ಇಂದಿನಿಂದ ಐಪಿಎಲ್ ಪುನರಾರಂಭ, ಆರ್​ಸಿಬಿ-ಕೆಕೆಅರ್ ಪಂದ್ಯದಲ್ಲಿ ಎಲ್ಲರ ಕಣ್ಣು ವಿರಾಟ್ ಕೊಹ್ಲಿ ಮೇಲೆ

ಅರುಣ್​ ಕುಮಾರ್​ ಬೆಳ್ಳಿ

Updated on: May 17, 2025 | 5:45 PM

ವಿರಾಟ್ ಕೊಹ್ಲಿಯ ಡೈಹಾರ್ಡ್ ಫ್ಯಾನ್ ಇಲ್ಲಿದ್ದಾರೆ. ಯುವಕನ ಹೆಸರು ಗೊತ್ತಿಲ್ಲ, ಕಳೆದ 11 ವರ್ಷಗಳಿಂದ ಆರ್​ಬಿಯ ಅಭಿಮಾನಿ ಅಗಿರುವ ಇವರು ಕೊಹ್ಲಿ ಬಗ್ಗೆ ತಮಗಿರುವ ಪ್ರೀತಿ ಮತ್ತು ಅಭಿಮಾನದ ಹಿನ್ನೆಲೆ ಎದೆ ಮೇಲೆ ಆಟಗಾರನ ಟ್ಯಾಟೂ ಹಾಕಿಸಿಕೊಂಡಿದ್ದಾರೆ. ಪಂದ್ಯವನ್ನು ನೋಡಲು ಒಡಿಷಾದಿಂದ ಬಂದಾಗ್ಯೂ ಅವರಿಗೆ ಟಿಕೆಟ್ ಸಿಕ್ಕಿಲ್ಲ. ಒಂದು ಟಿಕೆಟ್ ಪಡೆಯುವ ಪ್ರಯತ್ನವನ್ನಂತೂ ಅವರು ನಡೆಸಿದ್ದಾರೆ.

ಬೆಂಗಳೂರು, ಮೇ 17: ಭಾರತ ಮತ್ತು ಪಾಕಿಸ್ತಾನ ನಡುವೆ ಶುರುವಾದ ಯುದ್ಧ ಹಿನ್ನೆಲೆಯಲ್ಲಿ ಇಂಡಿಯನ್ ಪ್ರೀಮಿಯರ್ ಲೀಗ್ ಮುಂದೂಡಲಾಗಿತ್ತು. ಸ್ಥಗಿತಗೊಂಡಿದ್ದ ಐಪಿಎಲ್ ಇಂದಿನಿಂದ ಪುನರಾರಂಭಗೊಳ್ಳುತ್ತಿದೆ ಮತ್ತು ಪ್ಲೇ-ಆಫ್ ಹಂತ ತಲುಪುವುದನ್ನು ದೃಢಪಡಿಸಿಕೊಂಡಿರುವ ಸ್ಥಳೀಯ ಅರ್​​ಸಿಬಿ ತಂಡ ಮೂರು ಬಾರಿಯ ಚಾಂಪಿಯನ್ ಕೆಕೆಅರ್ ತಂಡವನ್ನು ಎದುರಿಸಲಿದೆ. ಆರ್​ಸಿಬಿ ಪಂದ್ಯ ನಡೆಯುವಾಗೆಲ್ಲ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಪ್ರೇಕ್ಷಕರ ಕಣ್ಮಣಿ ಆಗಿರುತ್ತಾರೆ, ಅವರೀಗ ಟೆಸ್ಟ್ ಕ್ರಿಕೆಟ್​ಗೆ ವಿದಾಯ ಹೇಳಿರವುದರಿಂದ ಸಹಜವಾಗೇ ಅವರನ್ನು ನೋಡಲು ಜನ ಮತ್ತಷ್ಟು ತವಕಿಸುತ್ತಿದ್ದಾರೆ.

ಇದನ್ನೂ ಓದಿ:  ಟೀಮ್ ಇಂಡಿಯಾ ಪರ ಕೇವಲ 27 ದಿನ ಮಾತ್ರ ಕಣಕ್ಕಿಳಿಯಲಿರುವ ವಿರಾಟ್ ಕೊಹ್ಲಿ

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: May 17, 2025 04:43 PM
Loading...
Unable to load recommendations.
Follow Us
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.