AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

RCB vs SRH: 6,6,6,6.. ಅತಿ ವೇಗದ ಅರ್ಧಶತಕ ಬಾರಿಸಿದ ದೇವದತ್ ಪಡಿಕ್ಕಲ್

RCB vs SRH: 6,6,6,6.. ಅತಿ ವೇಗದ ಅರ್ಧಶತಕ ಬಾರಿಸಿದ ದೇವದತ್ ಪಡಿಕ್ಕಲ್

ಪೃಥ್ವಿಶಂಕರ
|

Updated on:Mar 28, 2026 | 10:53 PM

Share

Devdutt Padikkal fastest fifty: ಐಪಿಎಲ್ 2026 ರ ಉದ್ಘಾಟನಾ ಪಂದ್ಯದಲ್ಲಿ ಆರ್​ಸಿಬಿ 202 ರನ್ ಗುರಿ ಬೆನ್ನತ್ತಿತು. ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ, ದೇವದತ್ ಪಡಿಕ್ಕಲ್ 21 ಎಸೆತಗಳಲ್ಲಿ ಐಪಿಎಲ್ ವೃತ್ತಿಜೀವನದ ವೇಗದ ಅರ್ಧಶತಕ ಬಾರಿಸಿ 61 ರನ್ ಗಳಿಸಿದರು. ಅವರ ಭರ್ಜರಿ ಬ್ಯಾಟಿಂಗ್ ಹಾಗೂ ಕೊಹ್ಲಿ ಜೊತೆಗಿನ ಶತಕದ ಜೊತೆಯಾಟವು ಆರ್​ಸಿಬಿಗೆ ಗೆಲುವಿನ ಭದ್ರ ಬುನಾದಿ ಹಾಕಿತು.

ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2026 ರ ಉದ್ಘಾಟನಾ ಪಂದ್ಯದಲ್ಲಿ ಆರ್​ಸಿಬಿ ಹಾಗೂ ಸನ್​ರೈಸರ್ಸ್​ ಹೈದರಾಬಾದ್ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಸನ್​ರೈಸರ್ಸ್​ ಹೈದರಾಬಾದ್ ತಂಡ 20 ಓವರ್​ಗಳಲ್ಲಿ 9 ವಿಕೆಟ್ ನಷ್ಟಕ್ಕೆ 201 ರನ್ ಕಲೆಹಾಕಿತು. ಗೆಲುವಿಗೆ 202 ರನ್​ಗಳ ಗುರಿ ಪಡೆದ ಆರ್​ಸಿಬಿ ಪರ ಅಬ್ಬರಿಸಿದ ಲೋಕಲ್ ಬಾಯ್ ದೇವದತ್ ಪಡಿಕ್ಕಲ್ ತಮ್ಮ ಐಪಿಎಲ್ ವೃತ್ತಿಜೀವನದ ವೇಗದ ಅರ್ಧಶತಕ ಬಾರಿಸಿ ತಂಡಕ್ಕೆ ಉತ್ತಮ ಆರಂಭ ಒದಗಿಸಿಕೊಟ್ಟರು.

ವಾಸ್ತವವಾಗಿ ಗುರಿ ಬೆನ್ನಟಲು ಬಂದ ಆರ್​ಸಿಬಿಗೆ ಉತ್ತಮ ಆರಂಭ ಸಿಗಲಿಲ್ಲ. ಫೀಲ್ಡಿಂಗ್​ನಲ್ಲಿ ಮಿಂಚಿದ್ದ ಫಿಲ್ ಸಾಲ್ಟ್ ಬ್ಯಾಟಿಂಗ್​ನಲ್ಲಿ ಕಮಾಲ್ ಮಾಡಲು ಸಾಧ್ಯವಾಗಲಿಲ್ಲ. ಕೇವಲ 9 ರನ್ ಗಳಿಸಿ ಔಟಾದರು. ಆ ಬಳಿಕ ಬಂದ ದೇವದತ್ ಪಡಿಕ್ಕಲ್ ಮೊದಲ ಎಸೆತದಲ್ಲೇ ಸಿಕ್ಸರ್ ಬಾರಿಸುವ ಮೂಲಕ ತಮ್ಮ ಖಾತೆ ತೆರೆದರು. ಆ ಬಳಿಕವೂ ಟಾಪ್ ಗೇರ್​ನಲ್ಲಿ ಬ್ಯಾಟಿಂಗ್‌ ಮಾಡಿದ ಪಡಿಕ್ಕಲ್ ಬೌಂಡರಿ ಸಿಕ್ಸರ್​ಗಳ ಮಳೆಗರೆದರು. ಇದರ ಪರಿಣಾಮವಾಗಿ ಆರ್​​ಸಿಬಿ ಕೇವಲ 4 ಓವರ್​ಗಳಲ್ಲಿ ಅರ್ಧಶತಕದ ಗಡಿ ದಾಟಿತು.

ಈ ಹಂತದಲ್ಲಿ ಪಡಿಕ್ಕಲ್ 11 ಎಸೆತಗಳಲ್ಲಿ 34 ರನ್ ಬಾರಿಸಿದ್ದರು. ನಂತರವೂ ಅಬ್ಬರ ಮುಂದುವರೆಸಿದ ಪಡಿಕ್ಕಲ್ ಕೇವಲ 21 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಈ ಮೂಲಕ ಪಡಿಕ್ಕಲ್ ತಮ್ಮ ಐಪಿಎಲ್ ವೃತ್ತಿಜೀವನದ ಅತಿ ವೇಗದ ಅರ್ಧಶತಕ ಬಾರಿಸಿದ ದಾಖಲೆಯನ್ನು ಬರೆದರು. ಅಂತಿಮವಾಗಿ 9ನೇ ಓವರ್​ನಲ್ಲಿ ವಿಕೆಟ್ ಒಪ್ಪಿಸಿದ ಪಡಿಕ್ಕಲ್ 26 ಎಸೆತಗಳಲ್ಲಿ 7 ಬೌಂಡರಿ ಹಾಗೂ 4 ಸಿಕ್ಸರ್ ಸಹಿತ 61 ರನ್ ಬಾರಿಸಿ ಔಟಾದರು. ಹಾಗೆಯೇ ಕೊಹ್ಲಿ ಜೊತೆಗೆ ಎರಡನೇ ವಿಕೆಟ್​ಗೆ ಶತಕದ ಜೊತೆಯಾಟವನ್ನು ನಡೆಸಿ ತಂಡದ ಗೆಲುವನ್ನು ಖಚಿತಪಡಿಸಿದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Mar 28, 2026 10:52 PM
Follow Us