ಐಪಿಎಲ್ ಟಿಕೆಟ್ ಬ್ಲಾಕ್ ದಂಧೆಗೆ ಪೊಲೀಸರ ಬ್ರೇಕ್: 24 ಮಂದಿ ಅರೆಸ್ಟ್, 17 ಕೇಸ್ ದಾಖಲು!

Edited By:

Updated on: Apr 28, 2026 | 9:25 AM

ಬೆಂಗಳೂರಿನಲ್ಲಿ ಐಪಿಎಲ್ ಬ್ಲಾಕ್ ಟಿಕೆಟ್ ಮಾರಾಟಗಾರರ ವಿರುದ್ಧ ಪೊಲೀಸರು ಕಠಿಣ ಕ್ರಮ ಕೈಗೊಂಡಿದ್ದಾರೆ. ಕಳೆದ ಒಂದು ತಿಂಗಳಲ್ಲಿ 17 ಪ್ರಕರಣಗಳನ್ನು ದಾಖಲಿಸಿ, 24 ಮಂದಿಯನ್ನು ಬಂಧಿಸಲಾಗಿದೆ. ಕಬ್ಬನ್ ಪಾರ್ಕ್ ಮತ್ತು ಹಲಸೂರು ಗೇಟ್ ಪೊಲೀಸ್ ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿದ್ದು, 37 ಐಪಿಎಲ್ ಟಿಕೆಟ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಹೆಚ್ಚಿನ ಬೆಲೆಗೆ ಟಿಕೆಟ್ ಮಾರಾಟ ಮಾಡುವ ಪ್ರಯತ್ನಕ್ಕೆ ಪೊಲೀಸರು ಕಡಿವಾಣ ಹಾಕಿದ್ದಾರೆ.

ಬೆಂಗಳೂರು, ಏಪ್ರಿಲ್ 28: ಐಪಿಎಲ್ ಪಂದ್ಯಾವಳಿಗಳ ಸಂದರ್ಭದಲ್ಲಿ ಅಕ್ರಮವಾಗಿ ಹೆಚ್ಚಿನ ಬೆಲೆಗೆ ಟಿಕೆಟ್‌ಗಳನ್ನು ಮಾರಾಟ ಮಾಡುತ್ತಿದ್ದ ಬ್ಲಾಕ್ ಮಾರ್ಕೆಟ್ ದಂಧೆಕೋರರಿಗೆ ಬೆಂಗಳೂರು ಪೊಲೀಸರು ಬಿಸಿ ಮುಟ್ಟಿಸಿದ್ದಾರೆ. ಕಳೆದ ಒಂದು ತಿಂಗಳ ಅವಧಿಯಲ್ಲಿ, ಪೊಲೀಸರು 17 ಪ್ರಕರಣಗಳನ್ನು ದಾಖಲಿಸಿದ್ದು, ಈ ಸಂಬಂಧ 24 ಮಂದಿಯನ್ನು ಬಂಧಿಸಿದ್ದಾರೆ. ಇವರಿಂದ 37 ಐಪಿಎಲ್ ಟಿಕೆಟ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ನಗರದ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 16 ಪ್ರಕರಣಗಳು ದಾಖಲಾಗಿದ್ದರೆ, ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಒಂದು ಪ್ರಕರಣ ದಾಖಲಾಗಿದೆ. ಕ್ರಿಕೆಟ್ ಪ್ರೇಮಿಗಳ ಆಸೆಯನ್ನು ದುರುಪಯೋಗಪಡಿಸಿಕೊಂಡು ಹೆಚ್ಚಿನ ಲಾಭ ಗಳಿಸಲು ಯತ್ನಿಸುತ್ತಿದ್ದ ದಂಧೆಕೋರರನ್ನು ಸಿಸಿಬಿ ಅಧಿಕಾರಿಗಳು ಸಹ ದಾಳಿ ನಡೆಸಿ ಬಂಧಿಸಿದ್ದಾರೆ. ಈ ಮೂಲಕ ಐಪಿಎಲ್ ಟಿಕೆಟ್ ಬ್ಲಾಕ್ ಮಾರ್ಕೆಟ್​​ಗೆ ಕಡಿವಾಣ ಹಾಕುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ರಾಚಪ್ಪಾಜಿ ನಾಯ್ಕ್

ರಾಚಪ್ಪಾಜಿ ನಾಯ್ಕ್ ಆದ ನಾನು ಮೂಲತಃ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಗೊಲ್ಲರದಿಂಬ ಗ್ರಾಮದವನು ಕಳೆದ 2 ವರ್ಷ 11 ತಿಂಗಳಿನಿಂದ ಟಿವಿ9 ಬೆಂಗಳೂರು ಕ್ರೈಂ ಬ್ಯೂರೊ ವರದಿಗಾರನಾಗಿ ಕೆಲಸ ಮಾಡುತ್ತಿದ್ದು.ರಾಜ್ಯದಲ್ಲಿ ನಡೆದ ಪ್ರಮುಖ ಅಪಾರಧ ವಿಷಯಗಳ ಮೇಲಿನ ವರದಿ ಮಾಡಿದ್ದೇನೆ.ಬೆಂಗಳೂರು ಮಾತ್ರವಲ್ಲದೆ ರಾಜ್ಯದ ಬೇರೆ ಬೇರೆ ಭಾಗಗಳಲ್ಲಿ ನಡೆದ ಪ್ರಮುಖ ಬೆಳವಣಿಗೆಯ ವರದಿ ಮಾಡಿದ್ದೇನೆ.

Read More