ಕಷ್ಟಪಟ್ಟಿದ್ದ ಡಿ.ಕೆ. ಶಿವಕುಮಾರ್‌ಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿಯಾಗುವ ಬಗ್ಗೆ ಶಾಸಕ ಇಕ್ಬಾಲ್ ಹುಸೇನ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಅಧಿವೇಶನದ ನಂತರ ಅವರಿಗೆ ಈ ಅವಕಾಶ ಸಿಗಲಿದೆ . ಡಿನ್ನರ್ ಮೀಟಿಂಗ್ ಶಕ್ತಿ ಪ್ರದರ್ಶನವಲ್ಲ, ಸೌಹಾರ್ದಯುತ ಭೋಜನಕೂಟ ಎಂದಿರುವ ಶಾಸಕ, ಕಾಂಗ್ರೆಸ್ ಪಕ್ಷದಲ್ಲಿ ವರಿಷ್ಠರ ನಿರ್ಧಾರವೇ ಅಂತಿಮ ಎಂದು ತಿಳಿಸಿದ್ದಾರೆ.
ಬೆಳಗಾವಿ, ಡಿಸೆಂಬರ್ 12: ಶೀಘ್ರದಲ್ಲೇ ಡಿ.ಕೆ. ಶಿವಕುಮಾರ್ ಕರ್ನಾಟಕದ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಶಾಸಕ ಇಕ್ಬಾಲ್ ಹುಸೇನ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಅಧಿವೇಶನ ಮುಗಿದ ನಂತರ ಡಿ.ಕೆ. ಶಿವಕುಮಾರ್‌ಗೆ ಮುಖ್ಯಮಂತ್ರಿ ಸ್ಥಾನ ಲಭಿಸಲಿದೆ. ಡಿನ್ನರ್ ಮೀಟಿಂಗ್ ಶಕ್ತಿ ಪ್ರದರ್ಶನವಲ್ಲ, ಸೌಹಾರ್ದಯುತ ಭೋಜನಕೂಟ. ಊಟಕ್ಕೆ ಯಾರು ಬೇಕಾದರೂ ಬರಬಹುದು, ಇದರಲ್ಲಿ ರಾಜಕೀಯವಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಕಾಂಗ್ರೆಸ್ ಶಿಸ್ತಿನ ಪಕ್ಷವಾಗಿದ್ದು, ಯಾವುದೇ ನಂಬರ್ ಗೇಮ್‌ಗಳಿಗೆ ಮಹತ್ವ ನೀಡುವುದಿಲ್ಲ. ಹೈಕಮಾಂಡ್ ತೆಗೆದುಕೊಳ್ಳುವ ಅಂತಿಮ ನಿರ್ಧಾರಕ್ಕೆ ಎಲ್ಲರೂ ಬದ್ಧರಾಗಿರಬೇಕು ಎಂದು ಇಕ್ಬಾಲ್ ತಿಳಿಸಿದ್ದಾರೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
Published on: Dec 12, 2025 12:04 PM

