ಇರಾನ್ ಹಾರ್ಮುಜ್ ಜಲಸಂಧಿ ಮುಚ್ಚಿದ ಪರಿಣಾಮ: ಪರ್ಷಿಯನ್ ಕೊಲ್ಲಿಯಲ್ಲಿ ಸಿಲುಕಿದ ಭಾರತದ 37 ಹಡಗು

Updated on: Mar 04, 2026 | 4:40 PM

ಪರ್ಷಿಯನ್ ಕೊಲ್ಲಿ ಮತ್ತು ಒಮಾನ್ ಜಲಸಂಧಿಯಲ್ಲಿ ಭಾರತದ 37 ಹಡಗುಗಳು ಸಿಲುಕಿವೆ. ಇರಾನ್ ಹಾರ್ಮುಜ್ ಜಲಸಂಧಿಯನ್ನು ಮುಚ್ಚಿದ ಹಿನ್ನೆಲೆಯಲ್ಲಿ ಈ ಪರಿಸ್ಥಿತಿ ಉದ್ಭವಿಸಿದೆ. 10,000 ಕೋಟಿ ರೂ. ಮೌಲ್ಯದ ಸರಕು ಹೊಂದಿರುವ ಈ ಹಡಗುಗಳಿಗೆ ಭಾರತದ ಬಂದರು ಸಚಿವಾಲಯ ನಿರಂತರ ಸಂಪರ್ಕದಲ್ಲಿರಲು ಸೂಚಿಸಿದೆ.

ನವದೆಹಲಿ, ಮಾರ್ಚ್ 4: ಇಸ್ರೇಲ್, ಅಮೆರಿಕ ಮತ್ತು ಇರಾನ್ ನಡುವಿನ ಸಂಘರ್ಷ ಉಲ್ಬಣಗೊಳ್ಳುತ್ತಿರುವ ನಡುವೆಯೇ ಹಾರ್ಮುಜ್ ಜಲಸಂಧಿಯನ್ನು ಮುಚ್ಚಲಾಗಿದೆ. ಇರಾನ್​​ನ ಈ ನಿರ್ಧಾರದಿಂದಾಗಿ ಪರ್ಷಿಯನ್ ಕೊಲ್ಲಿ ಮತ್ತು ಒಮಾನ್ ಜಲಸಂಧಿಯಲ್ಲಿ ಭಾರತದ 37 ಹಡಗುಗಳು ಸಿಲುಕಿವೆ. ಈ ಹಡಗುಗಳಲ್ಲಿ 1,109 ಸಿಬ್ಬಂದಿ ಇದ್ದು, ಸುಮಾರು 10,000 ಕೋಟಿ ರೂ. ಮೌಲ್ಯದ ಸರಕು ಸಾಗಾಟವಾಗುತ್ತಿದೆ. ಭಾರತದ ಬಂದರು ಸಚಿವಾಲಯವು ಹಡಗುಗಳಿಗೆ ನಿರಂತರ ರಾಡಾರ್ ಸಂಪರ್ಕ ಕಾಯ್ದುಕೊಳ್ಳಲು ಮತ್ತು ದೆಹಲಿಯೊಂದಿಗೆ ಟೋಲ್ ಫ್ರೀ ಸಹಾಯವಾಣಿ ಮೂಲಕ ಸಂಪರ್ಕದಲ್ಲಿರಲು ಸೂಚನೆ ನೀಡಿದೆ. ಸಚಿವಾಲಯವು ನಾವಿಕರಿಗೆ ತುರ್ತು ಸೌಲಭ್ಯಗಳನ್ನು ಒದಗಿಸಲು ಮತ್ತು ಹಡಗು ಸಾಗಣೆಯನ್ನು ಪುನರಾರಂಭಿಸಲು ತ್ವರಿತ ಕ್ರಮಗಳನ್ನು ತೆಗೆದುಕೊಳ್ಳುವುದಾಗಿ ಭರವಸೆ ನೀಡಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Loading...
Unable to load recommendations.
Follow Us
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More