RR vs RCB: 6,6,6,6.. ರಾಜಸ್ಥಾನ್ ವಿರುದ್ಧ ಅಬ್ಬರಿಸಿದ ರಜತ್ ಪಾಟಿದರ್
Rajat Patidar's Heroic Half-Century: ಗುವಾಹಟಿಯ ಬರ್ಸಪರ ಕ್ರೀಡಾಂಗಣದಲ್ಲಿ ನಡೆದ ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ, ಆರಂಭಿಕ ಕುಸಿತದಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸಂಕಷ್ಟಕ್ಕೆ ಸಿಲುಕಿತ್ತು. ಈ ಹಂತದಲ್ಲಿ ನಾಯಕ ರಜತ್ ಪಾಟಿದಾರ್ ಸ್ಮರಣೀಯ 63 ರನ್‌ಗಳ ಅರ್ಧಶತಕ ಗಳಿಸಿ ತಂಡವನ್ನು 201 ರನ್‌ಗಳ ದೊಡ್ಡ ಮೊತ್ತ ತಲುಪಲು ನೆರವಾದರು. ಅವರ ನಿರ್ಣಾಯಕ ಇನ್ನಿಂಗ್ಸ್ ಆರ್ಸಿಬಿಯ ಸ್ಕೋರ್‌ಬೋರ್ಡ್‌ಗೆ ಬಲ ತುಂಬಿತು. ವೆಂಕಟೇಶ್ ಅಯ್ಯರ್ ಕೂಡ ಉತ್ತಮ ಪ್ರದರ್ಶನ ನೀಡಿದರು.
ಗುವಾಹಟಿಯ ಬರ್ಸಪರ ಕ್ರೀಡಾಂಗಣದಲ್ಲಿ ನಡೆದ ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ರಜತ್ ಪಾಟಿದರ್ ಸ್ಮರಣೀಯ ಇನ್ನಿಂಗ್ಸ್ ಆಡಿದರು. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಆರ್ಸಿಬಿ 100 ರನ್‌ಗಳ ಗಡಿ ದಾಟುವ ಮುನ್ನವೇ ಪ್ರಮುಖ 6 ವಿಕೆಟ್‌ಗಳನ್ನು ಕಳೆದುಕೊಂಡಿತು. ಈ ಹಂತದಲ್ಲಿ ನಾಯಕನ ಇನ್ನಿಂಗ್ಸ್ ಆಡಿದ ರಜತ್ ಪಾಟಿದರ್ ಅರ್ಧಶತಕದ ಇನ್ನಿಂಗ್ಸ್ ಆಡಿ ತಂಡ 200 ರನ್‌ಗಳ ಗಡಿ ದಾಟುವಲ್ಲಿ ಪ್ರಮುಖ ಪಾತ್ರವಹಿಸಿದರು.
ರಾಜಸ್ಥಾನ್ ವಿರುದ್ಧ ಪ್ರಮುಖ ಬ್ಯಾಟರ್ಗಳು ರನ್ಗಳಿಸಲು ಸಾಧ್ಯವಾಗದೆ ಬಹುಬೇಗನೇ ವಿಕೆಟ್ ಒಪ್ಪಿಸಿದಾಗ ನೆಲ ಕಚ್ಚಿ ನಿಂತ ರಜತ್ ನಿರ್ಣಾಯಕ ಇನ್ನಿಂಗ್ಸ್ ಆಡಿದರು. ಇದರ ಜೊತೆಗೆ ತಂಡವನ್ನು 150 ರನ್‌ಗಳ ಗಡಿ ಕೂಡ ದಾಟಿಸಿದರು. 96 ರನ್ಗಳಿಗೆ ಪ್ರಮುಖ 6 ವಿಕೆಟ್ಗಳು ಬಿದ್ದಾಗ ಆರ್ಸಿಬಿ 150 ರನ್ ಬಾರಿಸುವುದು ಕಷ್ಟಕರವಾಗಿತ್ತು.
ಈ ಹಂತದಲ್ಲಿ ಕೆಳಕ್ರಮಾಂಕದ ಬ್ಯಾಟರ್ಗಳ ಜೊತೆ ಇನ್ನಿಂಗ್ಸ್ ಕಟ್ಟಿದ ರಜತ್ 40 ಎಸೆತಗಳಲ್ಲಿ 4 ಬೌಂಡರಿ ಹಾಗೂ 4 ಸಿಕ್ಸರ್ ಸಹಿತ 63 ರನ್‌ಗಳ ಇನ್ನಿಂಗ್ಸ್ ಆಡಿದರು. ರಜತ್ ಔಟಾದಾಗ ತಂಡದ ಮೊತ್ತ 17 ಓವರ್ಗಳಿಗೆ 166 ರನ್ ಆಗಿತ್ತು. ಇನ್ನು ಈ ಪಂದ್ಯದಲ್ಲಿ ಇಂಪ್ಯಾಕ್ಟ್ ಪ್ಲೇಯರ್ ಆಗಿ ಬಂದ ವೆಂಕಟೇಶ್ ಅಯ್ಯರ್ ಕೂಡ ಉಪಯುಕ್ತ ಇನ್ನಿಂಗ್ಸ್ ಆಡಿ 15 ಎಸೆತಗಳಲ್ಲಿ 2 ಸಿಕ್ಸರ್ಗಳ ಸಹಿತ ಅಜೇಯ 29 ರನ್ ಕಲೆಹಾಕಿದರು. ಅಂತಿಮವಾಗಿ ಆರ್ಸಿಬಿ 20 ಓವರ್‌ಗಳಲ್ಲಿ 8 ವಿಕೆಟ್ ಕಳೆದುಕೊಂಡು 201 ರನ್ ಕಲೆಹಾಕಿತು.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ