ಇರಾನ್ ಸಹಾಯದಿಂದ ಚಿಕ್ಕಬಳ್ಳಾಪುರದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆಗೆ ಭೇಟಿ ನೀಡಿದ್ದ ಖಮೇನಿ

Edited By:

Updated on: Mar 01, 2026 | 3:24 PM

ಇಸ್ರೆಲ್ ಹಾಗೂ ಅಮೆರಿಕಾ ನಡೆದಿಸ ಜಂಟಿ ದಾಳಿಯಲ್ಲಿ ಇರಾನ್ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ( Ali Khamenei) ಹತ್ಯೆಯಾಗಿದ್ದು, ಈ ಸುದ್ದಿಯಿಂದ ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ ಅಲಿಪುರ ಗ್ರಾಮದಲ್ಲಿ ಆಳವಾದ ಶೋಕ ಮಡುಗಟ್ಟಿದೆ. ಹತ್ಯೆ ವಿಚಾರ ಹೊರಬಂದ ಬಳಿಕ ಗ್ರಾಮಸ್ಥರು ಸ್ವಯಂ ಪ್ರೇರಿತವಾಗಿ ಅಂಗಡಿ ಮುಗ್ಗಟ್ಟುಗಳನ್ನು ಬಂದ್ ಮಾಡಿ ಶೋಕಾಚರಣೆ ನಡೆಸಿದರು. ಅಲಿಪುರ ಗ್ರಾಮವನ್ನು ‘ಮಿನಿ ಇರಾನ್’ ಎಂದೇ ಕರೆಯಲಾಗುತ್ತದೆ.

ಚಿಕ್ಕಬಳ್ಳಾಪುರ, (ಮಾರ್ಚ್​ 1): ಇಸ್ರೆಲ್ ಹಾಗೂ ಅಮೆರಿಕಾ ನಡೆದಿಸ ಜಂಟಿ ದಾಳಿಯಲ್ಲಿ ಇರಾನ್ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ( Ali Khamenei) ಹತ್ಯೆಯಾಗಿದ್ದು, ಈ ಸುದ್ದಿಯಿಂದ ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ ಅಲಿಪುರ ಗ್ರಾಮದಲ್ಲಿ ಆಳವಾದ ಶೋಕ ಮಡುಗಟ್ಟಿದೆ. ಹತ್ಯೆ ವಿಚಾರ ಹೊರಬಂದ ಬಳಿಕ ಗ್ರಾಮಸ್ಥರು ಸ್ವಯಂ ಪ್ರೇರಿತವಾಗಿ ಅಂಗಡಿ ಮುಗ್ಗಟ್ಟುಗಳನ್ನು ಬಂದ್ ಮಾಡಿ ಶೋಕಾಚರಣೆ ನಡೆಸಿದರು. ಅಲಿಪುರ ಗ್ರಾಮವನ್ನು ‘ಮಿನಿ ಇರಾನ್’ ಎಂದೇ ಕರೆಯಲಾಗುತ್ತದೆ.

ಇನ್ನು ಇರಾನ್ ಸಹಾಯದಿಂದ ಅಲಿಪುರದಲ್ಲಿ ಆಸ್ಪತ್ರೆ ನಿರ್ಮಾಣ ಮಾಡಲಾಗಿದ್ದು, ಈ ಆಸ್ಪತ್ರೆ ಶಂಕು ಸ್ಥಾಪನಾ ಕಾರ್ಯಕ್ರಮಕ್ಕೆ  1981ರಲ್ಲಿ ಅಯತೊಲ್ಲಾ ಅಲಿ ಖಮೇನಿ ಅವರು ಅಲಿಪುರ ಗ್ರಾಮಕ್ಕೆ ಆಗಮಿಸಿದ್ದರು. ಈ ಬಗ್ಗೆ ಸ್ಥಳೀಯರಲ್ಲಿ ನೆನಪು ಇನ್ನೂ ಹಸಿರಾಗಿದೆ. ಗ್ರಾಮದಲ್ಲಿರುವ ಮಸೀದಿಯಲ್ಲಿ ಅವರು ಪ್ರಾರ್ಥನೆ ಸಲ್ಲಿಸಿದ್ದನ್ನು ಹಿರಿಯರು ಸ್ಮರಿಸುತ್ತಿದ್ದಾರೆ. ಅಲಿಪುರದ ಸುಮಾರು 20 ಸಾವಿರ ಜನರು ಖಮೇನಿ ಅವರನ್ನು ಧರ್ಮಗುರುವೆಂದು ಗೌರವಿಸುತ್ತಾರೆ. ಇನ್ನು ಅಲಿಪುರದ ಖಮೇನಿ ನಿರ್ಮಿಸಿದ್ದ ಆಸ್ಪತ್ರೆ ಇದೆ ನೋಡಿ.

ಇದನ್ನೂ ಓದಿ: ಚಿಕ್ಕಬಳ್ಳಾಪುರ ಅಲೀಪುರದ 20 ಸಾವಿರ ಮಂದಿಗೆ ಅಲಿ ಖಮೇನಿ ಧರ್ಮಗುರು! ಕರ್ನಾಟಕದ ಮಿನಿ ಇರಾನ್ ಬಗ್ಗೆ ನಿಮಗೆ ಗೊತ್ತೇ!

Published on: Mar 01, 2026 03:23 PM
Follow Us
ಮಾಲತೇಶ ಜಗ್ಗೀನ್

ಮಾಲತೇಶ ಜಗ್ಗೀನ್. Tv9 ಕನ್ನಡ ವಾಹಿನಿ ಫಿಲಂ ಬ್ಯೂರೋ ಮುಖ್ಯಸ್ಥನಾಗಿ ಕೆಲಸ ಮಾಡ್ತಿದ್ದಾರೆ. ಮಾಲತೇಶ ವಿಜಯನಗರ ಜಿಲ್ಲೆ ಹೂವಿನ ಹಡಗಲಿ ತಾಲ್ಲೂಕು ಹೊಳಲು ಗ್ರಾಮದವರು. ಕಳೆದ 15 ವರ್ಷಗಳಲ್ಲಿ ಮಾಧ್ಯಮ ಲೋಕದ ವಿವಿಧ ವಿಭಾಗಗಳಲ್ಲಿ ವರದಿಗಾರಿಕೆ ಮಾಡಿದ ಅನುಭವ ಇದೆ. ಸಿನಿಮಾ ವಿಭಾಗದ ಜೊತೆ ರಾಜಕೀಯ, ಮೆಟ್ರೋ, ಕ್ರೈಂ ವಿಭಾಗದಲ್ಲೂ ಕೆಲವು ಸನ್ನಿವೇಶಗಳಲ್ಲಿ ವರದಿಗಾರಿಕೆ ಮಾಡಿದ್ದಾರೆ. ಹಾವೇರಿಯ ಕೆಎಫ್ ಚಾನಲ್ , ನಂತರ ಬೆಂಗಳೂರಿನ ಸಮಯ ನ್ಯೂಸ್, ಜನಶ್ರಿ ನ್ಯೂಸ್, ಪಬ್ಲಿಕ್ ಟಿವಿ ಸೇರಿದಂತೆ ವಿವಿಧ ವಾಹಿನಿಗಳಲ್ಲಿ ಕೆಲಸ ಮಾಡಿದ ಅನುಭವ ಇದೆ. Tv9kannada ನ್ಯೂಸ್ ಚಾನಲ್ ನಲ್ಲಿ ಕಳೆದ 10 ವರ್ಷಗಳಿಂದ ಇದ್ದಾರೆ. ಕಲೆ, ಸಾಹಿತ್ಯ, ಸಿನಿಮಾ, ಕ್ರಿಡೆ ಆಸಕ್ತಿ ವಿಷಯಗಳು.

Read More