ಬೆಂಗಳೂರು ವಿಮಾನ ನಿಲ್ದಾಣಕ್ಕೂ ತಟ್ಟಿದ ಇರಾನ್-ಇಸ್ರೇಲ್ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು, ಪ್ರಯಾಣಿಕರ ಪರದಾಟ

Edited By:

Updated on: Mar 02, 2026 | 6:54 AM

ಮಧ್ಯಪ್ರಾಚ್ಯದಲ್ಲಿ ಇಸ್ರೇಲ್-ಇರಾನ್ ಸಂಘರ್ಷ ತೀವ್ರಗೊಂಡಿದ್ದು, ಇದರ ಪರಿಣಾಮ ಬೆಂಗಳೂರಿನ ಕೆಂಪೇಗೌಡ ಏರ್‌ಪೋರ್ಟ್‌ ಮೇಲೂ ತಟ್ಟಿದೆ. ಇಲ್ಲಿ ವಿಮಾನಗಳ ಹಾರಾಟ ರದ್ದಾಗಿದೆ. ಅರಬ್ ರಾಷ್ಟ್ರಗಳಿಗೆ ತೆರಳಬೇಕಿದ್ದ ಆರು ಹಾಗೂ ಆಗಮಿಸಬೇಕಿದ್ದ ಒಂಬತ್ತು ಸೇರಿದಂತೆ ಒಟ್ಟು 15 ವಿಮಾನಗಳು ಭಾನುವಾರ ರದ್ದಾಗಿದ್ದು, 1533 ಪ್ರಯಾಣಿಕರು ಅತಂತ್ರರಾಗಿದ್ದಾರೆ. ಏರ್‌ಪೋರ್ಟ್‌ನಲ್ಲಿ ಹೆಲ್ಪ್‌ ಡೆಸ್ಕ್‌ ತೆರೆದು ಪ್ರಯಾಣಿಕರಿಗೆ ವ್ಯವಸ್ಥೆ ಮಾಡಲಾಗಿದೆ.

ಬೆಂಗಳೂರು, ಮಾರ್ಚ್​ 2: ಇಸ್ರೇಲ್-ಇರಾನ್ ಸಂಘರ್ಷವು ವಿಶ್ವದಾದ್ಯಂತ ತಲ್ಲಣ ಮೂಡಿಸಿದೆ. ಈ ಯುದ್ಧದ ಪರಿಣಾಮವಾಗಿ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಹಲವು ವಿಮಾನಗಳ ಹಾರಾಟ ಸ್ಥಗಿತಗೊಂಡಿದ್ದು, ಸಾವಿರಾರು ಪ್ರಯಾಣಿಕರು ಪರದಾಡುತ್ತಿದ್ದಾರೆ. ಅರಬ್ ರಾಷ್ಟ್ರಗಳಾದ ದುಬೈ, ದೋಹಾ, ಅಬುದಾಬಿ, ಜಿದ್ದಾ, ದಮಾಮ್‌ಗೆ ತೆರಳಬೇಕಿದ್ದ ಆರು ವಿಮಾನಗಳು ಹಾಗೂ ಅಲ್ಲಿಂದ ಆಗಮಿಸಬೇಕಿದ್ದ ಒಂಬತ್ತು ವಿಮಾನಗಳು ಸೇರಿದಂತೆ ಒಟ್ಟು 15 ವಿಮಾನಗಳು ರದ್ದಾಗಿವೆ.

ವಿಮಾನಗಳ ರದ್ದತಿಯಿಂದಾಗಿ 1533ಕ್ಕೂ ಹೆಚ್ಚು ಪ್ರಯಾಣಿಕರು ಏರ್‌ಪೋರ್ಟ್‌ನಲ್ಲಿ ಅತಂತ್ರರಾಗಿದ್ದಾರೆ. ಏರ್‌ಪೋರ್ಟ್ ಸಿಬ್ಬಂದಿ ಪ್ರಯಾಣಿಕರ ಪರದಾಟವನ್ನು ಅರಿತು, ಅವರಿಗೆ ತಿಂಡಿ-ಬಿಸ್ಕತ್‌ಗಳ ವ್ಯವಸ್ಥೆ ಮಾಡಿದ್ದಾರೆ. ಅಲ್ಲದೆ, ಪ್ರಯಾಣಿಕರಿಗೆ ಮಾಹಿತಿ ನೀಡಲು ಮತ್ತು ನೆರವಾಗಲು ಹೆಲ್ಪ್ ಡೆಸ್ಕ್‌ಗಳನ್ನು ಸ್ಥಾಪಿಸಲಾಗಿದೆ. ವಿಮಾನ ಟಿಕೆಟ್‌ ರದ್ದುಪಡಿಸಲು ಮತ್ತು ಮನೆಗಳಿಗೆ ಮರಳಲು ಹಲವು ಪ್ರಯಾಣಿಕರು ಮುಂದಾಗಿದ್ದಾರೆ. ಈ ಸಂಘರ್ಷವು ಅಂತರರಾಷ್ಟ್ರೀಯ ವಿಮಾನಯಾನದ ಮೇಲೆ ದೊಡ್ಡ ಪರಿಣಾಮ ಬೀರಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ನವೀನ್ ಕುಮಾರ್ ಟಿ.

ನವೀನ್ ಕುಮಾರ್ ಟಿ ರವರು ಮೂಲತಃ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ಹೆಮ್ಮೆಯ ಟಿವಿ9 ಕನ್ನಡದ ದೇವನಹಳ್ಳಿ, ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಎಂಎಸ್​ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ಇವರು ಪದವಿ ಶಿಕ್ಷಣ ಮುಗಿದ ನಂತರ ಟಿವಿ9 ಕನ್ನಡದಲ್ಲಿ ವರದಿಗಾರರಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದಾರೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಹುದ್ದೆಯನ್ನು ಕಳೆದ 9 ವರ್ಷದಿಂದ ಸಿಲಿಕಾನ್ ಸಿಟಿ ಹೊರ ವಲಯದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನಗರ ಜಿಲ್ಲೆಯ ಯಲಹಂಕ ಭಾಗದ ಸುದ್ದಿಗಳನ್ನ ವರದಿ ಮಾಡುತ್ತಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ಪ್ರಮುಖವಾಗಿ ದೇಶದ ಟಾಪ್ 3 ನಲ್ಲಿ ಹೆಸರು ಪಡೆದು ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದ ಪ್ರಮುಖ ಸುದ್ದಿಗಳು ರಾಜಕೀಯ ಹಾಗೂ ಸಿಲಿಕಾನ್ ಸಿಟಿ ಹೊರ ವಲಯದಲ್ಲಿ ನಡೆಯುವ ಕ್ರೈಂ ಸೇರಿದಂತೆ ಇತರೆ ಸುದ್ದಿಗಳನ್ನ ವರದಿ ಮಾಡುತ್ತಾ ಎಕ್ಸಕ್ಲೂಸಿವ್ ವರದಿಗಳನ್ನ ನೀಡುತ್ತಿದ್ದಾರೆ.

Read More