AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಕಿ ಬೌಲಿಂಗ್: ಒಂದೇ ಒಂದು ಬೌಂಡರಿ ಹೊಡೆಸಿಕೊಳ್ಳದ ಶಮಿ!

ಬೆಂಕಿ ಬೌಲಿಂಗ್: ಒಂದೇ ಒಂದು ಬೌಂಡರಿ ಹೊಡೆಸಿಕೊಳ್ಳದ ಶಮಿ!

ಝಾಹಿರ್ ಯೂಸುಫ್
|

Updated on: Apr 06, 2026 | 1:07 PM

Share

IPL 2026 SRH vs LSG: ಮೊಹಮ್ಮದ್ ಶಮಿಯ ಈ ಮಾರಕ ದಾಳಿಗೆ ಕಂಗೆಟ್ಟ ಸನ್​ರೈಸರ್ಸ್ ಹೈದರಾಬಾದ್ ತಂಡವು ಈ ಪಂದ್ಯದಲ್ಲಿ 20 ಓವರ್​ಗಳಲ್ಲಿ ಕಲೆಹಾಕಿದ್ದು ಕೇವಲ 156 ರನ್​ಗಳು ಮಾತ್ರ. ಈ ಗುರಿಯನ್ನು 19.5 ಓವರ್​ಗಳಲ್ಲಿ ಚೇಸ್ ಮಾಡುವ ಮೂಲಕ ಲಕ್ನೋ ಸೂಪರ್ ಜೈಂಟ್ಸ್ ತಂಡ 5 ವಿಕೆಟ್​ಗಳ ಜಯ ಸಾಧಿಸಿದೆ.

ಇಂಡಿಯನ್ ಪ್ರೀಮಿಯರ್ ಲೀಗ್​ನ 10ನೇ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡದ ವೇಗಿ ಮೊಹಮ್ಮದ್ ಶಮಿ ಮಾರಕ ದಾಳಿ ಸಂಘಟಿಸಿದ್ದಾರೆ. ಬಲಿಷ್ಠ ಬ್ಯಾಟಿಂಗ್ ಲೈನಲ್ ಹೊಂದಿರುವ ಸನ್​ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ 4 ಓವರ್ ಎಸೆದ ಶಮಿ ನೀಡಿದ್ದು ಕೇವಲ 9 ರನ್​ಗಳು ಮಾತ್ರ. ಇದರ ನಡುವೆ 2 ವಿಕೆಟ್​ಗಳನ್ನು ಸಹ ಕಬಳಿಸಿದ್ದಾರೆ.

ವಿಶೇಷ ಎಂದರೆ ಮೊಹಮ್ಮದ್ ಶಮಿ ತಮ್ಮ 24 ಎಸೆತಗಳಲ್ಲಿ ಒಂದೇ ಒಂದು ಬೌಂಡರಿ ಹೊಡೆಸಿಕೊಂಡಿಲ್ಲ. ಅಂದರೆ ಶಮಿ ಓವರ್​ನಲ್ಲಿ ಫೋರ್ ಅಥವಾ ಸಿಕ್ಸ್ ಬಾರಿಸಲು ಎಸ್​ಆರ್​ಹೆಚ್ ತಂಡದ ಯಾವುದೇ ಬ್ಯಾಟರ್​ಗೆ ಸಾಧ್ಯವಾಗಿಲ್ಲ.

ಇನ್ನು ಇಪ್ಪತ್ತನಾಲ್ಕು ಎಸೆತಗಳಲ್ಲಿ ಶಮಿ ಬರೋಬ್ಬರಿ 18 ಎಸೆತಗಳನ್ನು ಡಾಟ್ ಮಾಡಿದ್ದರು ಎಂಬುದು ಮತ್ತೊಂದು ವಿಶೇಷ. ಈ ಮೂಲಕ ಕರಾರುವಾಕ್ ದಾಳಿ ಸಂಘಟಿಸುವ ಮೂಲಕ ಮೊಹಮ್ಮದ್ ಶಮಿ ಎಲ್ಲರನ್ನು ಚಕಿತಗೊಳಿಸಿದ್ದಾರೆ.

ಮೊಹಮ್ಮದ್ ಶಮಿಯ ಈ ಮಾರಕ ದಾಳಿಗೆ ಕಂಗೆಟ್ಟ ಸನ್​ರೈಸರ್ಸ್ ಹೈದರಾಬಾದ್ ತಂಡವು ಈ ಪಂದ್ಯದಲ್ಲಿ 20 ಓವರ್​ಗಳಲ್ಲಿ ಕಲೆಹಾಕಿದ್ದು ಕೇವಲ 156 ರನ್​ಗಳು ಮಾತ್ರ. ಈ ಗುರಿಯನ್ನು 19.5 ಓವರ್​ಗಳಲ್ಲಿ ಚೇಸ್ ಮಾಡುವ ಮೂಲಕ ಲಕ್ನೋ ಸೂಪರ್ ಜೈಂಟ್ಸ್ ತಂಡ 5 ವಿಕೆಟ್​ಗಳ ಜಯ ಸಾಧಿಸಿದೆ.

 

Follow Us