IPL 2026: LSG vs DC ಪಂದ್ಯದ ವೇಳೆ ಅಭಿಮಾನಿಗಳ ಮಾರಾಮಾರಿ!
Lucknow Super Giants vs Delhi Capitals: ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ಲಕ್ನೋ ಸೂಪರ್ ಜೈಂಟ್ಸ್ 18.4 ಓವರ್ಗಳಲ್ಲಿ 141 ರನ್ಗಳಿಸಿ ಆಲೌಟ್ ಆಗಿದ್ದರು. ಈ ಗುರಿಯನ್ನು ಡೆಲ್ಲಿ ಕ್ಯಾಪಿಟಲ್ಸ್ ತಂಡ 17.1 ಓವರ್ಗಳಲ್ಲಿ ಚೇಸ್ ಮಾಡಿ 6 ವಿಕೆಟ್ಗಳ ಜಯ ಸಾಧಿಸಿದೆ.
ಇಂಡಿಯನ್ ಪ್ರೀಮಿಯರ್ ಲೀಗ್ (IPL) 2026ರ ಸೀಸನ್‌ನಲ್ಲಿ ಕ್ರೀಡಾ ಸ್ಫೂರ್ತಿಗೆ ಮಸಿ ಬಳಿಯುವಂತಹ ಘಟನೆಯೊಂದು ನಡೆದಿದೆ. ಏಪ್ರಿಲ್ 1 ರಂದು ಲಕ್ನೋದ ಏಕನಾ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಲಕ್ನೋ ಸೂಪರ್ ಜೈಂಟ್ಸ್ (LSG) ಮತ್ತು ಡೆಲ್ಲಿ ಕ್ಯಾಪಿಟಲ್ಸ್ (DC) ನಡುವಿನ ಪಂದ್ಯದ ವೇಳೆ ಅಭಿಮಾನಿಗಳು ಪರಸ್ಪರ ಹೊಡೆದಾಡಿಕೊಂಡಿದ್ದಾರೆ.
ಪಂದ್ಯ ನಡೆಯುತ್ತಿದ್ದಾಗ ಸ್ಟೇಡಿಯಂನ ಗ್ಯಾಲರಿಯಲ್ಲಿದ್ದ ಇಬ್ಬರು ವ್ಯಕ್ತಿಗಳ ನಡುವೆ ಮೊದಲು ಮಾತಿನ ಚಕಮಕಿ ಆರಂಭವಾಗಿದೆ. ಇದು ಕ್ಷಣಾರ್ಧದಲ್ಲಿ ವಿಕೋಪಕ್ಕೆ ತಿರುಗಿ, ಒಬ್ಬರಿಗೊಬ್ಬರು ಗುದ್ದಾಟ ಮತ್ತು ಒದೆಯಾಟ ಶುರು ಮಾಡಿದ್ದಾರೆ. ಈ ಮಾರಾಮಾರಿಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದ್ದು, ನೆಟ್ಟಿಗರು ಇದನ್ನು “WWE ಕುಸ್ತಿ” ಎಂದು ವ್ಯಂಗ್ಯವಾಡಿದ್ದಾರೆ.
ಇನ್ನು ಗಲಾಟೆ ಜೋರಾಗುತ್ತಿದ್ದಂತೆ ಸ್ಥಳದಲ್ಲಿದ್ದ ಭದ್ರತಾ ಸಿಬ್ಬಂದಿ ಮತ್ತು ಪೊಲೀಸರು ತಕ್ಷಣ ಮಧ್ಯಪ್ರವೇಶಿಸಿ ಪರಿಸ್ಥಿತಿಯನ್ನು ತಿಳಿಗೊಳಿಸಿದರು. ಗಲಾಟೆ ಮಾಡಿದವರನ್ನು ಸ್ಟೇಡಿಯಂನಿಂದ ಹೊರಹಾಕಲಾಗಿದ್ದು, ಅವರ ವಿರುದ್ಧ ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ ಎಂದು ವರದಿಯಾಗಿದೆ.
ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ಲಕ್ನೋ ಸೂಪರ್ ಜೈಂಟ್ಸ್ 18.4 ಓವರ್ಗಳಲ್ಲಿ 141 ರನ್ಗಳಿಸಿ ಆಲೌಟ್ ಆಗಿದ್ದರು. ಈ ಗುರಿಯನ್ನು ಡೆಲ್ಲಿ ಕ್ಯಾಪಿಟಲ್ಸ್ ತಂಡ 17.1 ಓವರ್ಗಳಲ್ಲಿ ಚೇಸ್ ಮಾಡಿ 6 ವಿಕೆಟ್ಗಳ ಜಯ ಸಾಧಿಸಿದೆ.

