ಹಲ್ಲಾ ಬೋಲ್… ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ರವೀಂದ್ರ ಜಡೇಜಾ ಎಂಟ್ರಿ

Updated on: Nov 15, 2025 | 10:53 AM

Ravindra Jadeja: ಕಳೆದ 12 ವರ್ಷಗಳಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಪರ 200 ಪಂದ್ಯಗಳನ್ನಾಡಿರುವ ರವೀಂದ್ರ ಜಡೇಜಾ 149 ಇನಿಂಗ್ಸ್​ಗಳ ಮೂಲಕ 2354 ರನ್ ಕಲೆಹಾಕಿದ್ದಾರೆ. ಇದರ ನಡುವೆ 5 ಅರ್ಧಶತಕಗಳನ್ನು ಸಹ ಬಾರಿಸಿದ್ದಾರೆ. ಅಷ್ಟೇ ಅಲ್ಲದೆ 3 ಬಾರಿ ಸಿಎಸ್​ಕೆ ತಂಡ ಚಾಂಪಿಯನ್ ಪಟ್ಟಕ್ಕೇರುವಲ್ಲಿ ಜಡೇಜಾ ಪ್ರಮುಖ ಪಾತ್ರವಹಿಸಿದ್ದರು. 

ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19ರ ಮಿನಿ ಆಕ್ಷನ್​ಗೂ ಮುನ್ನ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಸ್ಟಾರ್ ಆಟಗಾರ ರವೀಂದ್ರ ಜಡೇಜಾ (Ravindra jadeja) ಅವರನ್ನು ರಾಜಸ್ಥಾನ್ ರಾಯಲ್ಸ್ ಫ್ರಾಂಚೈಸಿ ಟ್ರೇಡ್ ಮಾಡಿಕೊಂಡಿದೆ. ಆರ್​ಆರ್​ ಫ್ರಾಂಚೈಸಿಯು ಸಂಜು ಸ್ಯಾಮ್ಸನ್ ಅವರನ್ನು ನೀಡಿ ರವೀಂದ್ರ ಜಡೇಜಾ ಹಾಗೂ ಸ್ಯಾಮ್ ಕರನ್ ಅವರನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದೆ. ಇದೀಗ ಈ ಟ್ರೇಡ್​ ಅಧಿಕೃತವಾಗಿದ್ದು, ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಜಡೇಜಾ ಎಂಟ್ರಿಯ ವಿಡಿಯೋವನ್ನು ಆರ್​ಆರ್ ಫ್ರಾಂಚೈಸಿ ತನ್ನ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಹಂಚಿಕೊಂಡಿದೆ.

ಇದರೊಂದಿಗೆ ಕಳೆದ 12 ವರ್ಷಗಳಿಂದ ಚೆನ್ನೈ ಸೂಪರ್ ಕಿಂಗ್ಸ್​ ತಂಡದ ಭಾಗವಾಗಿದ್ದ ರವೀಂದ್ರ ಜಡೇಜಾ ಸಿಎಸ್​ಕೆ ಕೆರಿಯರ್ ಯುಗಾಂತ್ಯವಾಗಿದೆ. ಅಷ್ಟೇ ಅಲ್ಲದೆ ಜಡೇಜಾ ಮತ್ತೆ ತನ್ನ ಮಾಜಿ ತಂಡಕ್ಕೆ ಮರಳಿದಂತಾಗಿದೆ. ಅಂದರೆ ಜಡೇಜಾ 2008 ರಲ್ಲಿ ರಾಜಸ್ಥಾನ್ ರಾಯಲ್ಸ್ ಪರ ಕಣಕ್ಕಿಳಿಯುವ ಮೂಲಕ ಐಪಿಎಲ್ ಕೆರಿಯರ್ ಆರಂಭಿಸಿದ್ದರು. ಇದೀಗ 15 ವರ್ಷಗಳ ಬಳಿಕ ಮತ್ತೆ ರಾಜಸ್ಥಾನ್ ರಾಯಲ್ಸ್​ ತಂಡಕ್ಕೆ ಸೇರ್ಪಡೆಯಾಗಿದ್ದಾರೆ.

ಕಳೆದ 12 ವರ್ಷಗಳಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಪರ 200 ಪಂದ್ಯಗಳನ್ನಾಡಿರುವ ರವೀಂದ್ರ ಜಡೇಜಾ 149 ಇನಿಂಗ್ಸ್​ಗಳ ಮೂಲಕ 2354 ರನ್ ಕಲೆಹಾಕಿದ್ದಾರೆ. ಇದರ ನಡುವೆ 5 ಅರ್ಧಶತಕಗಳನ್ನು ಸಹ ಬಾರಿಸಿದ್ದಾರೆ. ಅಷ್ಟೇ ಅಲ್ಲದೆ 3 ಬಾರಿ ಸಿಎಸ್​ಕೆ ತಂಡ ಚಾಂಪಿಯನ್ ಪಟ್ಟಕ್ಕೇರುವಲ್ಲಿ ಜಡೇಜಾ ಪ್ರಮುಖ ಪಾತ್ರವಹಿಸಿದ್ದರು.  ಇದೀಗ ಐಪಿಎಲ್​ನ ಚೊಚ್ಚಲ ಚಾಂಪಿಯನ್ ರಾಜಸ್ಥಾನ್ ರಾಯಲ್ಸ್ ಪರ ಕಣಕ್ಕಿಳಿಯಲು ರವೀಂದ್ರ ಜಡೇಜಾ ಸಜ್ಜಾಗಿದ್ದಾರೆ.