IPL 2026: ಕಿಂಗ್ ಕೊಹ್ಲಿ 2.0.. ಟಾಪ್ ಗೇರ್​ನಲ್ಲಿ ವಿರಾಟ್ ಬ್ಯಾಟಿಂಗ್‌; ವಿಡಿಯೋ ನೋಡಿ

Updated on: Mar 19, 2026 | 8:29 PM

Virat Kohli Unleashes Power in RCB Nets: ಇಂಡಿಯನ್ ಪ್ರೀಮಿಯರ್ ಲೀಗ್ 19ನೇ ಸೀಸನ್ ಮಾರ್ಚ್ 28ರಿಂದ ಆರಂಭವಾಗಲಿದ್ದು, ಮೊದಲ ಪಂದ್ಯದಲ್ಲಿ RCB ಮತ್ತು ಸನ್‌ರೈಸರ್ಸ್ ಹೈದರಾಬಾದ್ ಮುಖಾಮುಖಿಯಾಗಲಿವೆ. ಈ ಮಹತ್ವದ ಪಂದ್ಯಕ್ಕೆ ಕೇವಲ 9 ದಿನಗಳು ಬಾಕಿ ಇರುವಾಗ, RCB ತಂಡದ ಪ್ರಮುಖ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ನೆಟ್ಸ್‌ನಲ್ಲಿ ಭರ್ಜರಿ ಅಭ್ಯಾಸ ಆರಂಭಿಸಿದ್ದಾರೆ. ಕಳೆದ ಸೀಸನ್‌ನಿಂದ ಸ್ಟ್ರೈಕ್ ರೇಟ್ ಮೇಲೆ ಹೆಚ್ಚು ಗಮನಹರಿಸಿರುವ ಕೊಹ್ಲಿ, ಅಭ್ಯಾಸದ ವೇಳೆ ಬೌಂಡರಿ ಮತ್ತು ಸಿಕ್ಸರ್‌ಗಳ ಮಳೆಗರೆದಿದ್ದು, ಸಿದ್ಧತೆ ಜೋರಾಗಿದೆ.

ಇಂಡಿಯನ್ ಪ್ರೀಮಿಯರ್ ಲೀಗ್‌ನ 19 ನೇ ಸೀಸನ್‌ ಮಾರ್ಚ್​ 28 ರಿಂದ ಆರಂಭವಾಗಲಿದೆ. ಟೂರ್ನಿಯ ಮೊದಲ ಪಂದ್ಯ ಹಾಲಿ ಚಾಂಪಿಯನ್‌ ಆರ್​ಸಿಬಿ ಹಾಗೂ ಸನ್‌ರೈಸರ್ಸ್ ಹೈದರಾಬಾದ್ ತಂಡದ ನಡುವೆ ನಡೆಯಲಿದೆ. ಈ ಪಂದ್ಯಕ್ಕೆ ಇನ್ನ 9 ದಿನಗಳು ಮಾತ್ರ ಉಳಿದಿವೆ. ಹೀಗಾಗಿ ಉಭಯ ತಂಡಗಳು ಮೈದಾನದಲ್ಲಿ ಬೆವರು ಹರಿಸುತ್ತಿವೆ. ಇತ್ತ ಆರ್​ಸಿಬಿ ಕೂಡ ತಯಾರಿಯನ್ನು ಚುರುಕುಗೊಳಿಸಿದ್ದು, ತಂಡದ ಬ್ಯಾಟಿಂಗ್‌ ಜೀವಾಳ ಎನಿಸಿಕೊಂಡಿರುವ ವಿರಾಟ್ ಕೊಹ್ಲಿ, ತಂಡವನ್ನು ಕೂಡಿಕೊಂಡ ಬಳಿಕ ಮೊದಲ ಬಾರಿಗೆ ನೆಟ್ಸ್​ನಲ್ಲಿ ಬ್ಯಾಟ್ ಹಿಡಿದು ಅಬ್ಬರಿಸಿದ್ದಾರೆ.

ವಾಸ್ತವವಾಗಿ ಮೊನ್ನೆಯಷ್ಟೆ ಆರ್​ಸಿಬಿ ತಂಡವನ್ನು ಸೇರಿಕೊಂಡಿರುವ ವಿರಾಟ್ ಕೊಹ್ಲಿ ಇಂದು ನಡೆದ ಅಭ್ಯಾಸದ ಶಿಬಿರದಲ್ಲಿ ಬೌಂಡರಿ ಮತ್ತು ಸಿಕ್ಸರ್‌ಗಳ ಮಳೆಗರೆದಿದ್ದಾರೆ. ಅಂತರರಾಷ್ಟ್ರೀಯ ಟಿ20 ಮತ್ತು ಟೆಸ್ಟ್ ಕ್ರಿಕೆಟ್‌ನಿಂದ ನಿವೃತ್ತಿ ಹೊಂದಿರುವ ಕೊಹ್ಲಿ ಈಗ ಏಕದಿನ ಸ್ವರೂಪದಲ್ಲಿ ಮಾತ್ರ ಆಡುತ್ತಿದ್ದಾರೆ. ಅದರ ಪರಿಣಾಮವಾಗಿ ಕಳೆದ ಆವೃತ್ತಿಯಿಂದ ತಮ್ಮ ಬ್ಯಾಟಿಂಗ್​ನಲ್ಲಿ ಬದಲಾವಣೆ ಮಾಡಿಕೊಂಡಿರುವ ಕೊಹ್ಲಿ ಸ್ಟ್ರೈಕ್​ ರೇಟ್​ ಮೇಲೆ ಹೆಚ್ಚು ಒತ್ತು ನೀಡುತ್ತಿದ್ದಾರೆ. ಹೀಗಾಗಿ ಕೊಹ್ಲಿ ಬ್ಯಾಟ್​​ನಿಂದ ಬೌಂಡರಿ, ಸಿಕ್ಸರ್​ಗಳ ಮಳೆಯಾಗುತ್ತಿದೆ.

Follow Us