂಟ್ಸ್ ತಂಡವು 20 ಓವರ್​ಗಳಲ್ಲಿ 166 ರನ್ ಕಲೆಹಾಕಿದರೆ, ಸಿಎಸ್​ಕೆ ತಂಡ ಈ ಗುರಿಯನ್ನು 19.3 ಓವರ್​ಗಳಲ್ಲಿ ಚೇಸ್ ಮಾಡಿ 5 ವಿಕೆಟ್​ಗಳ ಜಯ ಸಾಧಿಸಿದೆ.

IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ನ 30ನೇ ಪಂದ್ಯದಲ್ಲಿ ಮಹೇಂದ್ರ ಸಿಂಗ್ ಧೋನಿ (MS Dhoni) ರಾಕೆಟ್ ಸಿಕ್ಸ್ ಸಿಡಿಸಿದ್ದಾರೆ. ಅದು ಕೂಡ ಒಂದೇ ಕೈಯಲ್ಲಿ ಎಂಬುದು ವಿಶೇಷ. ಲಕ್ನೋನ ಏಕಾನ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಲಕ್ನೋ ಸೂಪರ್ ಜೈಂಟ್ಸ್ (LSG) ತಂಡವು 20 ಓವರ್​ಗಳಲ್ಲಿ 166 ರನ್ ಕಲೆಹಾಕಿತು.

ಈ ಗುರಿ ಬೆನ್ನತ್ತಿದ ಚೆನ್ನೈ ಸೂಪರ್ ಕಿಂಗ್ಸ್ ಪರ 7ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಮಹೇಂದ್ರ ಸಿಂಗ್ ಧೋನಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದರು. ಅದರಲ್ಲೂ ಶಾರ್ದೂಲ್ ಠಾಕೂರ್ ಎಸೆದ 17ನೇ ಓವರ್​ನ ಕೊನೆಯ ಎಸೆತದಲ್ಲಿ ಒಂದೇ ಕೈಯಲ್ಲಿ ಲೆಗ್ ಸೈಡ್​ನತ್ತ ಭರ್ಜರಿ ಸಿಕ್ಸ್ ಬಾರಿಸಿದರು. ಈ ಸಿಕ್ಸ್​ ವಿಡಿಯೋ ಇದೀಗ ಭಾರೀ ವೈರಲ್ ಆಗಿದ್ದು, 43ನೇ ವಯಸ್ಸಿನಲ್ಲೂ ಧೋನಿ ಅಬ್ಬರಕ್ಕೆ ಅಭಿಮಾನಿಗಳು ಬಹುಪರಾಕ್ ಅನ್ನುತ್ತಿದ್ದಾರೆ.

ಇನ್ನು ಈ ಪಂದ್ಯದಲ್ಲಿ ಟಾಸ್ ಗೆದ್ದ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಬೌಲಿಂಗ್ ಆಯ್ದುಕೊಂಡಿತು. ಅದರಂತೆ ಮೊದಲು ಬ್ಯಾಟ್ ಮಾಡಿದ ಲಕ್ನೋ ಸೂಪರ್ ಜೈಂಟ್ಸ್ ತಂಡವು 20 ಓವರ್​ಗಳಲ್ಲಿ 166 ರನ್ ಕಲೆಹಾಕಿದರೆ, ಸಿಎಸ್​ಕೆ ತಂಡ ಈ ಗುರಿಯನ್ನು 19.3 ಓವರ್​ಗಳಲ್ಲಿ ಚೇಸ್ ಮಾಡಿ 5 ವಿಕೆಟ್​ಗಳ ಜಯ ಸಾಧಿಸಿದೆ. ಈ ಗೆಲುವಿನ ರೂವಾರಿ ಮಹೇಂದ್ರ ಸಿಂಗ್ ಧೋನಿ.

ಕೊನೆಯ ಹಂತದಲ್ಲಿ ಕಣಕ್ಕಿಳಿದ ಧೋನಿ ಕೇವಲ 11 ಎಸೆತಗಳಲ್ಲಿ 1 ಸಿಕ್ಸ್ ಹಾಗೂ 4 ಫೋರ್​ಗಳೊಂದಿಗೆ 26 ರನ್ ಭಾರಿಸಿದರು. ಈ ಮೂಲಕ ಸಿಎಸ್​ಕೆ ತಂಡಕ್ಕೆ ಗೆಲುವು ತಂದುಕೊಡುವಲ್ಲಿ ಪ್ರಮುಖ ಪಾತ್ರವಹಿಸಿದರು.

 

 

 

Follow Us
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More