AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅದ್ಭುತ, ಅತ್ಯದ್ಭುತ ಕ್ಯಾಚ್; ಶುಭ್​​ಮನ್ ಡೈವ್​​​ಗೆ ಚೆನ್ನೈ ಫ್ಯಾನ್ಸ್ ಸೈಲೆಂಟ್

ಅದ್ಭುತ, ಅತ್ಯದ್ಭುತ ಕ್ಯಾಚ್; ಶುಭ್​​ಮನ್ ಡೈವ್​​​ಗೆ ಚೆನ್ನೈ ಫ್ಯಾನ್ಸ್ ಸೈಲೆಂಟ್

ರಾಜೇಶ್ ದುಗ್ಗುಮನೆ
|

Updated on:May 22, 2026 | 10:53 AM

Share

ಐಪಿಎಲ್ 2026ರ ಸಿಎಸ್‌ಕೆ ವಿರುದ್ಧದ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ನಾಯಕ ಶುಭ್‌ಮನ್ ಗಿಲ್ ಅದ್ಭುತ ಡೈವಿಂಗ್ ಕ್ಯಾಚ್ ಹಿಡಿದು ಗಮನ ಸೆಳೆದಿದ್ದಾರೆ. ರಶೀದ್ ಖಾನ್ ಬೌಲಿಂಗ್‌ನಲ್ಲಿ ಭರ್ಜರಿ ಹೊಡೆತಕ್ಕೆ ಕೈಹಾಕಿದ ಶಿವಂ ದುಬೆ, ಗಿಲ್ ಅವರ ಈ ಸೂಪರ್ ಕ್ಯಾಚ್‌ಗೆ ವಿಕೆಟ್ ಒಪ್ಪಿಸಿದರು.

ಟಾಟಾ ಐಪಿಎಲ್ 2026ರ ಜಿಟಿ ಮತ್ತು ಸಿಎಸ್‌ಕೆ ನಡುವಿನ ಹೈ-ವೋಲ್ಟೇಜ್ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ನಾಯಕ ಶುಭ್‌ಮನ್ ಗಿಲ್ ಫೀಲ್ಡಿಂಗ್‌ನಲ್ಲಿ ಮ್ಯಾಜಿಕ್ ಮಾಡಿದ್ದಾರೆ. ರಶೀದ್ ಖಾನ್ ಎಸೆದ 11ನೇ ಓವರ್‌ನ ಎರಡನೇ ಎಸೆತದಲ್ಲಿ ಸಿಎಸ್‌ಕೆಯ ಶಿವಂ ದುಬೆ ಲಾಂಗ್-ಆನ್ ಕಡೆಗೆ ಸಿಕ್ಸರ್ ಬಾರಿಸಲು ಯತ್ನಿಸಿದರು. ಆದರೆ, ಅಲ್ಲಿ ಅತ್ಯಂತ ಚಾಣಾಕ್ಷತನದಿಂದ ಓಡಿ ಬಂದು ಗಾಳಿಯಲ್ಲಿ ಜಿಗಿದು ಗಿಲ್ ಹಿಡಿದ ಅದ್ಭುತ ಕ್ಯಾಚ್ ಈಗ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿದೆ. ಅವರಿಗೆ ಎಲ್ಲರೂ ಮೆಚ್ಚುಗೆ ಸೂಚಿಸುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published on: May 22, 2026 10:29 AM

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More