10 ತೈಲ ಹಡಗುಗಳನ್ನು ಉಡಾಯಿಸಿದ ಇರಾನ್, ಹೊರ್ಮುಜ್ ಜಲಸಂಧಿಗೆ ಇರಾನ್ ನಿರ್ಬಂಧ
ಇರಾನ್ ಹೊರ್ಮುಜ್ ಜಲಸಂಧಿಗೆ ನಿರ್ಬಂಧ ವಿಧಿಸಿ, 10 ತೈಲ ಹಡಗುಗಳ ಮೇಲೆ ದಾಳಿ ನಡೆಸಿದೆ. ಈ ಜಲಸಂಧಿ ವಿಶ್ವದ ಶೇ 20ರಷ್ಟು ತೈಲ ಸಾಗಣೆಗೆ ಪ್ರಮುಖ ಮಾರ್ಗವಾಗಿದೆ. ಭಾರತದ 37 ಹಡಗುಗಳು ಮತ್ತು 1,109 ನಾವಿಕರು ಇದೀಗ ಸಿಕ್ಕಿಹಾಕಿಕೊಂಡಿದ್ದು, ತೈಲ ಬೆಲೆ ಏರಿಕೆಯ ಭೀತಿ ಎದುರಾಗಿದೆ.
ಹೊರ್ಮುಜ್ ಜಲಸಂಧಿಗೆ ನಿರ್ಬಂಧ ಹೇರಿರುವುದಾಗಿ ಇರಾನ್ ಘೋಷಿಸಿದ್ದು, ಈ ನಿರ್ಬಂಧವನ್ನು ಉಲ್ಲಂಘಿಸಿ ತೈಲ ಸಾಗಿಸುತ್ತಿದ್ದ 10 ಹಡಗುಗಳ ಮೇಲೆ ದಾಳಿ ನಡೆಸಿರುವುದಾಗಿ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಮಾಹಿತಿ ನೀಡಿದೆ. ಈ ಜಲಸಂಧಿಯು ವಿಶ್ವದ ಒಟ್ಟು ತೈಲ ಪೂರೈಕೆಯ ಶೇಕಡ 20 ರಷ್ಟು ಭಾಗವನ್ನು ಸಾಗಿಸುವ ಪ್ರಮುಖ ಜಲಮಾರ್ಗವಾಗಿದೆ. ಈ ಘಟನೆಯಿಂದ ಭಾರತದ ಮೇಲೆ ನೇರ ಪರಿಣಾಮ ಬೀರಿದೆ. ಸುಮಾರು 37 ಭಾರತೀಯ ಹಡಗುಗಳು, 10,000 ಕೋಟಿ ರೂ. ಮೌಲ್ಯದ ಸರಕುಗಳೊಂದಿಗೆ ಮತ್ತು 1,109 ನಾವಿಕರೊಂದಿಗೆ ಹೊರ್ಮುಜ್ ಜಲಸಂಧಿ ಅಥವಾ ಒಮಾನ್ ಕೊಲ್ಲಿಯಲ್ಲಿ ಸಿಕ್ಕಿಹಾಕಿಕೊಂಡಿವೆ. ಭಾರತವು ಈ ಜಲಸಂಧಿಯ ಮೂಲಕ ಪ್ರತಿದಿನ ಸುಮಾರು 26 ಲಕ್ಷ ಬ್ಯಾರೆಲ್ ತೈಲವನ್ನು ಆಮದು ಮಾಡಿಕೊಳ್ಳುತ್ತದೆ. ಸದ್ಯದ ಪರಿಸ್ಥಿತಿ ಮುಂದುವರಿದರೆ, ಭಾರತ ಸೇರಿದಂತೆ ವಿವಿಧ ರಾಷ್ಟ್ರಗಳಲ್ಲಿ ತೈಲ ಬೆಲೆ ಏರಿಕೆಯಾಗುವ ಸಾಧ್ಯತೆಯಿದೆ. ಭಾರತ ಸರ್ಕಾರ ಪರ್ಯಾಯ ವ್ಯವಸ್ಥೆಗಳ ಬಗ್ಗೆ ಚಿಂತಿಸುತ್ತಿದ್ದರೂ, ತೈಲ ಕೊರತೆ ಮತ್ತು ಬೆಲೆ ಏರಿಕೆಯ ಲಕ್ಷಣಗಳು ಗೋಚರಿಸುತ್ತಿವೆ.
ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಕಬ್ಬು ಬೆಳೆಗೆ ಎಂಎಸ್ಪಿ ನಿಗದಿ ಬಗ್ಗೆ ರೈತರಿಗೆ ಗುಡ್ನ್ಯೂಸ್ ಕೊಟ್ಟ ಜೋಶಿ
ಮೋದಿ ಸರ್ಕಾರ ರೈತರ ಪರ, ಎಥೆನಾಲ್ ಖರೀದಿಯಲ್ಲಿ ಹೊಸ ದಾಖಲೆ: ಪ್ರಲ್ಹಾದ್ ಜೋಶಿ
ದಸರಾ, ದೀಪಾವಳಿ ಹಿನ್ನೆಲೆ: ಸ್ವೀಟ್ ಶಾಪ್ಗಳ ಮೇಲೆ ದಾಳಿ ಮುಂದುವರಿಕೆ
ಕೆಂಪೇಗೌಡ ಏರ್ಪೋರ್ಟ್ನಲ್ಲಿ ಮಾಲಾ ವೇಷಧಾರಿಗಳಿಂದ 'ಹೈಟೆಕ್ ಭಿಕ್ಷಾಟನೆ'!

