AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದಲ್ಲ ಎರಡು ಐಪಿಎಲ್ ಟಿಕೆಟ್  ಬೇಕು ಎಂದ ಶಾಸಕರಿಗೆ ಸಿಎಂ ಸಿದ್ದರಾಮಯ್ಯ ನೀಡಿದ ಉತ್ತರವೇನು?

ಒಂದಲ್ಲ ಎರಡು ಐಪಿಎಲ್ ಟಿಕೆಟ್ ಬೇಕು ಎಂದ ಶಾಸಕರಿಗೆ ಸಿಎಂ ಸಿದ್ದರಾಮಯ್ಯ ನೀಡಿದ ಉತ್ತರವೇನು?

ಅಕ್ಷಯ್​ ಪಲ್ಲಮಜಲು​​
|

Updated on: Mar 28, 2026 | 9:09 PM

Share

ಕರ್ನಾಟಕ ವಿಧಾನಸಭೆಯಲ್ಲಿ ಐಪಿಎಲ್ ಟಿಕೆಟ್‌ಗಳ ಕುರಿತು ಶಾಸಕರಿಂದ ಕೇಳಿಬಂದ ಬೇಡಿಕೆ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ಶಾಸಕರು ಮತ್ತು ಎಂಎಲ್‌ಸಿಗಳಿಗೆ ಟಿಕೆಟ್‌ಗಳನ್ನು ನೀಡುವುದು ಹಿಂದಿನಿಂದಲೂ ನಡೆದುಕೊಂಡು ಬಂದ ಸಂಪ್ರದಾಯ ಎಂದು ಅವರು ತಿಳಿಸಿದ್ದಾರೆ. ತಮ್ಮ ಕ್ರಿಕೆಟ್ ಆಸಕ್ತಿ ಇದ್ದರೂ, ಚುನಾವಣಾ ಕೆಲಸಗಳಿಂದಾಗಿ ತಮಗೆ ಐಪಿಎಲ್ ಪಂದ್ಯ ವೀಕ್ಷಿಸಲು ಸಮಯವಿಲ್ಲ ಎಂದು ಮುಖ್ಯಮಂತ್ರಿಗಳು ಹೇಳಿದ್ದಾರೆ.

ಬೆಂಗಳೂರು, ಮಾ.28: ಐಪಿಎಲ್ ಕ್ರೇಜ್ ಈಗ ಕೇವಲ ಮೈದಾನಕ್ಕೆ ಮಾತ್ರ ಸೀಮಿತವಾಗಿಲ್ಲ, ಬದಲಿಗೆ ವಿಧಾನಸಭೆಯಲ್ಲೂ ಪ್ರತಿಧ್ವನಿಸಿದೆ. ಐಪಿಎಲ್ ಪಂದ್ಯಗಳ ವೀಕ್ಷಣೆಗೆ ಶಾಸಕರಿಗೆ ಟಿಕೆಟ್ ನೀಡುವ ವಿಚಾರ ಸದನದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದ್ದು, ಸುರೇಶ್ ಕುಮಾರ್ ಅವರಂತಹ ಕೆಲವು ಹಿರಿಯ ಶಾಸಕರು ನಮಗೆ ಟಿಕೆಟ್ ಬೇಡ ಎಂದು ಅಸಮಾಧಾನ ವ್ಯಕ್ತಪಡಿಸಿದರೆ, ಇನ್ನು ಕೆಲವರು ಟಿಕೆಟ್‌ಗಾಗಿ ಪಟ್ಟು ಹಿಡಿದಿದ್ದರು. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ. ಐಪಿಎಲ್ ಪಂದ್ಯಗಳಿಗಾಗಿ ಶಾಸಕರು ಮತ್ತು ಎಂಎಲ್‌ಸಿಗಳಿಗೆ ನೀಡಲಾಗುತ್ತಿದ್ದ ಟಿಕೆಟ್ ಸಂಖ್ಯೆಯನ್ನು ಹೆಚ್ಚಿಸುವಂತೆ ಕೆಲವರು ಬೇಡಿಕೆ ಇಟ್ಟಿದ್ದರು. ಈ ಹಿಂದೆ ತಲಾ ಒಂದು ಟಿಕೆಟ್ ನೀಡಲಾಗುತ್ತಿತ್ತು, ಈಗ ಎರಡು ಟಿಕೆಟ್ ನೀಡಬೇಕು ಎಂಬ ಚರ್ಚೆ ನಡೆದಿದೆ. ಶಾಸಕರಿಗೆ ಟಿಕೆಟ್ ನೀಡುವುದು ಮೊದಲಿನಿಂದಲೂ ನಡೆದುಕೊಂಡು ಬಂದಿರುವ ಪದ್ಧತಿ. ಈ ಬಾರಿಯೂ ಅದನ್ನು ಮುಂದುವರಿಸಲಾಗುತ್ತಿದೆ ಎಂದು ಸಿದ್ದರಾಮಯ್ಯ ತಿಳಿಸಿದರು. ತಮಗೂ ಕ್ರಿಕೆಟ್‌ನಲ್ಲಿ ಆಸಕ್ತಿ ಇದೆ, ಆದರೆ ಚುನಾವಣೆ ಮತ್ತು ಕೆಲಸದ ಒತ್ತಡದ ನಡುವೆ ಸಮಯ ಸಿಕ್ಕರೆ ಮಾತ್ರ ಮುಂದಿನ ಪಂದ್ಯಗಳನ್ನು ವೀಕ್ಷಿಸುವುದಾಗಿ ಅವರು ಹೇಳಿದರು. ಏಪ್ರಿಲ್ 9ರವರೆಗೂ ಬಿಡುವಿಲ್ಲದ ಕಾರಣ ಸದ್ಯಕ್ಕೆ ಮೈದಾನಕ್ಕೆ ಹೋಗಲು ಸಾಧ್ಯವಿಲ್ಲ ಎಂದರು.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us