AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

LSG vs DC: ಮೊದಲ ಓವರ್ ಮೊದಲ ಎಸೆತದಲ್ಲೇ ಸೊನ್ನೆ ಸುತ್ತಿದ ಕೆಎಲ್ ರಾಹುಲ್

LSG vs DC: ಮೊದಲ ಓವರ್ ಮೊದಲ ಎಸೆತದಲ್ಲೇ ಸೊನ್ನೆ ಸುತ್ತಿದ ಕೆಎಲ್ ರಾಹುಲ್

ಪೃಥ್ವಿಶಂಕರ
|

Updated on: Apr 01, 2026 | 9:56 PM

Share

KL Rahul Golden Duck: ಲಕ್ನೋದ ಏಕನಾ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2026 ರ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ಲಕ್ನೋ ಸೂಪರ್​ಜೈಂಟ್ಸ್ 141 ರನ್‌ಗಳಿಗೆ ಆಲೌಟ್ ಆಯಿತು. ಈ ಗುರಿ ಬೆನ್ನಟ್ಟಿದ ಡೆಲ್ಲಿಗೆ ಇನ್ನಿಂಗ್ಸ್ ಆರಂಭದಲ್ಲೇ ಆಘಾತ ಎದುರಾಯಿತು. ಕನ್ನಡಿಗ ಕೆಎಲ್ ರಾಹುಲ್ ಮೊಹಮ್ಮದ್ ಶಮಿ ಎಸೆತದಲ್ಲಿ ಮೊದಲ ಬಾಲಿಗೆ ಗೋಲ್ಡನ್ ಡಕ್ ಆಗಿ ಔಟಾದರು. ಇದು ಡೆಲ್ಲಿ ತಂಡಕ್ಕೆ ದೊಡ್ಡ ಹಿನ್ನಡೆಯಾಗಿತ್ತು.

ಲಕ್ನೋದ ಏಕನಾ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2026 ರ ಐದನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಲಕ್ನೋ ಸೂಪರ್​ಜೈಂಟ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಲಕ್ನೋ ತಂಡ, ಡೆಲ್ಲಿ ಬೌಲಿಂಗ್ ದಾಳಿಗೆ ನಲುಗಿ ಪೂರ್ಣ 20 ಓವರ್​ಗಳನ್ನು ಆಡಲಾಗದೆ, ಕೇವಲಮ 141 ರನ್​ಗಳಿಗೆ ಆಲೌಟ್ ಆಯಿತು. ಈ ಗುರಿ ಬೆನ್ನಟ್ಟಿದ ಡೆಲ್ಲಿ ತಂಡಕ್ಕೆ ಇನ್ನಿಂಗ್ಸ್​ನ ಮೊದಲ ಎಸೆತದಲ್ಲೇ ಆಘಾತ ಎದುರಾಯಿತು.

ಡೆಲ್ಲಿ ಕ್ಯಾಪಿಟಲ್ಸ್ ತಂಡ ಈ ಆವೃತ್ತಿಯಿಂದ ತನ್ನ ಆರಂಭಿಕರಲ್ಲಿ ಬದಲಾವಣೆ ಮಾಡಿದೆ. ಅದರಂತೆ ಕನ್ನಡಿಗ ಕೆಎಲ್ ರಾಹುಲ್ ಹಾಗೂ ಶ್ರೀಲಂಕಾದ ಪಾತುಮ್ ನಿಸ್ಸಾಂಕ ಇನ್ನಿಂಗ್ಸ್ ಆರಂಭಿಸುವ ಜವಾಬ್ದಾರಿ ಹೊತ್ತಿದ್ದರು. ಇತ್ತ ಲಕ್ನೋ ಪರ ಅನುಭವಿ ಮೊಹಮ್ಮದ್ ಶಮಿ ಬೌಲ್ ಮಾಡಿದ ಮೊದಲ ಓವರ್​ನ ಮೊದಲ ಎಸೆತವನ್ನು ಎದುರಿಸಲು ಸ್ಟ್ರೈಕ್ ತೆಗೆದುಕೊಂಡ ಕೆಎಲ್ ರಾಹುಲ್ ಮೊದಲ ಎಸೆತವನ್ನು ಸಿಕ್ಸರ್ ಸಿಡಿಸುವ ಯತ್ನದಲ್ಲಿ ಡೀಪ್ ಬ್ಯಾಕ್ವರ್ಡ್​ ಪಾಯಿಂಟ್ ದಿಕ್ಕಿನಲ್ಲಿ ಮೊಹ್ಸಿನ್ ಖಾನ್​ಗೆ ಕ್ಯಾಚ್ ನೀಡಿದರು. ಹೀಗಾಗಿ ರಾಹುಲ್​ಗೆ ಮೊದಲ ಪಂದ್ಯದಲ್ಲಿ ಖಾತೆ ತೆರೆಯಲು ಸಾಧ್ಯವಾಗಲಿಲ್ಲ.

Follow Us