ಗ್ಯಾಸ್ ಸಂಕಷ್ಟ ಬೆನ್ನಲ್ಲೇ ಇರಾನ್-ಇಸ್ರೇಲ್ ಯುದ್ಧದಿಂದ ಗ್ರ್ಯಾನೈಟ್ ಉದ್ಯಮಕ್ಕೂ ಕುತ್ತು
ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಯುದ್ಧದ ಪರಿಣಾಮವಾಗಿ ಭಾರತದ ಗ್ರಾನೈಟ್ ಮತ್ತು ಟೈಲ್ಸ್ ಉದ್ಯಮ ತೀವ್ರ ಸಂಕಷ್ಟ ಎದುರಿಸುತ್ತಿದೆ. ಗ್ಯಾಸ್ ಕೊರತೆಯಿಂದಾಗಿ ದೇಶಾದ್ಯಂತ ನೂರಾರು ಉತ್ಪಾದನಾ ಘಟಕಗಳು ಬಂದ್ ಆಗಿವೆ. ಇದು ವೆಟ್ರಿಫೈಡ್ ಟೈಲ್ಸ್ ಮತ್ತು ಗ್ರಾನೈಟ್ ಉತ್ಪನ್ನಗಳ ಕೊರತೆ ಮತ್ತು ಬೆಲೆ ಏರಿಕೆಗೆ ಕಾರಣವಾಗಿದೆ, ಗ್ರಾಹಕರು ಮತ್ತು ಕಾರ್ಮಿಕರ ಮೇಲೆ ಪರಿಣಾಮ ಬೀರಿದೆ.
ಮಂಗಳೂರು, ಮಾರ್ಚ್ 13: ಇರಾನ್-ಇಸ್ರೇಲ್ ಯುದ್ಧದ ತೀವ್ರತೆಯು ಭಾರತದ ಗ್ರಾನೈಟ್ ಉದ್ಯಮದ ಮೇಲೆ ನೇರ ಪರಿಣಾಮ ಬೀರಿದೆ. ಗ್ಯಾಸ್ ಕೊರತೆಯು ಟೈಲ್ಸ್, ಗ್ರಾನೈಟ್ ಮತ್ತು ವೆಟ್ರಿಫೈಡ್ ಟೈಲ್ಸ್ ಉತ್ಪಾದನೆಗೆ ದೊಡ್ಡ ಅಡಚಣೆಯಾಗಿದೆ. ಈಗಾಗಲೇ ದೇಶದಾದ್ಯಂತ ನೂರಾರು ಫ್ಯಾಕ್ಟರಿಗಳು ಮುಚ್ಚಲ್ಪಟ್ಟಿವೆ. ಮಂಗಳೂರಿಗೆ ಸರಬರಾಜು ಮಾಡುತ್ತಿದ್ದ ಹಲವು ಘಟಕಗಳಿಗೂ ಬೀಗ ಜಡಿಯಲಾಗಿದೆ. ಟೈಲ್ಸ್ ಮತ್ತು ವೆಟ್ರಿಫೈಡ್ ಟೈಲ್ಸ್ ತಯಾರಿಕೆಗೆ ನೈಸರ್ಗಿಕ ಅನಿಲವನ್ನು ಹೀಟಿಂಗ್ ಮತ್ತು ಕೂಲಿಂಗ್ ಪ್ರಕ್ರಿಯೆಗಳಲ್ಲಿ ವ್ಯಾಪಕವಾಗಿ ಬಳಸಲಾಗುತ್ತದೆ. ಗ್ಯಾಸ್ ಕೊರತೆಯಿಂದಾಗಿ ಉತ್ಪಾದನಾ ವೆಚ್ಚ ಹೆಚ್ಚಾಗಿದೆ ಮತ್ತು ಉತ್ಪನ್ನಗಳ ಲಭ್ಯತೆ ಕುಸಿದಿದೆ. ಇದರ ಪರಿಣಾಮವಾಗಿ, ಮಾರುಕಟ್ಟೆಯಲ್ಲಿ ಟೈಲ್ಸ್ ಮತ್ತು ವೆಟ್ರಿಫೈಡ್ ಉತ್ಪನ್ನಗಳ ತೀವ್ರ ಕೊರತೆ ಎದುರಾಗಿದ್ದು, ಗ್ರಾಹಕರಿಗೆ ಆರ್ಡರ್ ಮಾಡಿದ ಉತ್ಪನ್ನಗಳು ಸಿಗುತ್ತಿಲ್ಲ. ಹೊಸ ಆರ್ಡರ್‌ಗಳನ್ನು ಅಂಗಡಿ ಮಾಲೀಕರು ಸಹ ತೆಗೆದುಕೊಳ್ಳಲು ಸಾಧ್ಯವಾಗುತ್ತಿಲ್ಲ.
ಈ ಪರಿಸ್ಥಿತಿಯು ಸಾವಿರಾರು ಕಾರ್ಖಾನೆಗಳ ಭವಿಷ್ಯವನ್ನು ಅನಿಶ್ಚಿತತೆಗೆ ತಳ್ಳಿದೆ, ಉದ್ಯೋಗಿಗಳ ಮೇಲೆ ಕೂಡ ಪರಿಣಾಮ ಬೀರಿದೆ. ಮಧ್ಯಪ್ರಾಚ್ಯದ ಸಂಘರ್ಷದ ಪರಿಣಾಮಗಳು ದೇಶದ ಆರ್ಥಿಕತೆಯ ವಿವಿಧ ವಲಯಗಳ ಮೇಲೆ ವ್ಯಾಪಕವಾಗಿ ಹರಡುತ್ತಿವೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
