ಸಿಎಂ ಸಿದ್ದರಾಮಯ್ಯ ನಿವಾಸಕ್ಕೆ ಭೇಟಿ ನೀಡಿದ ಖಡಕ್ ಐಪಿಎಸ್​ ರವಿ ಡಿ ಚೆನ್ನಣ್ಣನವರ್, ವಿಡಿಯೋ ನೋಡಿ

ಸಿಎಂ ಸಿದ್ದರಾಮಯ್ಯ ನಿವಾಸಕ್ಕೆ ಭೇಟಿ ನೀಡಿದ ಖಡಕ್ ಐಪಿಎಸ್​ ರವಿ ಡಿ ಚೆನ್ನಣ್ಣನವರ್, ವಿಡಿಯೋ ನೋಡಿ

ರಮೇಶ್ ಬಿ. ಜವಳಗೇರಾ
|

Updated on: May 28, 2023 | 9:40 AM

ಕರ್ನಾಟಕದ ಖಡಕ್ ಪೊಲೀಸ್ ಅಧಿಕಾರಿಗಳಲ್ಲಿ ಒಬ್ಬರಾದ ಸಿಂಗಂ ಖ್ಯಾತಿಯ ರವಿ ಡಿ ಚೆನ್ನಣ್ಣನವರ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯನವರ ನಿವಾಸಕ್ಕೆ ಭೇಟಿ ನೀಡಿದ್ದಾರೆ.

ಬೆಂಗಳೂರು: ಸಿದ್ದರಾಮಯ್ಯ ಸಂಪುಟದಲ್ಲಿ ಸಿಎಂ, ಡಿಸಿಎಂ ಸೇರಿ ಒಟ್ಟು 34 ಸಚಿವರಿದ್ದಾರೆ. ಫಲಿತಾಂಶ ಹೊರ ಬಿದ್ದ 15 ದಿನಗಳ ಬಳಿಕ ಸಿದ್ದು ಸಂಪುಟ ಫುಲ್ ಫಿಲ್ ಆಗಿದೆ. ಮೊದಲಿಗೆ ಸಿಎಂ, ಡಿಸಿಎಂ ಹಾಗೂ 8 ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ರು. ಬಳಿಕ ನಿನ್ನೆ 24 ಶಾಸಕರಿಗೆ ಸಚಿವರಾಗಿ ಪಟ್ಟಾಭಿಷೇಕ ಮಾಡಲಾಗಿದೆ. ಸದ್ಯ ಕಾಂಗ್ರೆಸ್ ಸರ್ಕಾರದಲ್ಲಿ ಸಿಎಂ, ಡಿಸಿಎಂ ಸೇರಿ 34 ಸಚಿವರ ದರ್ಬಾರ್ ಶುರುವಾಗಿದೆ. ಇದರ ಮಧ್ಯೆ ಕರ್ನಾಟಕದ ಖಡಕ್ ಪೊಲೀಸ್ ಅಧಿಕಾರಿಗಳಲ್ಲಿ ಒಬ್ಬರಾದ ಸಿಂಗಂ ಖ್ಯಾತಿಯ ರವಿ ಡಿ ಚೆನ್ನಣ್ಣನವರ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯನವರ ನಿವಾಸಕ್ಕೆ ಭೇಟಿ ನೀಡಿದ್ದಾರೆ.