ಇಸ್ರೇಲ್-ಇರಾನ್ ಮಧ್ಯೆ ಯುದ್ಧ: ದುಬೈ ಏರ್‌ಪೋರ್ಟ್‌ನಲ್ಲಿ ಕುಟುಂಬ ಸಮೇತ ಸಿಲುಕಿದ ಭೋಜೇಗೌಡ
ಇಸ್ರೇಲ್-ಇರಾನ್ ಯುದ್ಧದ ಪರಿಣಾಮವಾಗಿ ಕನ್ನಡಿಗರಿಗೆ ಬಿಸಿ ತಟ್ಟಿದೆ. ಜೆಡಿಎಸ್ ಪರಿಷತ್ ಸದಸ್ಯ ಬೋಜೆ ಗೌಡ ಮತ್ತು ಅವರ ಕುಟುಂಬ ದುಬೈ ಏರ್‌ಪೋರ್ಟ್‌ನಲ್ಲಿ ಸಿಲುಕಿಕೊಂಡಿದ್ದಾರೆ. ಬೆಂಗಳೂರಿಗೆ ಹೊರಟಿದ್ದ ಅವರ ವಿಮಾನ ಸೇವೆ ಯುದ್ಧದ ಕಾರಣದಿಂದ ಸ್ಥಗಿತಗೊಂಡಿದೆ. ಈ ಅನಿರೀಕ್ಷಿತ ಘಟನೆ ಅಂತರಾಷ್ಟ್ರೀಯ ಘರ್ಷಣೆಯು ಸಾಮಾನ್ಯ ಜನರ ಪ್ರಯಾಣ ಮತ್ತು ಸುರಕ್ಷತೆಯ ಮೇಲೆ ಬೀರುವ ಪರಿಣಾಮವನ್ನು ಎತ್ತಿ ತೋರಿಸುತ್ತದೆ.
ದುಬೈ, ಫೆಬ್ರವರಿ 28: ಇರಾನ್ ವಿರುದ್ಧ ಅಮೆರಿಕ ಹಾಗೂ ಇಸ್ರೇಲ್ ಜಂಟಿಯಾಗಿ ಅತಿದೊಡ್ಡ ಕಾರ್ಯಾಚರಣೆಯನ್ನೇ ಆರಂಭಿಸಿದೆ. ಅಮೆರಿಕದ-ಇಸ್ರೇಲ್ ಸೇನೆ ಹಾರಿಸಿದ ಕ್ಷಿಪಣಿ, ಇರಾನ್ ರಾಜಧಾನಿ ಟೆಹರಾನ್ಗೆ ಅಪ್ಪಳಿಸುತ್ತಲೇ ಮಧ್ಯಪ್ರಾಚ್ಯ ತಲ್ಲಣಗೊಂಡಿದೆ. ಸದ್ಯ ಈ ಯುದ್ಧದ ಕನ್ನಡಿಗರಿಗೂ ತಟ್ಟಿದೆ. ಯುದ್ಧ ಹಿನ್ನಲೆ ದುಬೈ ಏರ್‌ಪೋರ್ಟ್‌ನಲ್ಲಿ ವಿಮಾನ ಪ್ರಯಾಣ ಸ್ಥಗಿತವಾಗಿದೆ. ಹೀಗಾಗಿ ಕುಟುಂಬ ಸಮೇತರಾಗಿ ಜೆಡಿಎಸ್ ಪರಿಷತ್ ಸದಸ್ಯ ಭೋಜೇಗೌಡ ದುಬೈ ಏರ್‌ಪೋರ್ಟ್‌ನಲ್ಲಿ ಸಿಲುಕಿಕೊಂಡಿದ್ದಾರೆ. ದುಬೈನಿಂದ ಬೆಂಗಳೂರಿಗೆ ಹೊರಟಿದ್ದರು. ಈ ವೇಳೆ ವಿಮಾನ ಪ್ರಯಾಣ ಸ್ಥಗಿತವಾಗಿವೆ. ಈ ಬಗ್ಗೆ ಭೋಜೇಗೌಡ ಅವರು ವಿಡಿಯೋ ಹಂಚಿಕೊಂಡಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
ಉತ್ತರ ಪ್ರದೇಶ ಕಾಂಗ್ರೆಸ್ ರಾಜ್ಯಾಧ್ಯಕ್ಷ ಅಜಯ್ ರೈ ಮೇಲೆ ಶೂ ಅಟ್ಯಾಕ್
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ಸ್ಟಿಂಗ್ ಆಪರೇಷನ್ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ

