MI vs RCB: ವಾಂಖೆಡೆಯಲ್ಲಿ ರಾರಾಜಿಸಿದ ರಜತ್..! ವೇಗದ ಅರ್ಧಶತಕ ಜಸ್ಟ್ ಮಿಸ್

MI vs RCB: ವಾಂಖೆಡೆಯಲ್ಲಿ ರಾರಾಜಿಸಿದ ರಜತ್..! ವೇಗದ ಅರ್ಧಶತಕ ಜಸ್ಟ್ ಮಿಸ್

Updated on: Apr 12, 2026 | 9:12 PM

Rajat Patidar's Explosive 16-Ball Fifty: ಮುಂಬೈ ಇಂಡಿಯನ್ಸ್‌ ವಿರುದ್ಧದ ಐಪಿಎಲ್ 2026 ಪಂದ್ಯದಲ್ಲಿ ಆರ್‌ಸಿಬಿ ನಾಯಕ ರಜತ್ ಪಾಟಿದಾರ್ ವಾಂಖೆಡೆ ಮೈದಾನದಲ್ಲಿ ಸ್ಫೋಟಕ ಬ್ಯಾಟಿಂಗ್ ಪ್ರದರ್ಶಿಸಿದರು. ಕೇವಲ 11 ಎಸೆತಗಳಲ್ಲಿ 44 ರನ್ ಬಾರಿಸಿ, ಐಪಿಎಲ್ ಇತಿಹಾಸದ ವೇಗದ ಅರ್ಧಶತಕದ ಸನಿಹಕ್ಕೆ ಬಂದರು. ಬೌಲ್ಟ್ ಅದಕ್ಕೆ ಅವಕಾಶ ನೀಡದಿದ್ದರೂ, ರಜತ್ 16 ಎಸೆತಗಳಲ್ಲಿ ತಮ್ಮ ಸತತ ಎರಡನೇ ಅರ್ಧಶತಕ ಸಿಡಿಸಿ ಆರ್‌ಸಿಬಿಗೆ ಬೃಹತ್ ಮೊತ್ತಕ್ಕೆ ಅಡಿಪಾಯ ಹಾಕಿದರು.

ಮುಂಬೈ ಇಂಡಿಯನ್ಸ್‌ ವಿರುದ್ಧ ವಾಂಖೆಡೆ ಮೈದಾನದಲ್ಲಿ ನಡೆಯುತ್ತಿರುವ ಐಪಿಎಲ್ 2026 ರ ಪಂದ್ಯದಲ್ಲಿ ಆರ್​ಸಿಬಿ ನಾಯಕ ರಜತ್ ಪಾಟಿದರ್ ವಿಸ್ಫೋಟಕ ಬ್ಯಾಟಿಂಗ್‌ ಪ್ರದರ್ಶಿಸಿದರು. ಆರಂಭಿಕ ಫಿಲ್ ಸಾಲ್ಟ್ ಔಟಾದ ಬಳಿಕ ಬ್ಯಾಟಿಂಗ್​ಗೆ ಬಂದ ರಜತ್, ಬಂದ ಕೂಡಲೇ ಪ್ರತಿಯೊಬ್ಬ ಮುಂಬೈ ಬೌಲರ್​ಗಳ ವಿರುದ್ಧ ಬೌಂಡರಿಗಳ ಮಳೆಗರೆದರು. ಇದರ ಪರಿಣಾಮವಾಗಿ ರಜತ್ ಕೇವಲ 11 ಎಸೆತಗಳಲ್ಲಿ 44 ರನ್ ಕಲೆಹಾಕಿದರು. ರಜತ್ ತಮ್ಮ ಮುಂದಿನ ಎಸೆತದಲ್ಲಿ ಸಿಕ್ಸರ್ ಸಿಡಿಸಿ 50 ರನ್​ಗಳ ಗಡಿ ದಾಟುತ್ತಿದ್ದರು. ಈ ಮೂಲಕ ಐಪಿಎಲ್ ಇತಿಹಾಸದಲ್ಲಿ ಅತಿ ವೇಗದ ಅರ್ಧಶತಕ ಬಾರಿಸಿದ ಮೊದಲ ಬ್ಯಾಟರ್ ಎನಿಸಿಕೊಳ್ಳುತ್ತಿದ್ದರು. ಆದರೆ ಅದಕ್ಕೆ ಟ್ರೆಂಟ್ ಬೌಲ್ಟ್ ಅವಕಾಶ ಮಾಡಿಕೊಡಲಿಲ್ಲ.

ಆದಾಗ್ಯೂ ರಜತ್ ಎದುರಿಸಿದ 11 ಎಸೆತಗಳಲ್ಲಿ 5 ಸಿಕ್ಸರ್ ಹಾಗೂ 3 ಬೌಂಡರಿಗಳನ್ನು ಬಾರಿಸಿದರು. ಅಂದರೆ ಎದುರಿಸಿದ 11 ಎಸೆತಗಳಲ್ಲಿ ಬರೋಬ್ಬರಿ 8 ಬೌಂಡರಿಗಳನ್ನು ರಜತ್ ಬಾರಿಸಿದರು. ಒಟ್ಟಾರೆ ಈ 8 ಎಸೆತಗಳಲ್ಲಿ ರಜತ್ 42 ರನ್​ಗಳನ್ನು ಕಲೆಹಾಕಿದರು. ಅಂತಿಮವಾಗಿ ರಜತ್ 17 ಎಸೆತಗಳಲ್ಲಿ ತಮ್ಮ ಸತತ ಎರಡನೇ ಅರ್ಧಶತಕ ಬಾರಿಸಿದರು. ಸ್ಯಾಂಟ್ನರ್ ಅವರ ಎಸೆತವನ್ನು ಬೌಂಡರಿಗಟ್ಟುವ ಮೂಲಕ ರಜತ್ ತಮ್ಮ ಅರ್ಧಶತಕ ಪೂರೈಸಿದರು.

Published on: Apr 12, 2026 09:09 PM
Loading...
Unable to load recommendations.
Follow Us
ಪೃಥ್ವಿಶಂಕರ

ಕಳೆದ ಒಂದು ದಶಕದಿಂದ ಕನ್ನಡದ ನಂ.1 ಸುದ್ದಿ ವಾಹಿನಿ ಟಿವಿ9 ಕನ್ನಡದೊಂದಿಗೆ ಪತ್ರಿಕೋದ್ಯಮದ ಪಯಣ ಮುಂದುವರಿಸಿದ್ದೇನೆ. ಕ್ರೀಡಾ ಜಗತ್ತಿನ ಆಗುಹೋಗುಗಳು, ಆಟಗಾರರ ಸಾಧನೆಗಳು, ಮೈದಾನದ ರೋಚಕ ಕ್ಷಣಗಳು ಹಾಗೂ ಕ್ರೀಡೆಯ ಹಿಂದಿನ ಆಸಕ್ತಿದಾಯಕ ಕಥನಗಳನ್ನು ಅಕ್ಷರಗಳ ಮೂಲಕ ಓದುಗರಿಗೆ ತಲುಪಿಸುವುದು ನನ್ನ ವೃತ್ತಿ ಮತ್ತು ಪ್ರವೃತ್ತಿ. ಕ್ರೀಡೆಯನ್ನು ಕೇವಲ ಆಟವಾಗಿ ನೋಡದೆ, ಅದರೊಳಗಿನ ಪರಿಶ್ರಮ, ಹೋರಾಟ, ಸಾಧನೆ ಮತ್ತು ಭಾವನೆಗಳನ್ನು ಗುರುತಿಸಿ ಬರವಣಿಗೆಯಲ್ಲಿ ಕಟ್ಟಿಕೊಡುವುದು ನನ್ನ ಪ್ರಯತ್ನ. ಮೂಲತಃ ಹಾಸನ ಜಿಲ್ಲೆಯವನು. ಹಾಸನದ ನೆಲದ ಸೊಗಡು ಮತ್ತು ಕನ್ನಡದ ಮೇಲಿನ ಅಭಿಮಾನ ನನ್ನ ಹೆಮ್ಮೆ. ವೃತ್ತಿಪರತೆಯೊಂದಿಗೆ ಹೊಸ ವಿಷಯಗಳನ್ನು ಕಲಿಯುತ್ತಾ, ಕ್ರೀಡಾ ಪತ್ರಿಕೋದ್ಯಮದಲ್ಲಿ ಹೊಸ ಮೈಲಿಗಲ್ಲುಗಳನ್ನು ಸಾಧಿಸುವ ಹಂಬಲ ನನ್ನದು.

Read More