ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ

Updated on: Mar 05, 2026 | 4:52 PM

ಅಮೆರಿಕ-ಇಸ್ರೇಲ್ ನಡುವೆ ಯುದ್ಧ ಹೆಚ್ಚುತ್ತಿರುವಂತೆ ಅಜೆರ್ಬೈಜಾನ್‌ನ ಎಕ್ಸ್‌ಕ್ಲೇವ್‌ನಲ್ಲಿರುವ ವಿಮಾನ ನಿಲ್ದಾಣಕ್ಕೆ ಇರಾನಿನ ಡ್ರೋನ್‌ಗಳು ಡಿಕ್ಕಿ ಹೊಡೆದಿವೆ. ವಿಮಾನ ನಿಲ್ದಾಣ ಮತ್ತು ಶಾಲೆಯ ಬಳಿ ಡ್ರೋನ್ ಡಿಕ್ಕಿಯಾಗಿ ಇಬ್ಬರು ಗಾಯಗೊಂಡಿದ್ದಾರೆ. ಇದಾದ ನಂತರ ಅಜೆರ್ಬೈಜಾನ್ ಇರಾನಿನ ರಾಯಭಾರಿಯನ್ನು ಕರೆಸಿತು. ಈ ಘಟನೆಯಲ್ಲಿ ವಿಮಾನ ನಿಲ್ದಾಣಕ್ಕೆ ಹಾನಿಯಾಗಿದೆ ಮತ್ತು ಇಬ್ಬರು ನಾಗರಿಕರು ಗಾಯಗೊಂಡಿದ್ದಾರೆ.

ಅಜೆರ್ಬೈಜಾನ್, ಮಾರ್ಚ್ 5: ಅಜೆರ್ಬೈಜಾನ್​ ಮೇಲೆ ನಡೆದ ದಾಳಿಯಲ್ಲಿ ಇರಾನ್‌ನ 2 ಡ್ರೋನ್‌ಗಳು (Iran Drone Attack) ಅಜೆರ್ಬೈಜಾನ್‌ನ ವಿಮಾನ ನಿಲ್ದಾಣಕ್ಕೆ ಡಿಕ್ಕಿ ಹೊಡೆದಿವೆ. “ಒಂದು ಡ್ರೋನ್ ನಖಿಚೆವನ್ ವಿಮಾನ ನಿಲ್ದಾಣದ ಟರ್ಮಿನಲ್ ಕಟ್ಟಡದ ಮೇಲೆ ಬಿದ್ದರೆ, ಮತ್ತೊಂದು ಡ್ರೋನ್ ಶೇಕೆರಾಬಾದ್ ಗ್ರಾಮದ ಶಾಲಾ ಕಟ್ಟಡದ ಬಳಿ ಬಿದ್ದಿದೆ” ಎಂದು ಸಚಿವಾಲಯ ತಿಳಿಸಿದೆ. ಈ ಘಟನೆಯಲ್ಲಿ ವಿಮಾನ ನಿಲ್ದಾಣಕ್ಕೆ ಹಾನಿಯಾಗಿದೆ ಮತ್ತು ಇಬ್ಬರು ನಾಗರಿಕರು ಗಾಯಗೊಂಡಿದ್ದಾರೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Loading...
Unable to load recommendations.
Follow Us
ಸುಷ್ಮಾ ಚಕ್ರೆ

ಸುಷ್ಮಾ ಚಕ್ರೆ ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವರು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ ಹೊಂದಿದ್ದಾರೆ.

Read More