ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಅಮೆರಿಕ – ಇಸ್ರೇಲ್ ಜಂಟಿ ದಾಳಿಯಲ್ಲಿ ಇರಾನ್ ಸುಪ್ರೀಂ ಲೀಡರ್ ಅಯಾತೊಲ್ಲ ಅಲಿ ಖಮೇನಿ (Ayatollah Khamenei) ಸಾವಿನಪ್ಪಿರುವ ಸುದ್ದಿ ಕೇಳಿ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಅಲೀಪುರ ಗ್ರಾಮದಲ್ಲ (Alipura Village) ನೀರವ ಮೌನ ಆವರಿಸಿದೆ. ಗ್ರಾಮದಲ್ಲಿ ಎಲ್ಲಾ ಅಂಗಡಿ ಮುಂಗಟ್ಟುಗಳನ್ನ ಸಂಪೂರ್ಣ ಬಂದ್ ಮಾಡಲಾಗಿದೆ. 3 ದಿನಗಳ ಕಾಲ ʻಬ್ಲಾಕ್ ಡೇʼ (ಕರಾಳ ದಿನ) ಆಚರಣೆ ಮಾಡಲು ತೀರ್ಮಾನಿಸಲಾಗಿದೆ.
ಚಿಕ್ಕಬಳ್ಳಾಪುರ, (ಮಾರ್ಚ್ 01): ಅಮೆರಿಕ – ಇಸ್ರೇಲ್ ಜಂಟಿ ದಾಳಿಯಲ್ಲಿ ಇರಾನ್ ಸುಪ್ರೀಂ ಲೀಡರ್ ಅಯಾತೊಲ್ಲ ಅಲಿ ಖಮೇನಿ (Ayatollah Khamenei) ಸಾವಿನಪ್ಪಿರುವ ಸುದ್ದಿ ಕೇಳಿ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಅಲೀಪುರ ಗ್ರಾಮದಲ್ಲ (Alipura Village) ನೀರವ ಮೌನ ಆವರಿಸಿದೆ. ಗ್ರಾಮದಲ್ಲಿ ಎಲ್ಲಾ ಅಂಗಡಿ ಮುಂಗಟ್ಟುಗಳನ್ನ ಸಂಪೂರ್ಣ ಬಂದ್ ಮಾಡಲಾಗಿದೆ. 3 ದಿನಗಳ ಕಾಲ ʻಬ್ಲಾಕ್ ಡೇʼ (ಕರಾಳ ದಿನ) ಆಚರಣೆ ಮಾಡಲು ತೀರ್ಮಾನಿಸಲಾಗಿದೆ.
ಬೇಬಿ ಅಪ್ ಇರಾನ್ ಅoತಲೇ ಕರೆಸಿಕೊಳ್ಳುವ ಅಲೀಪುರ ಗ್ರಾಮಕ್ಕೆ 1986 ರಲ್ಲಿ ಖಮೇನಿ ಭೇಟಿ ನೀಡಿದ್ದರು. ಇವರ ಹೆಸ್ರಲ್ಲಿ ಆಸ್ಪತ್ರೆ ಸಹ ಈ ಗ್ರಾಮದಲ್ಲಿದೆ. ಖಮೇನಿ ಅಂದ್ರೆ ಇಲ್ಲಿನ ಜನರಿಗೆ ಪೂಜ್ಯ ಮತ್ತು ಗೌರವ ಭಾವ. ಹಾಗಾಗಿ ಅವರ ಸಾವಿನ ಸುದ್ದಿಯಿಂದ ಅಲೀಪುರ ಸ್ತಬ್ಧವಾಗಿದೆ. ಇನ್ನೂ ಅಲೀಪುರದ ಕೆಲವರು ಧಾರ್ಮಿಕ ಶಿಕ್ಷಣ ಪಡೆಯುವ ಸಲುವಾಗಿ ಇರಾನ್ ನಲ್ಲಿ ನೆಲೆಸಿದ್ದಾರೆ. ಕೆಲ ವಿದ್ಯಾರ್ಥಿಗಳು ವೈದ್ಯಕೀಯ ಶಿಕ್ಷಣ ವ್ಯಾಸಂಗ ಮಾಡುತ್ತಿದ್ದಾರೆ. ಇರಾನ್‌ನಲ್ಲಿ ಯುದ್ಧ (War In Iran) ಸಂಭವಿಸಿದಾಗಲೆಲ್ಲಾ ಇಲ್ಲಿನ ಜನರ ಹೃದಯ ಕಲುಕುತ್ತೆ. ತಮ್ಮವರಿಗೆ ಏನಾಯ್ತೋ ಅನ್ನೋ ಆತಂಕ ಮನೆ ಮಾಡುತ್ತೆ. ಸದ್ಯ ಅಲೀಪುರ ಗ್ರಾಮ ಮೌನಕ್ಕೆ ಜಾರಿದ್ದು, ಇಲ್ಲಿನ ಜನ ಕಣ್ಣೀರು ಹಾಕುತ್ತಿದ್ದಾರೆ.
ಇದನ್ನೂ ಓದಿ: ಚಿಕ್ಕಬಳ್ಳಾಪುರ ಅಲೀಪುರದ 20 ಸಾವಿರ ಮಂದಿಗೆ ಅಲಿ ಖಮೇನಿ ಧರ್ಮಗುರು! ಕರ್ನಾಟಕದ ಮಿನಿ ಇರಾನ್ ಬಗ್ಗೆ ನಿಮಗೆ ಗೊತ್ತೇ!
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು

