PBKS vs RCB: ಐತಿಹಾಸಿಕ ಪಂದ್ಯದಲ್ಲಿ ಒಂದೇ ರನ್ಗೆ ಸುಸ್ತಾದ ಶ್ರೇಯಸ್ ಅಯ್ಯರ್
Shreyas Iyer 100th IPL Match: ಐಪಿಎಲ್ 2026ರ 61ನೇ ಪಂದ್ಯದಲ್ಲಿ ಆರ್ಸಿಬಿ 222 ರನ್ ಕಲೆಹಾಕಿತ್ತು. ವಿರಾಟ್ ಕೊಹ್ಲಿ ಹಾಗೂ ವೆಂಕಟೇಶ್ ಅಯ್ಯರ್ ಅರ್ಧಶತಕ ಬಾರಿಸಿದರು. ಈ ಗುರಿ ಬೆನ್ನಟ್ಟಿದ ಪಂಜಾಬ್ ಕಿಂಗ್ಸ್ ಪವರ್ ಪ್ಲೇನಲ್ಲಿಯೇ 3 ವಿಕೆಟ್‌ಗಳನ್ನು ಕಳೆದುಕೊಂಡಿತು. ತಮ್ಮ 100ನೇ ಐಪಿಎಲ್ ಪಂದ್ಯವಾಡಿದ ನಾಯಕ ಶ್ರೇಯಸ್ ಅಯ್ಯರ್ ಕೇವಲ 1 ರನ್ ಗಳಿಸಿ ನಿರಾಶೆ ಅನುಭವಿಸಿದರು. ಪಂಜಾಬ್ ಆರಂಭಿಕರು ಸಹ ಬೇಗನೆ ವಿಕೆಟ್ ಒಪ್ಪಿಸಿದರು.
ಐಪಿಎಲ್ 2026 ರ 61ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಆರ್ಸಿಬಿ ವಿರಾಟ್ ಕೊಹ್ಲಿ ಹಾಗೂ ವೆಂಕಟೇಶ್ ಅಯ್ಯರ್ ಅವರ ಅರ್ಧಶತಕದ ನೆರವಿನಿಂದ 222 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಪಂಜಾಬ್ ಕಿಂಗ್ಸ್ ಪವರ್ ಪ್ಲೇನಲ್ಲಿಯೇ ಪ್ರಮುಖ 3 ವಿಕೆಟ್‌ಗಳನ್ನು ಕಳೆದುಕೊಂಡಿತು. ಅದರಲ್ಲೂ ಐಪಿಎಲ್‌ನಲ್ಲಿ 100ನೇ ಪಂದ್ಯವನ್ನಾಡುತ್ತಿದ್ದ ಪಂಜಾಬ್ ನಾಯಕ ಶ್ರೇಯಸ್ ಅಯ್ಯರ್ಗೆ ಈ ಪಂದ್ಯ ಐತಿಹಾಸಿಕವಾಗಿತ್ತು. ಆದರೆ ಈ ಪಂದ್ಯದಲ್ಲಿ ಅವರು ಕೇವಲ 1 ರನ್ ಬಾರಿಸಿ ಔಟಾದರು.
ಆರಂಭಿಕ ಪ್ರಿಯಾಂಶ್ ಆರ್ಯ, ಭುವಿ ಬೌಲ್ ಮಾಡಿದ ಓವರ್ನ ಮೂರನೇ ಎಸೆತದಲ್ಲಿ ಖಾತೆ ತೆರೆಯದೆ ಔಟಾದರೆ ಮತ್ತೊಬ್ಬ ಆರಂಭಿಕ ಪ್ರಬ್ಸಿಮಾನ್ಸ್ ಕೂಡ ಭುವಿಗೆ ಬಲಿಯಾದರು. ಹೀಗಾಗಿ ಈ ಎರಡು ಆರಂಭಿಕ ಆಘಾತದ ನಂತರ ಬಂದ ನಾಯಕ ಶ್ರೇಯಸ್ ಅಯ್ಯರ್ ಮೇಲೆ ಸಾಕಷ್ಟು ನಿರೀಕ್ಷೆಗಳಿದ್ದವು. ಮಾತ್ರವಲ್ಲದೆ ಮೇಲೆ ಹೇಳಿದಂತೆ ಅಯ್ಯರ್ಗೆ ಇದು 100ನೇ ಐಪಿಎಲ್ ಪಂದ್ಯವಾಗಿತ್ತು. ಈ ಮೈಲಿಗಲ್ಲು ಪಂದ್ಯದಲ್ಲಿ ಅಯ್ಯರ್ ಸ್ಮರಣೀಯ ಇನ್ನಿಂಗ್ಸ್ ಆಡುತ್ತಾರೆ ಎಂದು ಎಲ್ಲರು ನಿರೀಕ್ಷಿಸಿದ್ದರು. ಆದರೆ ಅಯ್ಯರ್, ರಸಿಖ್ ಎಸೆದ 4ನೇ ಓವರ್ನಲ್ಲಿ ವಿಕೆಟ್ ಕೀಪರ್ಗೆ ಕ್ಯಾಚಿತ್ತು ನಿರ್ಗಮಿಸಿದರು.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ


