RCB vs GT: ಶತಕ ವಂಚಿತರಾದರೂ ವಿಶ್ವ ದಾಖಲೆ ಮುರಿದ ರಜತ್ ಪಾಟಿದರ್
Rajat Patidar Breaks World Record: ರಾಯಲ್ ಚಾಲೆಂಜರ್ಸ್ ಬೆಂಗಳೂರು ನಾಯಕ ರಜತ್ ಪಾಟಿದಾರ್ ಐಪಿಎಲ್ 2026 ಕ್ವಾಲಿಫೈಯರ್ 1 ಪಂದ್ಯದಲ್ಲಿ ಗುಜರಾತ್ ವಿರುದ್ಧ 33 ಎಸೆತಗಳಲ್ಲಿ ಅಜೇಯ 93 ರನ್ ಗಳಿಸಿ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದರು. 9 ಸಿಕ್ಸರ್ ಸಹಿತ ಈ ಇನ್ನಿಂಗ್ಸ್, ಟಿ20 ಕ್ರಿಕೆಟ್‌ನಲ್ಲಿ ನಾಯಕನಾಗಿ ಒಂದೇ ಟೂರ್ನಮೆಂಟ್‌ನಲ್ಲಿ ಅತಿ ಹೆಚ್ಚು ಸಿಕ್ಸರ್‌ಗಳ ವಿಶ್ವದಾಖಲೆ ಮುರಿಯಿತು. ಅವರು 41 ಸಿಕ್ಸರ್‌ಗಳೊಂದಿಗೆ ರಿಯಾನ್ ಪರಾಗ್ ದಾಖಲೆಯನ್ನು ಮುರಿದು ಇತಿಹಾಸ ಸೃಷ್ಟಿಸಿದ್ದಾರೆ.
ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ಕ್ರೀಡಾಂಗಣದಲ್ಲಿ ನಡೆದ ಗುಜರಾತ್ ವಿರುದ್ಧದ ಐಪಿಎಲ್ 2026 ರ ಕ್ವಾಲಿಫೈಯರ್ 1 ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ರಜತ್ ಪಾಟಿದರ್, ಸಿಡಿಲಬ್ಬರದ ಇನ್ನಿಂಗ್ಸ್ ಆಡಿದರು. ನಿರ್ಣಾಯಕ ಪಂದ್ಯದಲ್ಲಿ ನಾಯಕನ ಇನ್ನಿಂಗ್ಸ್ ಆಡಿದ ರಜತ್ ಪಾಟಿದರ್, 33 ಎಸೆತಗಳಲ್ಲಿ 283.82 ಸ್ಟ್ರೈಕ್ ರೇಟ್‌ನಲ್ಲಿ ಬ್ಯಾಟ್ ಬೀಸಿ 9 ಸಿಕ್ಸರ್ ಮತ್ತು 5 ಬೌಂಡರಿಗಳೊಂದಿಗೆ ಅಜೇಯ 93 ರನ್ ಗಳಿಸಿದರು. ರಜತ್ ಶತಕ ಬಾರಿಸುವ ಅವಕಾಶದಿಂದ ವಂಚಿತರಾದರೂ ಟಿ20 ಕ್ರಿಕೆಟ್‌ನಲ್ಲಿ ವಿಶ್ವ ದಾಖಲೆಯೊಂದನ್ನು ಮುರಿದಿದ್ದಾರೆ.
ಗುಜರಾತ್ ವಿರುದ್ಧದ ಈ ಪಂದ್ಯದಲ್ಲಿ ಬರೋಬ್ಬರಿ 9 ಸಿಕ್ಸರ್ಗಳನ್ನು ಬಾರಿಸಿದ ರಜತ್, ಟಿ20 ಟೂರ್ನಮೆಂಟ್‌ವೊಂದರನ್ನು ಅತಿ ಹೆಚ್ಚು ಸಿಕ್ಸರ್ಗಳನ್ನು ಬಾರಿಸಿದ ನಾಯಕರ ಪಟ್ಟಿಯಲ್ಲಿ ರಿಯಾನ್ ಪರಾಗ್ ಅವರ ದಾಖಲೆ ಮುರಿದು ಹೊಸ ವಿಶ್ವದಾಖಲೆ ನಿರ್ಮಿಸಿದ್ದಾರೆ. ಈ ಐಪಿಎಲ್‌ನಲ್ಲಿ ಇದುವರೆಗೆ 41 ಸಿಕ್ಸರ್ಗಳನ್ನು ಬಾರಿಸಿರುವ ರಜತ್, 2023-24 ರ ಸೈಯದ್ ಮುಷ್ತಾಕ್ ಅಲಿ ಟಿ20 ಟ್ರೋಫಿಯಲ್ಲಿ ಅಸ್ಸಾಂ ತಂಡದ ನಾಯಕನಾಗಿ 40 ಸಿಕ್ಸರ್ಗಳನ್ನು ಬಾರಿಸಿದ್ದ ರಿಯಾನ್ ಪರಾಗ್ ಅವರ ದಾಖಲೆಯನ್ನು ಮುರಿದರು.
2028ರ ಎಲೆಕ್ಷನ್ ಗೆಲ್ಲಲು ಜೋಶಿಗೆ ಸಾರಥ್ಯ?ಇದಕ್ಕೆ ಅವರು ಹೇಳಿದ್ದೇನು?
ದೀದಿ ಕೋಟೆಯನ್ನು ಬಿಜೆಪಿ ಛಿದ್ರಗೊಳಿಸಿದ್ದು ಹೇಗೆ? ಪ್ರಲ್ಹಾದ್ ಜೋಶಿ ಮಾಹಿತಿ
ಮಮತಾ ಬ್ಯಾನರ್ಜಿ ಮನೆ ಹೊರಗೆ ಟಿಎಂಸಿ ಶಾಸಕ ಕುನಾಲ್ ಘೋಷ್ ಮೇಲೆ ಮೊಟ್ಟೆ ದಾಳಿ
ಮಾಜಿ ಸೈನಿಕನ ಸಾವಿಗೆ ಟ್ವಿಸ್ಟ್:FSL ವರದಿಯನ್ನೇ ತಿರುಚಿದ ಗ್ಯಾಂಗ್!

