SRH vs LSG: ಲಕ್ನೋಗೆ ಮೊದಲ ಗೆಲುವು; ಭಾವುಕರಾದ ಮಾಲೀಕ ಸಂಜೀವ್ ಗೋಯೆಂಕಾ
LSG Beats SRH in IPL 2026 Hyderabad Thriller: ಹೈದರಾಬಾದ್‌ನಲ್ಲಿ ನಡೆದ IPL 2026 ಪಂದ್ಯದಲ್ಲಿ ಲಕ್ನೋ ಸೂಪರ್‌ಜೈಂಟ್ಸ್ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ತಮ್ಮ ಮೊದಲ ಗೆಲುವು ದಾಖಲಿಸಿತು. 157 ರನ್‌ಗಳ ಗುರಿಯನ್ನು ಬೆನ್ನಟ್ಟಿದ ಲಕ್ನೋ, ನಾಯಕ ರಿಷಭ್ ಪಂತ್ ಅವರ ತಾಳ್ಮೆಯ ಆಟದಿಂದ ಕೊನೆಯ ಓವರ್‌ನಲ್ಲಿ ಗೆಲುವು ಸಾಧಿಸಿತು. ಈ ರೋಚಕ ಗೆಲುವಿನ ಬಳಿಕ ತಂಡದ ಮಾಲೀಕ ಸಂಜೀವ್ ಗೋಯೆಂಕಾ ಭಾವುಕರಾಗಿ ಸಂಭ್ರಮಿಸಿದರು. ಅವರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಹೈದರಾಬಾದ್ನ ರಾಜೀವ್ ಗಾಂಧಿ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2026 (IPL 2026) ರ 10ನೇ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡವನ್ನು ಮಣಸಿದ ಲಕ್ನೋ ಸೂಪರ್‌ಜೈಂಟ್ಸ್ ಈ ಆವೃತ್ತಿಯಲ್ಲಿ ತನ್ನ ಮೊದಲ ಗೆಲುವು ದಾಖಲಿಸಿತು. ಸನ್‌ರೈಸರ್ಸ್ ನೀಡಿದ 157 ರನ್‌ಗಳ ಗುರಿಯನ್ನು ಬೆನ್ನಟ್ಟಲು ಸಾಕಷ್ಟು ಕಷ್ಟಪಟ್ಟ ಲಕ್ನೋ, ನಾಯಕ ರಿಷಭ್ ಪಂತ್ ಅವರ ತಾಳ್ಮೆಯ ಆಟದಿಂದಾಗಿ ಕೊನೆಯ ಓವರ್‌ನಲ್ಲಿ ಗೆಲುವು ದಾಖಲಿಸಿತು. ಕೊನೆಯ ಓವರ್ವರೆಗೂ ರೋಚಕತೆಯಿಂದ ಕೂಡಿದ ಈ ಪಂದ್ಯವನ್ನು ಲಕ್ನೋ ತಂಡ ಗೆಲ್ಲುತ್ತಿದ್ದಂತೆ ತಂಡದ ಮಾಲೀಕ ಸಂಜೀವ್ ಗೋಯೆಂಕಾ ಅವರು ತುಂಬಾ ಭಾವುಕರಾಗಿ ಕಾಣಿಸಿಕೊಂಡರು. ತಂಡದ ಗೆಲುವನ್ನು ಚಪ್ಪಾಳೆ ತಟ್ಟುತ್ತ ಸಂಭ್ರಮಿಸಿದರು. ಇದೀಗ ಅದರ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
Loading...
Unable to load recommendations.
Follow Us