AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2026 Final: ಫೈನಲ್ ಪಂದ್ಯದಲ್ಲಿ ವೇಗದ ಅರ್ಧಶತಕ ಬಾರಿಸಿದ ಕೊಹ್ಲಿ

IPL 2026 Final: ಫೈನಲ್ ಪಂದ್ಯದಲ್ಲಿ ವೇಗದ ಅರ್ಧಶತಕ ಬಾರಿಸಿದ ಕೊಹ್ಲಿ

ಪೃಥ್ವಿಶಂಕರ
|

Updated on:Jun 01, 2026 | 12:12 AM

Share

Virat Kohli Fastest Fifty: ಐಪಿಎಲ್ 2026 ರಲ್ಲಿ ಆರ್​ಸಿಬಿ ಸತತ ಎರಡನೇ ಬಾರಿ ಟ್ರೋಫಿ ಗೆದ್ದಿದೆ. ಫೈನಲ್‌ನಲ್ಲಿ ಗುಜರಾತ್ ವಿರುದ್ಧದ ಭರ್ಜರಿ ಗೆಲುವಿಗೆ ವಿರಾಟ್ ಕೊಹ್ಲಿ ಅಜೇಯ 25 ಎಸೆತಗಳಲ್ಲಿ ಬಾರಿಸಿದ ವೇಗದ ಅರ್ಧಶತಕ ಪ್ರಮುಖ ಕಾರಣ. ಇದು ಕೊಹ್ಲಿಯ ಐಪಿಎಲ್ ವೃತ್ತಿಜೀವನದ ಅತಿ ವೇಗದ ಅರ್ಧಶತಕವಾಗಿದ್ದು, ತಮ್ಮ ಹಿಂದಿನ ದಾಖಲೆಯನ್ನು ಮುರಿದು ಇತಿಹಾಸ ಸೃಷ್ಟಿಸಿದ್ದಾರೆ.

ಐಪಿಎಲ್ 2026 ರ ಫೈನಲ್‌ನಲ್ಲಿ ಗುಜರಾತ್ ತಂಡವನ್ನು ಮಣಿಸಿದ ಆರ್​ಸಿಬಿ ಸತತ ಎರಡನೇ ಬಾರಿಗೆ ಟ್ರೋಫಿ ಎತ್ತಿಹಿಡಿದಿದೆ. ತಂಡದ ಈ ಗೆಲುವಿನಲ್ಲಿ ಮಾಜಿ ನಾಯಕ ವಿರಾಟ್ ಕೊಹ್ಲಿ ಅವರ ಅಜೇಯ ಅರ್ಧಶತಕವೂ ಪ್ರಮುಖ ಪಾತ್ರವಹಿಸಿತು. ಗುಜರಾತ್ ನೀಡಿದ 156 ರನ್​ಗಳ ಗುರಿ ಬೆನ್ನಟ್ಟಿದ ಆರ್​ಸಿಬಿ ಪರ ವಿರಾಟ್ ಕೊಹ್ಲಿ ಸ್ಫೋಟಕ ಬ್ಯಾಟಿಂಗ್‌ ಪ್ರದರ್ಶನ ನೀಡುವ ಮೂಲಕ ತಂಡವನ್ನು ಕೇವಲ 3.3 ಓವರ್​ಗಳಲ್ಲಿಯೇ 50 ರನ್​ಗಳ ಗಡಿ ದಾಟಿಸಿದರು. ಹಾಗೆಯೇ ಕೇವಲ 25 ಎಸೆತಗಳಲ್ಲಿ ಕೊಹ್ಲಿ ತಮ್ಮ ಅರ್ಧಶತಕವನ್ನು ಪೂರೈಸಿದರು. ಇದು ಕೊಹ್ಲಿ ಅವರ ಐಪಿಎಲ್ ವೃತ್ತಿಜೀವನದ ಅತಿ ವೇಗದ ಅರ್ಧಶತಕವೂ ಆಗಿದೆ. ಅದರಲ್ಲೂ ಫೈನಲ್ ಪಂದ್ಯದಲ್ಲಿ ಈ ಐತಿಹಾಸಿಕ ಅರ್ಧಶತಕ ಸಿಡಿದಿದ್ದು ಸ್ಮರಣೀಯವಾಗಿತ್ತು.

ಈ ಹಿಂದೆ ಕೊಹ್ಲಿ 2018 ರ ಐಪಿಎಲ್‌ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 26 ಎಸೆತಗಳಲ್ಲಿ 50 ರನ್ ಬಾರಿಸಿದ್ದರು. ಇದು ಈವರೆಗಿನ ದಾಖಲೆಯಾಗಿತ್ತು. ಇದೀಗ 25 ಎಸೆತಗಳಲ್ಲಿ ಅರ್ಧಶತಕ ಬಾರಿಸುವ ಮೂಲಕ ಕೊಹ್ಲಿ ತಮ್ಮ ಹಿಂದಿನ ದಾಖಲೆಯನ್ನು ಮುರಿದರು. ಬರೋಬ್ಬರಿ ಎಂಟು ವರ್ಷಗಳ ನಂತರ ಈ ಸಾಧನೆ ಮಾಡಿದ ಕೊಹ್ಲಿ, ಐಪಿಎಲ್ ಫೈನಲ್‌ನಲ್ಲಿ ವೇಗದ ಅರ್ಧಶತಕ ಬಾರಿಸಿದ ಆಟಗಾರರ ಪಟ್ಟಿಯಲ್ಲಿ ಜಂಟಿಯಾಗಿ ಎರಡನೇ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಫೈನಲ್‌ನಲ್ಲಿ ವೇಗದ ಅರ್ಧಶತಕ ಬಾರಿಸಿದ ದಾಖಲೆ ಸುರೇಶ್ ರೈನಾ, ಡೇವಿಡ್ ವಾರ್ನರ್ ಮತ್ತು ವೆಂಕಟೇಶ್ ಅಯ್ಯರ್ ಅವರ ಹೆಸರಿನಲ್ಲಿದೆ. ಈ ಮೂವರು ಕೇವಲ 24 ಎಸೆತಗಳಲ್ಲಿ ಅರ್ಧಶತಕ ಬಾರಿಸಿದ್ದರು. ಇದೀಗ ಜಂಟಿಯಾಗಿ ಎರಡನೇ ಸ್ಥಾನದಲ್ಲಿರುವ ಕೊಹ್ಲಿ ಜೊತೆಗೆ, ರೋಹಿತ್ ಶರ್ಮಾ ಮತ್ತು ಕ್ರಿಸ್ ಗೇಲ್ ಕೂಡ ಫೈನಲ್‌ನಲ್ಲಿ ತಲಾ 25 ಎಸೆತಗಳಲ್ಲಿ ಅರ್ಧಶತಕ ಬಾರಿಸಿದ್ದಾರೆ.

Published on: Jun 01, 2026 12:11 AM
Follow Us
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More