AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

VIDEO: ಚೆನ್ನೈನಲ್ಲಿ ಹೈಡ್ರಾಮಾ: ಅಂಪೈರ್​ ಜೊತೆ ನಿತೀಶ್ ರಾಣಾ ವಾಗ್ವಾದ!

VIDEO: ಚೆನ್ನೈನಲ್ಲಿ ಹೈಡ್ರಾಮಾ: ಅಂಪೈರ್​ ಜೊತೆ ನಿತೀಶ್ ರಾಣಾ ವಾಗ್ವಾದ!

ಝಾಹಿರ್ ಯೂಸುಫ್
|

Updated on: Apr 12, 2026 | 8:03 AM

Share

IPL 2026 CSK vs DC: ಇಂಡಿಯನ್ ಪ್ರೀಮಿಯರ್ ಲೀಗ್​ನ 18ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಸಂಜು ಸ್ಯಾಮ್ಸನ್ (115) ಅಜೇಯ ಶತಕ ಸಿಡಿಸಿದ್ದಾರೆ. ಈ ಶತಕದ ನೆರವಿನೊಂದಿಗೆ ಸಿಎಸ್​ಕೆ ತಂಡವು 20 ಓವರ್​ಗಳಲ್ಲಿ 212 ರನ್ ಕಲೆಹಾಕಿದ್ದರು. ಈ ಗುರಿ ಬೆನ್ನತ್ತಿದ ಡೆಲ್ಲಿ ಕ್ಯಾಪಿಟಲ್ಸ್ ತಂಡವು 20 ಓವರ್​ಗಳಲ್ಲಿ 189 ರನ್​ಗಳಿಸಿ ಆಲೌಟ್ ಆಗಿದೆ. ಈ ಮೂಲಕ ಸಿಎಸ್​ಕೆ 23 ರನ್​ಗಳ ಜಯ ಸಾಧಿಸಿದೆ.

IPL 2026: ಐಪಿಎಲ್ 2026ರ ಚೆನ್ನೈ ಸೂಪರ್ ಕಿಂಗ್ಸ್ (CSK) ಮತ್ತು ಡೆಲ್ಲಿ ಕ್ಯಾಪಿಟಲ್ಸ್ (DC) ನಡುವಿನ ಪಂದ್ಯದಲ್ಲಿ ವೇಳೆ ಅಂಪೈರ್ ತೆಗೆದುಕೊಂಡ ನಿರ್ಧಾರವು ಇದೀಗ ಹೊಸ ವಿವಾದಕ್ಕೆ ಕಾರಣವಾಗಿದೆ.  ಚೆನ್ನೈನ ಚೆಪಾಕ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸಿಎಸ್​ಕೆ 20 ಓವರ್​ಗಳಲ್ಲಿ 212 ರನ್​ ಕಲೆಹಾಕಿತು.

ಈ ಗುರಿಯನ್ನು ಬೆನ್ನತ್ತಿದ ಡೆಲ್ಲಿ ಕ್ಯಾಪಿಟಲ್ಸ್ ತಂಡವು 18 ಓವರ್​ಗಳಲ್ಲಿ 181 ರನ್​ ಗಳಿಸಿದ್ದರು. ಅದರಂತೆ ಕೊನೆಯ 12 ಎಸೆತಗಳಲ್ಲಿ 31 ರನ್​ಗಳು ಬೇಕಿದ್ದವು. ಈ ವೇಳೆ ಕ್ರೀಸ್​ನಲ್ಲಿದ್ದ ಟ್ರಿಸ್ಟನ್ ಸ್ಟಬ್ಸ್ ಗ್ಲೌಸ್ ಬದಲಿಸಲು ಮನವಿ ಮಾಡಿದ್ದರು.

ಚೆನ್ನೈನ ವಿಪರೀತ ಸೆಕೆಯಿಂದಾಗಿ ಬೆವರುತ್ತಿದ್ದ ಕಾರಣ ತಮ್ಮ ‘ಗ್ಲೌಸ್’ ಬದಲಿಸಲು ಸ್ಟಬ್ಸ್​, ಅಂಪೈರ್ ಬಳಿ ಅನುಮತಿ ಕೇಳಿದರು. ಆದರೆ, ಆಟ ವಿಳಂಬವಾಗುತ್ತದೆ ಎಂಬ ಕಾರಣ ನೀಡಿ ಅಂಪೈರ್ ಇದಕ್ಕೆ ನಿರಾಕರಿಸಿದ್ದಾರೆ.

ಅಂಪೈರ್ ನಿರ್ಧಾರದಿಂದ ಅಸಮಾಧಾನಗೊಂಡ ಸ್ಟಬ್ಸ್, ಹಳೆಯ ಗ್ಲೌಸ್‌ನಲ್ಲೇ ಆಟ ಮುಂದುವರಿಸಿದರು. ಆದರೆ, ದುರಾದೃಷ್ಟವಶಾತ್ ಅದರ ಮುಂದಿನ ಎಸೆತದಲ್ಲೇ ಕ್ಯಾಚ್ ನೀಡಿ ಔಟಾದರು. ಇದರಿಂದ ಸ್ಟಬ್ಸ್ ತಾಳ್ಮೆ ಕಳೆದುಕೊಂಡರು.

ಇತ್ತ ಟ್ರಿಸ್ಟನ್ ಸ್ಟಬ್ಸ್ ಔಟಾಗಿ ಪೆವಿಲಿಯನ್​ಗೆ ಮರಳುತ್ತಿದ್ದಂತೆ ಡೆಲ್ಲಿ ಕ್ಯಾಪಿಟಲ್ಸ್​ ತಂಡದ ಹಿರಿಯ ಆಟಗಾರ ನಿತೀಶ್ ರಾಣಾ ಮತ್ತು ಬ್ಯಾಟಿಂಗ್ ಕೋಚ್ ವೇಣುಗೋಪಾಲ್ ರಾವ್ ಬೌಂಡರಿ ಲೈನ್‌ ಬಳಿ ಇದ್ದ ಅಂಪೈರ್ ಜೊತೆ ಸುದೀರ್ಘವಾಗಿ ವಾಗ್ವಾದ ನಡೆಸಿದರು.

“ಬೇರೆ ತಂಡಗಳಿಗೆ ಅವಕಾಶ ನೀಡುವಾಗ ನಮಗೆ ಯಾಕಿಲ್ಲ?” ಎಂದು ರಾಣಾ ಪ್ರಶ್ನಿಸುತ್ತಿರುವುದು ಕ್ಯಾಮೆರಾದಲ್ಲಿ ಸೆರೆಯಾಗಿದೆ. ಇದೀಗ ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಅಂಪೈರ್​ ನಡೆಗೆ ಭಾರೀ ಆಕ್ರೋಶಗಳು ವ್ಯಕ್ತವಾಗುತ್ತಿದೆ.

ಇನ್ನು ಈ ಪಂದ್ಯದಲ್ಲಿ ಸಿಎಸ್​ಕೆ ತಂಡ ನೀಡಿದ 213 ರನ್​​ಗಳ ಗುರಿ ಬೆನ್ನತ್ತಿದ ಡೆಲ್ಲಿ ಕ್ಯಾಪಿಟಲ್ಸ್ ತಂಡವು 20 ಓವರ್​ಗಳಲ್ಲಿ 189 ರನ್​ಗಳಿಸಿ ಆಲೌಟ್ ಆಗಿದೆ. ಈ ಮೂಲಕ ಡೆಲ್ಲಿ ಕ್ಯಾಪಿಟಲ್ಸ್ ತಂಡ 23 ರನ್​ಗಳಿಂದ ಸೋಲೊಪ್ಪಿಕೊಂಡಿದೆ.

 

Follow Us