ಸರ್ಕಾರದ ವಿರುದ್ಧ ತೊಡೆತಟ್ಟಿ ಗೆದ್ದ IPS: ​ಅಧಿಕಾರ ಸ್ವೀಕಾರ ವೇಳೆ ಅಲೋಕ್ ಕುಮಾರ್ ಗತ್ತು ಹೇಗಿತ್ತು ನೋಡಿ

Updated on: Dec 11, 2025 | 8:02 PM

ರಾಜ್ಯ ಸರ್ಕಾರದ ವಿರುದ್ಧದ ಕಾನೂನು ಹೋರಾಟದಲ್ಲಿ ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್ (IPS officer Alok Kumar ) ಅವರು ಗೆಲುವು ಸಾಧಿಸಿದ್ದಾರೆ. ಅಲ್ಲದೇ ಮುಂಬಡ್ತಿ ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಹೌದು... 2019ರ ಫೋನ್ ಟ್ಯಾಪಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿರಿಯ IPS ಅಧಿಕಾರಿ ಅಲೋಕ್ ಕುಮಾರ್ ವಿರುದ್ಧ ರಾಜ್ಯ ಸರ್ಕಾರ ಆದೇಶಿಸಿದ್ದ ಇಲಾಖಾ ತನಿಖೆಯನ್ನು ಕೇಂದ್ರ ಆಡಳಿತಾತ್ಮಕ ನ್ಯಾಯಮಂಡಳಿ ರದ್ದುಗೊಳಿಸಿದೆ. ಇದರ ಬೆನ್ನಲ್ಲೇ ಇದೀಗ ರಾಜ್ಯ ಸರ್ಕಾರ ಅಲೋಕ್ ಕುಮಾರ್​ಗೆ ಎಡಿಜಿಪಿಯಿಂದ ಡಿಜಿಪಿಯಾಗಿ ಬಡ್ತಿ ನೀಡಿದ್ದು, ಇಂದು (ಡಿಸೆಂಬರ್ 11) ಅಲೋಕ್ ಕುಮಾರ್ ಅವರು ಕಾರಾಗೃಹ ಇಲಾಖೆಯ ನೂತನ ಡಿಜಿಪಿಯಾಗಿ ಅಧಿಕಾರ ಸ್ವೀಕಾರ ಮಾಡಿದರು.

ಬೆಂಗಳೂರು, (ಡಿಸೆಂಬರ್ 11): ರಾಜ್ಯ ಸರ್ಕಾರದ ವಿರುದ್ಧದ ಕಾನೂನು ಹೋರಾಟದಲ್ಲಿ ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್ (IPS officer Alok Kumar ) ಅವರು ಗೆಲುವು ಸಾಧಿಸಿದ್ದಾರೆ. ಅಲ್ಲದೇ ಮುಂಬಡ್ತಿ ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಹೌದು… 2019ರ ಫೋನ್ ಟ್ಯಾಪಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿರಿಯ IPS ಅಧಿಕಾರಿ ಅಲೋಕ್ ಕುಮಾರ್ ವಿರುದ್ಧ ರಾಜ್ಯ ಸರ್ಕಾರ ಆದೇಶಿಸಿದ್ದ ಇಲಾಖಾ ತನಿಖೆಯನ್ನು ಕೇಂದ್ರ ಆಡಳಿತಾತ್ಮಕ ನ್ಯಾಯಮಂಡಳಿ ರದ್ದುಗೊಳಿಸಿದೆ. ಇದರ ಬೆನ್ನಲ್ಲೇ ಇದೀಗ ರಾಜ್ಯ ಸರ್ಕಾರ ಅಲೋಕ್ ಕುಮಾರ್​ಗೆ ಎಡಿಜಿಪಿಯಿಂದ ಡಿಜಿಪಿಯಾಗಿ ಬಡ್ತಿ ನೀಡಿದ್ದು, ಇಂದು (ಡಿಸೆಂಬರ್ 11) ಅಲೋಕ್ ಕುಮಾರ್ ಅವರು ಕಾರಾಗೃಹ ಇಲಾಖೆಯ ನೂತನ ಡಿಜಿಪಿಯಾಗಿ ಅಧಿಕಾರ ಸ್ವೀಕಾರ ಮಾಡಿದರು.