AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

RR vs RCB: 6,6,6,6.. ರಾಜಸ್ಥಾನ್ ವಿರುದ್ಧ ಅಬ್ಬರಿಸಿದ ರಜತ್ ಪಾಟಿದರ್

RR vs RCB: 6,6,6,6.. ರಾಜಸ್ಥಾನ್ ವಿರುದ್ಧ ಅಬ್ಬರಿಸಿದ ರಜತ್ ಪಾಟಿದರ್

ಪೃಥ್ವಿಶಂಕರ
|

Updated on:Apr 10, 2026 | 10:35 PM

Share

Rajat Patidar's Heroic Half-Century: ಗುವಾಹಟಿಯ ಬರ್ಸಪರ ಕ್ರೀಡಾಂಗಣದಲ್ಲಿ ನಡೆದ ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ, ಆರಂಭಿಕ ಕುಸಿತದಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸಂಕಷ್ಟಕ್ಕೆ ಸಿಲುಕಿತ್ತು. ಈ ಹಂತದಲ್ಲಿ ನಾಯಕ ರಜತ್ ಪಾಟಿದಾರ್ ಸ್ಮರಣೀಯ 63 ರನ್‌ಗಳ ಅರ್ಧಶತಕ ಗಳಿಸಿ ತಂಡವನ್ನು 201 ರನ್‌ಗಳ ದೊಡ್ಡ ಮೊತ್ತ ತಲುಪಲು ನೆರವಾದರು. ಅವರ ನಿರ್ಣಾಯಕ ಇನ್ನಿಂಗ್ಸ್ ಆರ್​ಸಿಬಿಯ ಸ್ಕೋರ್‌ಬೋರ್ಡ್‌ಗೆ ಬಲ ತುಂಬಿತು. ವೆಂಕಟೇಶ್ ಅಯ್ಯರ್ ಕೂಡ ಉತ್ತಮ ಪ್ರದರ್ಶನ ನೀಡಿದರು.

ಗುವಾಹಟಿಯ ಬರ್ಸಪರ ಕ್ರೀಡಾಂಗಣದಲ್ಲಿ ನಡೆದ ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ರಜತ್ ಪಾಟಿದರ್ ಸ್ಮರಣೀಯ ಇನ್ನಿಂಗ್ಸ್ ಆಡಿದರು. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಆರ್​ಸಿಬಿ 100 ರನ್​ಗಳ ಗಡಿ ದಾಟುವ ಮುನ್ನವೇ ಪ್ರಮುಖ 6 ವಿಕೆಟ್‌ಗಳನ್ನು ಕಳೆದುಕೊಂಡಿತು. ಈ ಹಂತದಲ್ಲಿ ನಾಯಕನ ಇನ್ನಿಂಗ್ಸ್ ಆಡಿದ ರಜತ್ ಪಾಟಿದರ್ ಅರ್ಧಶತಕದ ಇನ್ನಿಂಗ್ಸ್ ಆಡಿ ತಂಡ 200 ರನ್​ಗಳ ಗಡಿ ದಾಟುವಲ್ಲಿ ಪ್ರಮುಖ ಪಾತ್ರವಹಿಸಿದರು.

ರಾಜಸ್ಥಾನ್ ವಿರುದ್ಧ ಪ್ರಮುಖ ಬ್ಯಾಟರ್​ಗಳು ರನ್​ಗಳಿಸಲು ಸಾಧ್ಯವಾಗದೆ ಬಹುಬೇಗನೇ ವಿಕೆಟ್ ಒಪ್ಪಿಸಿದಾಗ ನೆಲ ಕಚ್ಚಿ ನಿಂತ ರಜತ್ ನಿರ್ಣಾಯಕ ಇನ್ನಿಂಗ್ಸ್ ಆಡಿದರು. ಇದರ ಜೊತೆಗೆ ತಂಡವನ್ನು 150 ರನ್​ಗಳ ಗಡಿ ಕೂಡ ದಾಟಿಸಿದರು. 96 ರನ್​ಗಳಿಗೆ ಪ್ರಮುಖ 6 ವಿಕೆಟ್​ಗಳು ಬಿದ್ದಾಗ ಆರ್​ಸಿಬಿ 150 ರನ್ ಬಾರಿಸುವುದು ಕಷ್ಟಕರವಾಗಿತ್ತು.

ಈ ಹಂತದಲ್ಲಿ ಕೆಳಕ್ರಮಾಂಕದ ಬ್ಯಾಟರ್​ಗಳ ಜೊತೆ ಇನ್ನಿಂಗ್ಸ್ ಕಟ್ಟಿದ ರಜತ್ 40 ಎಸೆತಗಳಲ್ಲಿ 4 ಬೌಂಡರಿ ಹಾಗೂ 4 ಸಿಕ್ಸರ್ ಸಹಿತ 63 ರನ್​ಗಳ ಇನ್ನಿಂಗ್ಸ್ ಆಡಿದರು. ರಜತ್ ಔಟಾದಾಗ ತಂಡದ ಮೊತ್ತ 17 ಓವರ್​ಗಳಿಗೆ 166 ರನ್ ಆಗಿತ್ತು. ಇನ್ನು ಈ ಪಂದ್ಯದಲ್ಲಿ ಇಂಪ್ಯಾಕ್ಟ್ ಪ್ಲೇಯರ್ ಆಗಿ ಬಂದ ವೆಂಕಟೇಶ್ ಅಯ್ಯರ್ ಕೂಡ ಉಪಯುಕ್ತ ಇನ್ನಿಂಗ್ಸ್ ಆಡಿ 15 ಎಸೆತಗಳಲ್ಲಿ 2 ಸಿಕ್ಸರ್​ಗಳ ಸಹಿತ ಅಜೇಯ 29 ರನ್ ಕಲೆಹಾಕಿದರು. ಅಂತಿಮವಾಗಿ ಆರ್​ಸಿಬಿ 20 ಓವರ್‌ಗಳಲ್ಲಿ 8 ವಿಕೆಟ್ ಕಳೆದುಕೊಂಡು 201 ರನ್ ಕಲೆಹಾಕಿತು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Apr 10, 2026 10:34 PM

Follow Us
ಪೃಥ್ವಿಶಂಕರ
ಪೃಥ್ವಿಶಂಕರ

ಕಳೆದ ಒಂದು ದಶಕದಿಂದ ಕನ್ನಡದ ನಂ.1 ಸುದ್ದಿ ವಾಹಿನಿ ಟಿವಿ9 ಕನ್ನಡದೊಂದಿಗೆ ಪತ್ರಿಕೋದ್ಯಮದ ಪಯಣ ಮುಂದುವರಿಸಿದ್ದೇನೆ. ಕ್ರೀಡಾ ಜಗತ್ತಿನ ಆಗುಹೋಗುಗಳು, ಆಟಗಾರರ ಸಾಧನೆಗಳು, ಮೈದಾನದ ರೋಚಕ ಕ್ಷಣಗಳು ಹಾಗೂ ಕ್ರೀಡೆಯ ಹಿಂದಿನ ಆಸಕ್ತಿದಾಯಕ ಕಥನಗಳನ್ನು ಅಕ್ಷರಗಳ ಮೂಲಕ ಓದುಗರಿಗೆ ತಲುಪಿಸುವುದು ನನ್ನ ವೃತ್ತಿ ಮತ್ತು ಪ್ರವೃತ್ತಿ. ಕ್ರೀಡೆಯನ್ನು ಕೇವಲ ಆಟವಾಗಿ ನೋಡದೆ, ಅದರೊಳಗಿನ ಪರಿಶ್ರಮ, ಹೋರಾಟ, ಸಾಧನೆ ಮತ್ತು ಭಾವನೆಗಳನ್ನು ಗುರುತಿಸಿ ಬರವಣಿಗೆಯಲ್ಲಿ ಕಟ್ಟಿಕೊಡುವುದು ನನ್ನ ಪ್ರಯತ್ನ. ಮೂಲತಃ ಹಾಸನ ಜಿಲ್ಲೆಯವನು. ಹಾಸನದ ನೆಲದ ಸೊಗಡು ಮತ್ತು ಕನ್ನಡದ ಮೇಲಿನ ಅಭಿಮಾನ ನನ್ನ ಹೆಮ್ಮೆ. ವೃತ್ತಿಪರತೆಯೊಂದಿಗೆ ಹೊಸ ವಿಷಯಗಳನ್ನು ಕಲಿಯುತ್ತಾ, ಕ್ರೀಡಾ ಪತ್ರಿಕೋದ್ಯಮದಲ್ಲಿ ಹೊಸ ಮೈಲಿಗಲ್ಲುಗಳನ್ನು ಸಾಧಿಸುವ ಹಂಬಲ ನನ್ನದು.

Read More