AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಆರ್​​ಸಿಬಿ ಫ್ಯಾನ್ಸ್​​​ಗೆ ಬಿಗ್​ ಶಾಕ್ ನೀಡಿದ ಪೊಲೀಸ್ ಆಯುಕ್ತ ಶ್ರೀಮಂತ್ ಕುಮಾರ್ ಸಿಂಗ್!

ಬೆಂಗಳೂರು ಆರ್​​ಸಿಬಿ ಫ್ಯಾನ್ಸ್​​​ಗೆ ಬಿಗ್​ ಶಾಕ್ ನೀಡಿದ ಪೊಲೀಸ್ ಆಯುಕ್ತ ಶ್ರೀಮಂತ್ ಕುಮಾರ್ ಸಿಂಗ್!

ಅಕ್ಷಯ್​ ಪಲ್ಲಮಜಲು​​
|

Updated on: May 31, 2026 | 6:06 PM

Share

ಐಪಿಎಲ್ ಫೈನಲ್ ಹಿನ್ನೆಲೆಯಲ್ಲಿ ಬೆಂಗಳೂರು ಪೊಲೀಸರು ಸಂಭ್ರಮಾಚರಣೆಗೆ ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಿದ್ದಾರೆ. ಆಯುಕ್ತ ಶ್ರೀಮಂತ್ ಕುಮಾರ್ ಸಿಂಗ್ ರಸ್ತೆಗಳಲ್ಲಿ ಮೆರವಣಿಗೆ, ಪಟಾಕಿ, ಡ್ರಂಕ್ ಅಂಡ್ ಡ್ರೈವ್ ನಿಷೇಧಿಸಿದ್ದಾರೆ. ಸಾರ್ವಜನಿಕ ಎಲ್ಇಡಿ ಸ್ಕ್ರೀನಿಂಗ್ ಕೂಡ ಇರುವುದಿಲ್ಲ. ಮನೆ, ಕ್ಲಬ್‌ಗಳಲ್ಲಿ ಒಳಾಂಗಣದಲ್ಲಿ ಆಚರಿಸಲು ಅವಕಾಶವಿದೆ. ಸಾರ್ವಜನಿಕರಿಗೆ ತೊಂದರೆಯಾಗದಂತೆ ನೋಡಿಕೊಳ್ಳಲು ಪೊಲೀಸರು ಸಿದ್ಧರಾಗಿದ್ದಾರೆ.

ಬೆಂಗಳೂರ, ಮೇ,31: ಐಪಿಎಲ್ 2026 ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗುಜರಾತ್ ಟೈಟನ್ಸ್ ನಡುವಿನ ಹಣಾಹಣಿಯ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಪೊಲೀಸರು ಕಟ್ಟುನಿಟ್ಟಿನ ನಿಯಮಗಳನ್ನು ಪ್ರಕಟಿಸಿದ್ದಾರೆ. ನಗರ ಪೊಲೀಸ್ ಆಯುಕ್ತ ಶ್ರೀಮಂತ್ ಕುಮಾರ್ ಸಿಂಗ್ ಅವರು ಸಾರ್ವಜನಿಕ ಸಂಭ್ರಮಾಚರಣೆಗೆ ಸಂಬಂಧಿಸಿದಂತೆ ಡಿಸಿಪಿಗಳಿಗೆ ವಿಶೇಷ ಸೂಚನೆಗಳನ್ನು ನೀಡಿದ್ದಾರೆ. ಕಳೆದ ವರ್ಷದ ಅನುಭವಗಳನ್ನು ಗಮನದಲ್ಲಿಟ್ಟುಕೊಂಡು, ಈ ಬಾರಿ ರಸ್ತೆಗಳಲ್ಲಿ ಮೆರವಣಿಗೆ, ಪಟಾಕಿ ಸಿಡಿಸುವುದು, ವಾಹನಗಳ ಮೇಲೆ ಹತ್ತಿ ಕುಣಿಯುವುದು ಮತ್ತು ವೀಲಿಂಗ್ ಮಾಡುವಂತಹ ಚಟುವಟಿಕೆಗಳನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಅಲ್ಲದೆ, ಡ್ರಂಕ್ ಅಂಡ್ ಡ್ರೈವ್ ತಪಾಸಣೆಗಳನ್ನು ರಾತ್ರಿಪೂರ್ತಿ ನಡೆಸಲು ಸಂಚಾರಿ ಪೊಲೀಸರಿಗೆ ಸೂಚಿಸಲಾಗಿದೆ. ಸಾರ್ವಜನಿಕವಾಗಿ ಎಲ್ಇಡಿ ಸ್ಕ್ರೀನ್‌ಗಳನ್ನು ಹಾಕಿ ಪಂದ್ಯವನ್ನು ಪ್ರದರ್ಶಿಸುವಂತಿಲ್ಲ. ಮನೆಗಳು, ಕ್ಲಬ್‌ಗಳು ಮತ್ತು ಗೆಸ್ಟ್ ಹೌಸ್‌ಗಳಂತಹ ಖಾಸಗಿ ಒಳಾಂಗಣಗಳಲ್ಲಿ ಸಂಭ್ರಮಾಚರಣೆಗೆ ಅವಕಾಶವಿದೆ, ಆದರೆ ಸಾರ್ವಜನಿಕರಿಗೆ ಯಾವುದೇ ತೊಂದರೆ ಆಗಬಾರದು ಎಂದು ಆಯುಕ್ತರು ಸ್ಪಷ್ಟಪಡಿಸಿದ್ದಾರೆ. ಶಾಂತಿ ಸುವ್ಯವಸ್ಥೆಗೆ ದಕ್ಕೆ ತರುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Akshay Pallamajalu
Akshay Pallamajalu

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More