RR vs SRH: ವೈಭವ್ ಔಟಾದಾಗ ಕಾವ್ಯ ಮಾರನ್ ಏನು ಮಾಡಿದ್ರು ನೋಡಿ

Updated on: May 28, 2026 | 7:01 PM

Kavya Maran's Viral Reactionಐಪಿಎಲ್ ಎಲಿಮಿನೇಟರ್ ಪಂದ್ಯದಲ್ಲಿ ವೈಭವ್ ಸೂರ್ಯವಂಶಿ 29 ಎಸೆತಗಳಲ್ಲಿ 97 ರನ್ ಸಿಡಿಸಿ ಮಿಂಚಿದರು. 12 ಸಿಕ್ಸರ್‌ಗಳೊಂದಿಗೆ ಅಬ್ಬರಿಸಿದರೂ, ಕೇವಲ 3 ರನ್‌ಗಳಿಂದ ಶತಕ ವಂಚಿತರಾದರು. ವೈಭವ್ ಅವರ ಅದ್ಭುತ ಆಟಕ್ಕೆ ಎದುರಾಳಿ ಸನ್‌ರೈಸರ್ಸ್ ಹೈದರಾಬಾದ್ ತಂಡದ ಮಾಲೀಕಿ ಕಾವ್ಯಾ ಮಾರನ್ ಕೂಡ ಚಪ್ಪಾಳೆ ತಟ್ಟಿ ಅಭಿನಂದಿಸಿದರು. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಪಂದ್ಯದ ಹೈಲೈಟ್ ಆಯಿತು.:

ಐಪಿಎಲ್ ಎಲಿಮಿನೇಟರ್ ಪಂದ್ಯದಲ್ಲಿ ವೈಭವ್ ಸೂರ್ಯವಂಶಿ ಸಿಕ್ಸರ್‌ಗಳ ಮಳೆ ಸುರಿಸಿ 29 ಎಸೆತಗಳಲ್ಲಿ 97 ರನ್‌ಗಳ ಇನ್ನಿಂಗ್ಸ್ ಆಡಿದರು. ತಮ್ಮ ಇನ್ನಿಂಗ್ಸ್‌ನಲ್ಲಿ 12 ಸಿಕ್ಸರ್‌ಗಳು ಮತ್ತು 5 ಬೌಂಡರಿಗಳನ್ನು ಬಾರಿಸಿದರು, ಆದರೆ ಸೂರ್ಯವಂಶಿ ಕೇವಲ 3 ರನ್​ಗಳಿಂದ ಶತಕ ವಂಚಿತರಾದರು. ಅಬ್ಬರದ ಬ್ಯಾಟಿಂಗ್‌ ಮಾಡಿ ಸನ್​ರೈಸರ್ಸ್​ ಬೌಲರ್​ಗಳನ್ನು ಹೈರಾಣಾಗಿಸಿದ ವೈಭವ್ ಔಟಾದ ಕೂಡಲೇ ಒಂದೆಡೆ ಸನ್​ರೈಸರ್ಸ್​ ಪಾಳಯದಲ್ಲಿ ಸಂತಸ ಮನೆ ಮಾಡಿದರೆ, ಇತ್ತ ರಾಜಸ್ಥಾನ್ ತಂಡದ ಅಭಿಮಾನಿಗಳ ಮುಖದಲ್ಲಿ ಬೇಸರ ಎದ್ದು ಕಾಣಿಸುತ್ತಿತ್ತು.

ವೈಭವ್ ಸೂರ್ಯವಂಶಿ 97 ರನ್ ಗಳಿಸಿ ಪ್ರಫುಲ್ ಹಿಂಗೇಗೆ ವಿಕೆಟ್ ಒಪ್ಪಿಸಿದಾಗ ಇಡೇ ಕ್ರೀಡಾಂಗಣವೇ ನಿರಾಶೆಗೊಂಡಿತು. ಇತ್ತ ಅಭಿಷೇಕ್ ಶರ್ಮಾ ಸೇರಿದಂತೆ ಕೆಲವು ಸನ್‌ರೈಸರ್ಸ್ ಹೈದರಾಬಾದ್ ಆಟಗಾರರು ವೈಭವ್ ಅವರ ಉತ್ತಮ ಇನ್ನಿಂಗ್ಸ್‌ಗಾಗಿ ಅವರನ್ನು ಅಭಿನಂದಿಸಿದರು. ಹಾಗೆಯೇ ಸ್ಟ್ಯಾಂಡ್‌ನಲ್ಲಿ ಕುಳಿತಿದ್ದ ಸನ್​ರೈಸರ್ಸ್​ ತಂಡದ ಮಾಲೀಕಿ ಕಾವ್ಯ ಮಾರನ್ ಕೂಡ ತಮ್ಮ ಆಸನದಿಂದಲೇ ಬೇಸರದ ಮುಖದಲ್ಲಿ ಚಪ್ಪಾಳೆ ತಟ್ಟಿ ಅಭಿನಂದನೆ ಸಲ್ಲಿಸಿದರು. ಅದರ ವಿಡಿಯೋ ಈಗ ಎಲ್ಲೆಡೆ ವೈರಲ್ ಆಗಿದೆ.

Loading...
Unable to load recommendations.
Follow Us
ಪೃಥ್ವಿಶಂಕರ

ಪೃಥ್ವಿಶಂಕರ ಅವರ ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ. ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ಕೆಲಸ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ಇವರು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ಇವರ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More